Connect with us

Featured

ಕಾದಂಬರಿಗಾರ್ತಿ, ನಾಡೋಜ ಗೀತಾ ನಾಗಭೂಷಣ ಇನ್ನಿಲ್ಲ

ರೈಸಿಂಗ್ ಕನ್ನಡ :

ಕಲಬುರ್ಗಿ :

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ಮಹಿಳಾ ಸಾಹಿತಿ, ‘ಗೀತಾ ನಾಗಭೂಷಣ ನಿಧನರಾಗಿದ್ದಾರೆ. ಗೀತಾ ನಾಗಭೂಷಣ, ಕಲ್ಬುರ್ಗಿ ಜಿಲ್ಲೆಯ ಹಿಂದುಳಿದ ಸಾವಳಗಿ ಎಂಬ ಪುಟ್ಟ ಹಳ್ಳಿಯಲ್ಲಿ ಮಾರ್ಚ್ 25, 1942ರಲ್ಲಿ ಶಾಂತಪ್ಪ, ಶರಣಮ್ಮದಂಪತಿಗಳ ಪ್ರೀತಿಯ ಮಗಳಾಗಿ ಜನಿಸಿದರು. ಮೊಘಲಾಯಿ ಪರಿಸರದ ಪ್ರಮುಖ ಲೇಖಕಿ ಎಂದು ಪ್ರಖ್ಯಾತರಾಗಿರುವ ನಾಡೋಜ ಗೀತಾ ನಾಗಭೂಷಣ, ತಮಗಿದ್ದ ಕಿತ್ತು ತಿನ್ನುವ ಬಡತನ, ಅಸಹಕಾರಕ ಪರಿಸರ, ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸದ ಸಾಮಾಜಿಕ ವ್ಯವಸ್ಥೆ ಇತ್ಯಾದಿಗಳನ್ನೆಲ್ಲಾ ದೃಢಸಂಕಲ್ಪ ಮತ್ತು ಹೋರಾಟದ ಮನೋಭಾವಗಳಿಂದ ದಾಟಿ ತಮ್ಮ ಎಡೆಬಿಡದ ಪರಿಶ್ರಮದಿಂದ ಬಿ.ಎ, ಬಿ.ಎಡ್, ಎಂ.ಎ ಪದವಿಗಳನ್ನು ಗಳಿಸಿ ಬಹುಕಾಲ ಅಧ್ಯಾಪನ ವೃತ್ತಿಯನ್ನೂ ನಡೆಸಿದವರು. ಜೊತೆಗೆ ತಮ್ಮ ಶಿಕ್ಷಕ ವೃತ್ತಿ, ಬರಹ ಪ್ರವೃತ್ತಿ ಮತ್ತು ನಡೆಗಳಿಂದ ಸಮಾಜಕ್ಕೆ ಬೆಳಕು ಕಾಣಿಸುವಲ್ಲಿ ನಿರಂತರ ಪ್ರಯತ್ನಶೀಲರಾದವರು. ಡಾ. ಗೀತಾ ನಾಗಭೂಷಣ ಅವರು ನಾಡೊಜ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ಮಹಿಳಾ ಸಾಹಿತಿ ಕೂಡಾ . ಇವರ ಬದುಕು ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಅಲ್ಲದೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮೊದಲ ಮಹಿಳಾ ಸಾಹಿತಿ ಎಂಬ ಹೆಗ್ಗಳಿಕೆಯೂ ಇವರದೆ. ಹೀಗೆ ಹ್ಯಾಟ್ರಿಕ್ ಮಹಿಳಾ ಸಾಹಿತಿ ಎಂದು ಇವರು ಖ್ಯಾತರಾಗಿದ್ದಾರೆ. ಕೋಲ್ಕತಾದ ಭಾರತೀಯ ಭಾಷಾ ಪರಿಷತ್ ಪ್ರಶಸ್ತಿ ಡಾ. ಗೀತಾ ನಾಗಭೂಷಣ ಅವರಿಗೆ ಲಭಿಸಿದೆ. ಭಾರತೀಯ ಭಾಷಾ ಪರಿಷತ್ ಪ್ರಶಸ್ತಿ ಮೊದಲ ಮಹಿಳಾ ಸಾಹಿತಿ ಕೂಡಾ ಡಾ. ಗೀತಾ ನಾಗಭೂಷಣ ಆಗಿದ್ದಾರೆ.

1968ರ ವರ್ಷದಲ್ಲಿ ಪ್ರಕಟಗೊಂಡ ‘ತಾವರೆಯ ಹೂವು ಕಾದಂಬರಿಯಿಂದ ಮೊದಲುಗೊಂಡು ಇತ್ತೀಚಿನ ‘ಬದುಕು ’ ಕಾದಂಬರಿಯವರೆಗೆ ಇಪ್ಪತ್ತೇಳು ಕಾದಂಬರಿಗಳನ್ನು ಪ್ರಕಟಿಸಿದ್ದಾರೆ. ಅವರ ‘ಬದುಕು’ ಕಾದಂಬರಿಗೆ 2004ರ ವರ್ಷದ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಸಂದಿದೆ. ಗೀತಾ ನಾಗಭೂಷಣರ ‘ಹಸಿಮಾಂಸ ಮತ್ತು ಹದ್ದುಗಳು’ ಎನ್ನುವ ಕಾದಂಬರಿಯು ಹೆಣ್ಣಿನ ಕೂಗು ಎಂಬ ಹೆಸರಿನಲ್ಲಿ ಚಲನಚಿತ್ರವಾಗಿದೆ. ಒಟ್ಟು 27 ಸ್ವತಂತ್ರ ಕಾದಂಬರಿ, 50 ಸಣ್ಣ ಕಥೆಗಳು, ಎರಡು ಸಂಕಲನ, 12 ನಾಟಕಗಳು, ಒಂದು ಸಂಪಾದನಾ ಕೃತಿ, ಒಂದು ಸಂಶೋಧನಾ ಕೃತಿ ಹೀಗೆ ಅವರ ಕನ್ನಡ ಸಾಹಿತ್ಯಕ್ಕೆ ಕೊಡುಗೆ ಹಲವಾರು.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ