Featured
ವಿಜಯಪುರದಲ್ಲಿ ಮಳೆಯ ರೌದ್ರಾವತಾರಕ್ಕೆ ಬಾಲಕಿ ಬಲಿ:12 ಮನೆ ಕುಸಿತ
ರೈಸಿಂಗ್ ಕನ್ನಡ:
ವಿಜಯಪುರ:
ಜಿಲ್ಲೆಯಲ್ಲಿ ಮಳೆಯ ರೌದ್ರಾವತಾರಕ್ಕೆ ಜನ ಜೀವನ ಅಸ್ತವ್ಯಸ್ಥವಾಗಿದ್ದು, ಹಲವೆಡೆ ಮನೆಗಳು ಕುಸಿದು ಪ್ರಾಣ ಹಾನಿಯಾಗಿವೆ.
ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಡೊಂಕಮಡು ಗ್ರಾಮದಲ್ಲಿ ಮನೆಯ ಮೆಲ್ಚಾವಣಿ ಕುಸಿದು 11 ವರ್ಷದ ಮರೆವ್ವ ಹುಲಗಪ್ಪ ಬಿಜ್ಜೂರ್ ಬಾಲಕಿ ಸಾವನಪ್ಪಿದ್ದು, ಘಟನೆಯಲ್ಲಿ ರೇಖಾ ಲೋಟಗೇರಿ ಎಂಬ ಬಾಲಕಿಗೆ ತಲೆ, ಕಾಲಿಗೆ ಗಂಭೀರ ಪೆಟ್ಟಾಗಿದೆ. ಇದಲ್ಲದೆ ಮುದ್ದೇಬಿಹಾಳ ತಾಲೂಕಿನ ಚವನಬಾವಿ ಗ್ರಾಮದಲ್ಲಿ 12 ಮನೆಗಳು ಕುಸಿಯುವ ಹಂತಕ್ಕೆ ಬಂದಿದ್ದು, ಸತತ ಮಳೆಯಿಂದ ನೆನೆದ ಗೋಡೆಗಳಲ್ಲಿ ಬಿರುಕು ಕಾಣಿಕೊಂಡಿದೆ.
ಇದರಿಂದಾಗಿ ಚವನಬಾಗಿ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಒಟ್ಟು 135ಕ್ಕೂ ಅಧಿಕ ಮನೆಗಳು ಕುಸಿದು ಬಿದ್ದಿವೆ. 4 ಜಾನುವಾರುಗಳು ಸಾವಿಗೀಡಾಗಿವೆ.
ಜಾಹೀರಾತು
ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ 1 ಎತ್ತು, 2 ಕುರಿ ಸಾವಿಗೀಡಾಗಿದ್ದು, 33 ಮನೆಗಳು ಭಾಗಶಃ ಹಾನಿಗೀಡಾಗಿವೆ. ಮುದ್ದೇಬಿಹಾಳ ತಾಲೂಕಿನಲ್ಲಿ 1 ಆಡು ಸಾವಿನಪ್ಪಿದ್ದು, 21 ಮನೆಗಳು ಭಾಗಶಃ ಹಾನಿಗೊಳಗಾಗಿವೆ.
ವಿಜಯಪುರ, ಬಬಲೇಶ್ವರ, ತಿಕೋಟಾ ಮತ್ತು ಬಸವನ ಬಾಗೇವಾಡಿ ತಾಲೂಕುಗಳಲ್ಲಿ ತಲಾ 2, ನಿಡಗುಂದಿ ತಾಲೂಕಿನಲ್ಲಿ 21, ಕೊಲ್ಹಾರ ಮತ್ತು ತಾಳಿಕೋಟೆ ತಾಲೂಕುಗಳಲ್ಲಿ ತಲಾ 10, ಇಂಡಿ ತಾಲೂಕಿನಲ್ಲಿ 11 ಮತ್ತು ದೇವರ ಹಿಪ್ಪರಗಿ ತಾಲೂಕಿನಲ್ಲಿ 16 ಮನೆಗಳು ಭಾಗಶಃ ಹಾನಿಗೀಡಾಗಿವೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?