ಬೆಂಗಳೂರು
ಬೆಂಗಳೂರಿಗರೇ ನಿಮಗೆ ಫೈನ್ ಫಿಕ್ಸ್.!
![](https://risingkannada.com/wp-content/uploads/2024/03/water-1.jpg)
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ..ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕುಡಿಯುವ ನೀರನ್ನು ಪೋಲು ಮಾಡುವರ ವಿರುದ್ಧ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಮರಸಾರಿದೆ..ಅನ್ಯ ಉದ್ದೇಶಕ್ಕೆ ನೀರು ಬಳಕೆ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ. ಇದನ್ನು ಉಲ್ಲಂಘಿಸಿದರೆ 5000 ದಂಡ ಕಟ್ಟಬೇಕಾಗುತ್ತದೆ.
![](https://risingkannada.com/wp-content/uploads/2024/02/water3.jpg)
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಕಲಂ 33 ಮತ್ತು 34 ರ ಅನುಸಾರ ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು ವಾಹನಗಳ ಸ್ವಚ್ಚತೆಗೆ, ಕೈದೋಟಕ್ಕೆ,ಕಟ್ಟಡ ನಿರ್ಮಾಣಕ್ಕೆ, ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ,ಸಿನಿಮಾ ಮಂದಿರ ಮತ್ತು ಮಾಲುಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರೆ ಬಳಕೆಗೆ,ರಸ್ತೆ ನಿರ್ಮಾಣ ಮತ್ತು ಸ್ವಚ್ಚತೆಗೆ ಬಳಸಲು ಈ ಮೂಲಕ ನೀಷೇದಿಸಲಾಗಿದೆ ಎಂದು ಬಿಡಬ್ಲ್ಯೂಎಸ್ಎಸ್ಬಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?