Featured
ಅಹಮದಾಬಾದ್ನ ಕೋವಿಡ್ 19 ಆಸ್ಪತ್ರೆಯಲ್ಲಿ ಅಗ್ನಿ ಅವಘಡ : 8 ಸೋಂಕಿತರ ಸಜೀವ ದಹನ : 40 ಮಂದಿ ಸುರಕ್ಷಿತ
ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್ :
ಕೋವಿಡ್ 19 ಆಸ್ಪತ್ರೆಯಲ್ಲಿ ರಾತ್ರಿ ಅಗ್ನಿ ಭಾರೀ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 8 ಮಂದಿ ರೋಗಿಗಳು ಸಾವನಪ್ಪಿದ ಘಟನೆ ಅಹಮದಾಬಾದ್ನ ನವರಂಗಪುರದಲ್ಲಿ ನಡೆದಿದೆ.
ಇಲ್ಲಿನ ಶ್ರೇಯ್ ಆಸ್ಪತ್ರೆಯ ನಾಲ್ಕನೆ ಮಹಡಿಯಲ್ಲಿನ ಇಂಟೆನ್ಸಿವ್ ಕೇರ್ ಯುನಿಟ್ (ಐಸಿಯು)ವಿನಲ್ಲಿ ಅಗ್ನಿ ದುರಂತ ಸಂಭವಿಸಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅಗ್ನಿ ಶಾಮಕ ದಳ ಕಾರ್ಯಾಚರಣೆ ನಡೆಸಿದರು. ಆದರೆ ಬೆಂಕಿಯಲ್ಲಿ ಸಿಲುಕಿದ 8 ಮಂದಿ ಸಜೀವ ದಹನವಾದರು.
40 ರೋಗಿಗಳನ್ನ ಸ್ಥಳಾಂತರ ಮಾಡುವಲ್ಲಿ ಯಶಸ್ವಿಯಾದರು. ಅಗ್ನಿ ದುರಂತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಗುಜರಾತ್ ಸಿ.ಎಂ. ವಿಜಯ್ ರೂಪಾನಿ ತನಿಖೆಗೆ ಆದೇಶಿಸಿದ್ದಾರೆ.
ರಾಜ್ಯ ಗೃಹ ಇಲಾಖೆಯ ಕಾರ್ಯದರ್ಶಿ ಸಂಗೀತಾ ಸಿಂಗ್ ತನಿಖೆಯ ಉಸ್ತುವಾರಿ ಹೊತ್ತಿದ್ದು ಮೂರು ದಿನಗೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಸಿ.ಎಂ ವಿಜಯ್ ರೂಪಾನಿಗೆ ಕರೆ ಮಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಸ್ಥಳಕ್ಕೆ ತನಿಖಾ ತಂಡ ಆಗಮಿಸಿ ತನಿಖೆ ಆರಂಭಿಸಿದೆ. ಕೆಲ ದಿನಗಳ ಹಿಂದೆಯಷ್ಟೆ ಈ ಖಾಸಗಿ ಆಸ್ಪತ್ರೆಯನ್ನ ಕೋವಿಡ್ 19 ಅಸ್ಪತ್ರೆಯಾಗಿ ಬದಲಾಯಿಸಲಾಗಿತ್ತು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?