ರಾಜಕೀಯ
ಚಿಕ್ಕಬಳ್ಳಾಪುರಕ್ಕೆ ನನಗೇ ಟಿಕೆಟ್ ಕೊಡಿ: ವಿಶ್ವನಾಥ್ ಪಟ್ಟು

ಯಲಹಂಕ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ನಾನೇ ಸ್ಪರ್ಧಿಸುವುದಾಗಿ ಯಲಹಂಕ ಶಾಸಕ ಎಸ್. ಆರ್. ವಿಶ್ವನಾಥ್ ಘೋಷಿಸಿದ್ದಾರೆ. ವಿದ್ಯಾವಂತರಾಗಿರುವ ತಮ್ಮ ಪುತ್ರ ಅಲೋಕ್ ವಿಶ್ವನಾಥ್ ಅವರ ಬಗ್ಗೆ ಕ್ಷೇತ್ರದಲ್ಲಿ ಒಲವು ಇದೆ ಎಂಬುದನ್ನು ಸಮೀಕ್ಷೆಗಳು ತಿಳಿಸಿವೆ.
ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಒಂದು ಸುತ್ತಿನ ಪ್ರವಾಸವನ್ನೂ ಮಾಡಿ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ಮಾಡಲಾಗಿದೆ ಎಂದರು. ನಾನು ಪಕ್ಷದ ನಿಷ್ಠ ನಾಗಿರುವ ಶಿಸ್ತಿನ ಸಿಪಾಯಿ. ನನಗೆ ಚಮಚಾಗಿರಿ ಮಾಡಿ ಗೊತ್ತಿಲ್ಲ, ಲಾಬಿಯನ್ನೂ ಮಾಡುವುದಿಲ್ಲ.
ಸಮೀಕ್ಷೆಯ ವಾಸ್ತವಾಂಶವನ್ನು ವರಿಷ್ಠರಿಗೆ ತಿಳಿಸಿದ್ದೇನೆ ಎಂದರು. ಒಂದು ವೇಳೆ ಅಲೋಕ್ ವಿಶ್ವನಾಥ್ ಗೆ ಟಿಕೆಟ್ ನೀಡದಿದ್ದರೆ ನಾನೇ ಅಭ್ಯರ್ಥಿ ಆಗುತ್ತೇನೆ. ನನಗೇ ಟಿಕೆಟ್ ನೀಡುವಂತೆ ಪಕ್ಷದ ರಾಜ್ಯಾಧ್ಯಕ್ಷರಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದರು.
ಬಿಜೆಪಿಯ ಭದ್ರಕೋಟೆ ಆಗಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಕೈ ತಪ್ಪಬಾರದು ಎಂಬ ಕಾರಣಕ್ಕೆ ನಾನೇ ಅಭ್ಯರ್ಥಿಯಾಗಲು ನಿರ್ಧರಿಸಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?