Featured
ಬಸವ ಸಾಗರ ಜಲಾಶಯ ಭರ್ತಿ- ಕೃಷ್ಣಾ ನದಿಯಲ್ಲಿ ಪ್ರವಾಹ ಭೀತಿ- ಸಂಕಷ್ಟದಲ್ಲಿ ನದಿ ತೀರದ ಜನರು
ರೈಸಿಂಗ್ ಕನ್ನಡ:
ದುರ್ಗೇಶ್ ಮಂಗಿಹಾಳ, ಯಾದಗಿರಿ:
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 45970 ಕ್ಯೂಸೆಕ್ ನೀರನ್ನು ಹರಿ ಬಿಡಲಾಗಿದೆ. ಕೃಷ್ಣಾ ನದಿಯಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಕಳೆದ ಬಾರಿ ಕೃಷ್ಣಾನದಿ ಉಕ್ಕಿ ಹರಿದು ಸಾಕಷ್ಟು ಆಸ್ತಿ ಪಾಸ್ತಿ ನಷ್ಟವಾಗಿತ್ತು. ಈಗ ಮತ್ತೋಮ್ಮೆ ಕೃಷ್ಣೆ ಅಬ್ಬರಿಸುತ್ತಿದ್ದಾಳೆ.
ಜಲಾಶಯದ ಒಟ್ಟು ಸಾಮರ್ಥ್ಯ 33.31 ಟಿಎಂಸಿ ಇದ್ದು, ಈಗ 30.39 ಟಿಎಂಸಿ ಸಂಗ್ರಹವಾಗಿದೆ. ಹೆಚ್ಚುವರಿ ನೀರನ್ನು ಜಲಾಶಯದಿಂದ 7 ಗೇಟ್ ಗಳ ಮೂಲಕ ಕೃಷ್ಣಾ ನದಿಗೆ ಬಿಡಲಾಗಿದೆ. 40,000 ಕ್ಯೂಸೆಕ್ ಒಳ ಹರಿವಿದ್ದು, 45 ಸಾವಿರ ಕ್ಯೂಸೆಕ್ ನೀರನ್ನು ಹೊರಗಡೆ ಬಿಡಲಾಗಿದೆ. ಆದ್ದರಿಂದ ಕೃಷ್ಣ ನದಿ ತೀರದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ನದಿ ತೀರಕ್ಕೆ ತೆರಳದಂತೆ ಕೆಬಿಜೆ ಎನ್ ಎಲ್ ಅಧಿಕಾರಿಗಳು ಜನರಿಗೆ ಸೂಚನೆ ನೀಡಿದ್ದಾರೆ.
ಇನ್ನೂ ಕೃಷ್ಣಾ ನದಿಯಲ್ಲಿ ಪ್ರವಾಹ ವಾದಗಲೆಲ್ಲ ಯಾದಗಿರಿಯಿಂದ-ರಾಯಚೂರಿಗೆ ಸಂಪರ್ಕ ಕಲ್ಪಿಸುವ ಕೊಳ್ಳುರು ಸೇತುವೆ ಮುಳಗಡೆ ಅಗ್ತಿದೆ. ಈಗ ಮತ್ತೊಮ್ಮೆ ಕೃಷ್ಣಾ ನದಿಯಲ್ಲಿ ಪ್ರವಾಹ ಭೀತಿ ಸೃಷ್ಟಿಯಾಗಿದ್ದು, ಕೊಳ್ಳುರು ಸೇತುವೆ ಸಂಪರ್ಕ ಕಡಿತವಾಗುತ್ತಾ ಎನ್ನುವ ಆತಂಕ ಎದುರಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?