Featured
ಆಂಧ್ರದಲ್ಲಿ ಅಗ್ನಿ ಅವಘಡ : ಕೋವಿಡ್ ಕೇರ್ ಖಾಸಗಿ ಹೊಟೇಲ್ನಲ್ಲಿ 7 ಮಂದಿ ಸಾವು

ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್ :
ದೇಶಾದ್ಯಂತ ಅಗ್ನ ಅವಘಢಗಳು ಸಂಭವಿಸುತ್ತಲ್ಲೆ ಇವೆ. ಇದೀಗ ಆಂಧ್ರ ಪ್ರದೇಶದ ವಿಜಯವಾಡದ ಸ್ವರ್ಣ ಪ್ಯಾಲೆಟ್ ಹೋಟೇಲ್ನಲ್ಲಿ ಭಾನುವಾರ ಬೆಳಗಿನ ಜಾವ ಅಗ್ನಿ ದುರಂತ ನಡೆದಿದ್ದು 7 ಮಂದಿ ಬೆಂಕಿಗೆ ಆಹುತಿಯಾಗಿದ್ದಾರೆ.
ಮೊನ್ನೆ ಜು.6ರಂದು ಅಹಮದಾಬಾದ್ನ ಕೋವಿಡ್ ಆಸ್ಪತ್ರೆಯೊಂದರಲ್ಲಿ ಅಗ್ನಿ ಅವಘಢ ಸಂಭವಿಸಿ 8 ಸೋಂಕಿತರು ಪ್ರಾಣ ಕಳೆದುಕೊಂಡಿದ್ದರು.ಇದೀಗ ಈ ಘಟನೆ ನಡೆದ ಬೆನ್ನಲ್ಲೆ ಆಂಧ್ರದಲ್ಲೂ ಅಗ್ನಿ ಅವಘಡ ಸಂಭವಿಸಿ ಆತಂಕ ಹುಟ್ಟಿಸಿದೆ.

ವಿಜಯವಾಡದ ಸ್ವರ್ಣ ಹೋಟೇಲ್ನಲ್ಲಿ 22 ಕೊರೊನಾ ರೋಗಿಗಳಿಗೆ ಇಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬೆಳಗ್ಗೆ 5 ಗಂಟೆಗೆ ಬೆಂಕಿ ದುರಂತ ಸಂಭವಿಸಿದೆ. ಕೂಡಲೇ ಅಗ್ನಿ ಶಾಮಕ ದಳ ಆಗಮಿಸಿ 30 ಮಂದಿಯನ್ನ ರಕ್ಷಿಸಿದ್ದಾರೆ. 7 ಮಂದಿ ಸಾವನಪ್ಪಿದ್ದಾರೆ.
ದುರಂತ ನಡೆದ ನಂತರ ಎಲ್ಲರನ್ನೂ ಸ್ಥಳಾಂತರಿಸಲಾಗಿದೆ. ದುರಂತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಘಟನೆ ಬಗ್ಗೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಮಾಹಿತಿ ಪಡೆದಿದ್ದಾರೆ. ಘಟನೆ ಬಗ್ಗೆ ಕ್ರಮ ಮತ್ತು ಗಾಯಗೊಂಡವರನ್ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವಂತೆ ಸೂಚಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?