Featured
ದಾವಣಗೆರೆಯಲ್ಲಿ ಕಾಡು ಪ್ರಾಣಿಗಳ ಹಾವಳಿ: ಲಕ್ಷಂತಾರ ರೂಪಾಯಿ ಬೆಳೆ ನಾಶ
![](https://risingkannada.com/wp-content/uploads/2020/09/davangere-1.jpg)
ರೈಸಿಂಗ್ ಕನ್ನಡ:
ದಾವಣಗೆರೆ :
ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ರಂಗಯ್ಯನ ದುರ್ಗ ವಲಯ ಅರಣ್ಯ ವ್ಯಾಪ್ತಿಯಲ್ಲಿ ಕಾಡು ಪ್ರಾಣಿಗಳ ಅಟ್ಟಹಾಸದಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.
ತಾಲೂಕಿನ ರಂಗಯ್ಯನದುರ್ಗ ಅರಣ್ಯ ವ್ಯಾಪ್ತಿಯಲ್ಲಿ ಬರುವ ಕಣಕುಪ್ಪೆ , ಕೆಳಗೋಟೆ , ಐಯ್ಯನಹಳ್ಳಿ , ಚಿಕ್ಕಬನ್ನಿಹಟ್ಟಿ , ಪೇಟೆ ಬಾಗಿಲು , ಗುಡ್ಡದ ಲಿಂಗನಹಳ್ಳಿ ಸೇರಿದಂತೆ 36ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕರಡಿ ಹಾಗೂ ಕಾಡು ಹಂದಿಗಳು ಹೊಲಗಳಿಗೆ ನುಗ್ಗಿ ಬೆಳೆ ನಾಶ ಪಡಿಸುತ್ತಿವೆ. ಈ ಬಗ್ಗೆ ರೈತರು ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಕ್ಯಾರೆ ಎನ್ನುತ್ತಿಲ್ಲ ಎಂದು ರೈತರು ಆರೊಪಿಸಿದ್ದರೆ.
ಜಾಹೀರಾತು
ಬರಗಾಲದಿಂದ ತತ್ತರಿಸಿರುವ ರೈತರು ಈ ಬಾರಿ ಉತ್ತಮ ಮಳೆಯಿಂದ ಒಳ್ಳೆಯ ಫಸಲು ಬಂದಿದೆ ಎಂಬ ಆಶಾಭಾವನೆ ಹೊಂದಿದ್ದರು. ಆದರೆ ಕರಡಿಗಳು , ಕಾಡು ಹಂದಿಗಳ ಅಟ್ಟಹಾಸದಿಂದ ತಲೆ ಎತ್ತರಕ್ಕೆ ಬೆಳೆದಿದ್ದ ಮೆಕ್ಕೆಜೋಳ ನಾಶ ಮಾಡಿವೆ. ಇದರಿಂದ ರೈತರಿಗೆ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆಗಳನ್ನು ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಾರೆ.
ಇನ್ನೂ ಕರಡಿಗಳು ರೈತರ ಮೇಲೆ ಕೂಡ ದಾಳಿ ಮಾಡುತ್ತಿವೆ. ಇಷ್ಟ್ಯಲ್ಲಾ ಅವಾಂತರಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೆ ಕಾರಣ ಎಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?