ದೇಶ-ವಿದೇಶ
ದೇಶದ ಜನತೆಗೆ ಗುಡ್ನ್ಯೂಸ್ ! ಪೆಟ್ರೋಲ್-ಡೀಸೆಲ್ ಬೆಲೆ ಇಳಿಸಿದ ಮೋದಿ ಸರ್ಕಾರ

ದೆಹಲಿ : ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಗೂ ಮುನ್ನವೇ ಕೇಂದ್ರ ಸರ್ಕಾರ ದೇಶದ ಜನತೆಗೆ ಶುಭ ಸುದ್ದಿ ನೀಡಿದೆ. ಶತಕ ದಾಟಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆ ಮಾಡಿದೆ. ಇದರಿಂದ ಎಷ್ಟೋ ಮಂದಿಗೆ ನೆಮ್ಮದಿ ಸಿಗಲಿದೆ ಎನ್ನಬಹುದು.
ದೇಶದಲ್ಲಿ ಹಿಂದಿನಿಂದಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿದೆ. ಇಂಧನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾದರೂ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಈಗ ಮೋದಿ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಿದೆ.
ಗುರುವಾರ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 2 ರೂ ಇಳಿಕೆ ಮಾಡಿರುವುದಾಗಿ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಘೋಷಣೆ ಮಾಡಿದ್ದಾರೆ. ಇದರಿಂದ ರಸ್ತೆ ಸಂಚಾರ ಮಾಡುವವರಿಗೆ ಭಾರೀ ನೆಮ್ಮದಿ ಸಿಗಲಿದೆ.
ದೇಶದಲ್ಲಿ ಕೊನೆಯ ಇಂಧನ ದರಗಳು ಮೇ 2022 ರಲ್ಲಿ ಬದಲಾಗಿತ್ತು. ಆದರೆ ಅಂದಿನಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿತ್ತು. ಆ ಸಮಯದಲ್ಲಿ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 140 ಡಾಲರ್‌ಗಳಷ್ಟಿತ್ತು. ಆದರೆ ಈಗ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 80 ಡಾಲರ್‌ಗಳ ಆಸುಪಾಸಿನಲ್ಲಿದೆ.
ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಮತ್ತು ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‌ಜಿ) ಬೆಲೆಗಳಲ್ಲಿ ಇಳಿಕೆ ಮಾಡಲಾಗಿತ್ತು. ಮುಂಬರುವ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಬಹುದು ಎಂಬ ಊಹಾಪೋಹಗಳಿದ್ದವು. ಇದೀಗ ನಿಜವಾಗಿದೆ.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಅಡುಗೆ ಅನಿಲದ ಬೆಲೆಯಲ್ಲಿ ಪ್ರತಿ ಸಿಲಿಂಡರ್‌ಗೆ 100 ರೂಪಾಯಿ ಕಡಿತಗೊಳಿಸುವುದಾಗಿ ಘೋಷಿಸಿದ್ದರು. ಇದರಿಂದ ಎಲ್‌ಪಿಜಿ ಅಡುಗೆ ಇಂಧನವಾಗಿ ಬಳಸುವ ಸುಮಾರು 33 ಕೋಟಿ ಕುಟುಂಬಗಳಿಗೆ ಪ್ರಯೋಜನವಾಗಲಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?