ಬೆಂಗಳೂರು
ಶಿವರಾತ್ರಿ ಹಬ್ಬ’ಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್: ‘KSRTC’ಯಿಂದ ‘1,500 ಹೆಚ್ಚುವರಿ ವಿಶೇಷ ಬಸ್’ ವ್ಯವಸ್ಥೆ

ಬೆಂಗಳೂರು: ಶಿವರಾತ್ರಿ ಹಬ್ಬದಂದು ಊರಿಗೆ ತೆರಳುವಂತ ಸಾರಿಗೆ ಬಸ್ ಪ್ರಯಾಣಿಕರಿಗೆ ಕೆ ಎಸ್ ಆರ್ ಟಿಸಿಯಿಂದ ಗುಡ್ ನ್ಯೂಸ್ ನೀಡಲಾಗಿದೆ. ಅದೇ 1,500 ಹೆಚ್ಚುವರಿ ವಿಶೇಷ ಬಸ್ ಸಂಚಾರದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ KSRTCಯು, ದಿನಾಂಕ 08.03.2024 ರಂದು ಮಹಾಶಿವರಾತ್ರಿ ಹಾಗೂ ದಿನಾಂಕ:09.03.2024 ಮತ್ತು 10.03.2024 ವಾರಾಂತ್ಯ ದಿನಗಳಾಗಿರುವುದರಿಂದ ಕರಾರಸಾ ನಿಗಮ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 07.03.2024 ರಿಂದ 10.03.2024 ರವರೆಗೆ ಬೆಂಗಳೂರಿನಿAದ ಈ ಕೆಳಕಂಡ ಸ್ಥಳಗಳಿಗೆ 1500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ.
ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ: 10.03.2024 ಹಾಗೂ 11.03.2024 ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದಿದೆ.
• ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ. ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ.
• ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣA, ಚೆನ್ನೆöÊ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
• ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.
• ಕರ್ನಾಟಕ ಹಾಗೂ ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟç ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.
• ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.
• ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ತಿಳಿಸಿದೆ.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















