Featured
ಮಹಾರಾಷ್ಟ್ರ, ಬೆಳಗಾವಿಯಲ್ಲಿ ಧಾರಾಕಾರ ಮಳೆ- ಬಾಗಲಕೋಟೆಯಲ್ಲಿ ಪ್ರವಾಹ ಭೀತಿ..!, ಉಕ್ಕಿ ಹರಿಯುತ್ತಿದೆ ಘಟಪ್ರಭಾ, ಕೃಷ್ಣಾ ನದಿ..!
ರೈಸಿಂಗ್ ಕನ್ನಡ:
ಮಂಜುನಾಥ ತಳವಾರ, ಬಾಗಲಕೋಟೆ:
ಮಹಾರಾಷ್ಟ್ರ ಹಾಗೂ ಬೆಳಗಾವಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಒಂದು ಕಡೆಯಲ್ಲಿ ಘಟಪ್ರಭಾ ನದಿ ತುಂಬಿ ಹರಿಯುತ್ತಿದೆ. ಇನ್ನೊಂದು ಕಡೆಯಲ್ಲಿ ಕೃಷ್ಣಾನದಿಯೂ ಉಕ್ಕಿ ಹರಿಯುತ್ತಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಘಟಪ್ರಭಾ ನದಿ ಬೆನ್ನಲ್ಲೇ ಈಗ ಕೃಷ್ಣಾ ನದಿಗೂ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.
ಕೃಷ್ಣಾ ನದಿಗೆ ನೀರಿನ ಒಳಹರಿವು ಹೆಚ್ಚಾದ್ದರಿಂದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ತುಬಚಿ-ಝಂಜರವಾಡ ರಸ್ತೆ ಜಲಾವೃತಗೊಂಡಿದೆ. ಇದರಿಂದ ಈ ಎರಡು ಗ್ರಾಮಗಳ ನಡುವಿನ ಸಂಪರ್ಕ ಕಡಿತಗೊಂಡಿದ್ದು ,ಗ್ರಾಮಸ್ಥರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೃಷ್ಞಾ ನದಿಗೆ 1 ಲಕ್ಷದ 47 ಸಾವಿರ ಕ್ಯೂಸೆಕ್ ನೀರು ಹರಿದು ಬರ್ತಾ ಇದೆ. ಹಿಪ್ಪರಗಿ ಜಲಾಶಯದ ಮೂಲಕ ಅಷ್ಟೇ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ. ಕಳೆದ ವರ್ಷವಷ್ಟೇ ಪ್ರವಾಹದಿಂದ ತತ್ತರಿಸಿದ್ದ ಜನರಿಗೆ ಈಗ ಮತ್ತೆ ಪ್ರವಾಹದ ಆತಂಕ ಶುರುವಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?