Featured
ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ಜವಾಬ್ದಾರಿ, ಸ್ಥಳೀಯ ಕಾರ್ಪೋರೇಟರ್‌ಗಳದ್ದು – ಸಚಿವ ಆರ್.ಅಶೋಕ್ ಆದೇಶ
![](https://risingkannada.com/wp-content/uploads/2020/07/14BGASHOK.jpg)
ರೈಸಿಂಗ್ ಕನ್ನಡ :
ಬೆಂಗಳೂರು :
ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಗೌರವಯುತವಾಗಿ ಆಗಬೇಕು ಎಂದು ಸರ್ಕಾರ ನಿರ್ಧರಿಸಿದೆ. ಅಂತ್ಯ ಸಂಸ್ಕಾರದಲ್ಲಿ ಬೇಜವಾಬ್ದಾರಿ ಮೆರೆದ ಕೆಲ ಪ್ರಕರಣಗಳು ರಾಜ್ಯದಲ್ಲಿ ಕಾಣಿಸಿಕೊಂಡಿದ್ದರಿಂದ, ಸರ್ಕಾರ ಅಂತ್ಯಸಂಸ್ಕಾರಕ್ಕೆ ಹೊಸ ರೀತಿಯ ಕ್ರಮಕೊಂಡಿದೆ. ಅಂತ್ಯಸಂಸ್ಕಾರದ ಸಂಪೂರ್ಣ ಜವಾಬ್ದಾರಿಯನ್ನ ಸ್ಥಳೀಯ ಕಾರ್ಪೊರೇಟರ್‌ಗಳು ವಹಿಸಿಕೊಳ್ಳಬೇಕು ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಪ್ರತೀ ವಾರ್ಡ್‌ನಲ್ಲಿ ಆಟೋ ಪ್ರಚಾರ ಮಾಡಬೇಕು. ಕೊರೊನಾ ಬಗ್ಗೆ ಆತಂಕ ಬೇಡ, ಜಾಗೃತಿ ಇರಲಿ ಅನ್ನೋ ಸಂದೇಶ ನೀಡಬೇಕು ಎಂದಿದ್ದಾರೆ ಸಚಿವ ಆರ್. ಅಶೋಕ್.
ಕಾರ್ಪೋರೇಟರ್‌ಗಳು ಈ ವಿಚಾರದಲ್ಲಿ ಪಕ್ಷಾತೀತವಾಗಿ ಕಾರ್ಯನಿರ್ವಹಿಸಬೇಕು, ಚುನಾವಣೆ ಸಂದರ್ಭದಲ್ಲಿ ತೋರೋ ಮುತುವರ್ಜಿಯನ್ನ ಈಗಲೂ ಪ್ರದರ್ಶಿಸಬೇಕು ಎಂದಿದ್ದಾರೆ. ಖಾಸಗಿ ಆಸ್ಪತ್ರೆ ಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡದಿದ್ದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಸಹ ಸಚಿವರು ಎಚ್ಚರಿಕೆ ನೀಡಿದ್ದಾರೆ. ಇನ್ನೂ ಖಾಸಗಿ ಆಸ್ಪತ್ರೆಗಳಲ್ಲಿ ಬಾಂಡ್ ಬರೆಸಿಕೊಳ್ಳುವ ವಿಚಾರವಾಗಿ ಸರ್ಕಾರದಿಂದ ಯಾವುದೇ ರೀತಿಯ ಸೂಚನ್ನೆಯನ್ನ ಇನ್ನೂ ಕೂಡ ನೀಡಿಲ್ಲ, ಒಂದು ವೇಳೆ ಬಾಂಡ್‌ಗೆ ಸಹಿ ಮಾಡಿಸಿಕೊಂಡ್ರೆ ಅಂತಹ ಆಸ್ಪತ್ರೆಯ ವಿರುದ್ದ ಕ್ರಿಮಿನಲ್ ಕೇಸ್ ಹಾಕಲಾಗುತ್ತದೆ ಎಂದಿದ್ದಾರೆ.
ಇನ್ನೂ ಶನಿವಾರ ಮತ್ತು ಭಾನುವಾರ ಎರಡೂ ದಿನ ಲಾಕ್‌ಡೌನ್ ಮಾಡುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚೆಸಿ ನಂತರದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?