Featured
ಡ್ರಗ್ಸ್ ದಂಧೆ ಪ್ರಕರಣ: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ಎಫ್ಐಆರ್ ದಾಖಲು

ರೈಸಿಂಗ್ ಕನ್ನಡ :
ಬೆಂಗಳೂರು :
ಡ್ರಗ್ಸ್ ದಂಧೆ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೋರ್ಟ್ ಅನುಮತಿ ಮೇರೆಗೆ ಪೊಲೀಸರು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ಚಾಮರಾಜಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
ಸ್ಯಾಂಡಲ್ವುಡ್ನಲ್ಲಿ ನಡೆದಿದೆ ಎನ್ನಲಾಗುತ್ತಿರುವ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಶ್ರೀಲಂಕಾದ ಕೊಲೊಂಬೊದಲ್ಲಿ ನಡೆದ ಕ್ಯಾಸಿನೊ ಪಾರ್ಟಿಯಲ್ಲಿ ನಟಿ ಸಂಜನಾ ಜೊತೆ ಶಾಸಕ ಜಮೀರ್ ಅಹ್ಮದ್ ಭಾಗವಹಿಸಿದ್ದರು ಎಂದು ಗಂಭೀರ ಆರೋಪ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಶಾಸಕ ಜಮೀರ್ ಅಹ್ಮದ್, ಪ್ರಶಾಂತ್ ಸಂಬರಗಿ ವಿರುದ್ಧ ಚಾಮರಾಜ ಪೇಟೆಯಲ್ಲಿ ದೂರು ದಾಖಲಿಸಿದ್ದರು.ಇದೀಗ ಪೊಲೀಸರು ನ್ಯಾಯಾಲಯದ ಸೂಚನೆಯಂತೆ ಪ್ರಶಾಂತ್ ಸಂಬರಗಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಸಂಬರಗಿ ವಿರುದ್ಧ ಐಪಿಸಿ ಸೆಕ್ಸನ್ 120/B,504, 463, 465,506 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಡ್ರಗ್ ಬಗ್ಗೆ ಮಾತನಾಡಿಲ್ಲ ಕ್ಯಾಸಿನೊ ಬಗ್ಗೆ ಮಾತನಾಡಿದ್ದೇನೆ. ಕ್ಯಾಸಿನೊ ಮತ್ತು ಗ್ಯಾಂಬ್ಲಿಂಗ್ ಬಗ್ಗೆ ಮಾತನಾಡಿದ್ದೇನೆ. ಜಮೀರ್ ಅಣ್ಣನಿಗೆ ನನ್ನ ವಕೀಲರು ಉತ್ತರ ಕೊಡುತ್ತಾರೆ.ಅವರಿಗೆ ಉತ್ತರ ಮತ್ತು ಸಾಮರ್ಥ್ಯವನ್ನ ದೇವರು ನನಗೆ ಕೊಟ್ಟಿದ್ದಾನೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ತಿರುಗೇಟು ಕೊಟ್ಟಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?