Featured
ಕೊರೊನಾ ಮಹಾಮಾರಿಗೆ ಹಬ್ಬಗಳು ಬಲಿ..? ಗಣೇಶೋತ್ಸವ, ಶ್ರೀಕೃಷ್ಣಜನ್ಮಾಷ್ಟಮಿಗೆ ಸರ್ಕಾರದಿಂದಲೇ ಬ್ರೇಕ್..?

ರೈಸಿಂಗ್ ಕನ್ನಡ:
ಬೆಂಗಳೂರು:
ಶ್ರೀಕೃಷ್ಣ ಜನ್ಮಾಷ್ಟಮಿ, ಗಣೇಶ ಹಬ್ಬ ಆಚರಣೆ ರಾಜ್ಯದಲ್ಲಿ ಅವಕಾಶ ಇದೆಯಾ..? ಸದ್ಯದ ಪರಿಸ್ಥಿತಿಯಲ್ಲಿ ಯಾವ ಹಬ್ಬಕ್ಕೂ ಅವಕಾಶ ಇಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ಹಬ್ಬಗಳ ಸಾಮೂಹಿಕ ಆಚರಣೆಗಳಿಗೆ ಅವಕಾಶ ನೀಡಬೇಕಾ ಬೇಡ್ವಾ ಅನ್ನುವ ಚರ್ಚೆ ನಡೆಯುತ್ತಿದೆ. ಈ ಬಾರಿ ಆಗಸ್ಟ್ 11ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವಿದ್ದರೆ, ಆಗಸ್ಟ್ 22ರಂದು ಗಣೇಶ ಹಬ್ಬವಿದೆ.
ಹಿಂದು ಸಂಸ್ಕೃತಿಯಲ್ಲಿ ಈ ಹಬ್ಬಗಳ ಆಚರಣೆಯನ್ನು ಅದ್ದೂರಿಯಾಗಿ ಮಾಡಲಾಗುತ್ತದೆ. ಕರ್ನಾಟಕದ ಗಲ್ಲಿ ಗಲ್ಲಿಗಳಲ್ಲಿ ಗಣೇಶ ಹಬ್ಬ ಮತ್ತು ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದೆ. ಆದರೆ ಈ ಬಾರಿ ಇದಕ್ಕೆ ಅವಕಾಶ ಸಿಗುವುದು ಕಷ್ಟ. ಸೋಷಿಯಲ್ ಡಿಸ್ಟಾನ್ಸ್ ಮೈಂಟೇನ್ ಮಾಡಬೇಕಿರುವುದರಿಂದ ಈ ಹಬ್ಬಗಳ ಆಚರಣೆ ಸಾಮೂಹಿವಾಗಿ ನಡೆಸಲು ಅನುಮತಿ ಸಿಗುವುದು ಅನುಮಾನ ಎಂದು ತೋರುತ್ತಿದೆ. ಮಹಾರಾಷ್ಟ್ರ ಸರಕಾರ ಈಗಾಗಲೇ ಎಲ್ಲಾ ಹಬ್ಬಗಳನ್ನು ಸಾಮೂಹಿಕ ಆಚರಣೆ ಮಾಡುವುದನ್ನು ನಿಷೇಧಿಸಿದೆ.
ಸಾಮಾನ್ಯವಾಗಿ ಮಹಾರಾಷ್ಟ್ರದಲ್ಲಿ ಗಣೇಶ ಚತುರ್ಥಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತದೆ. ಆದರೆ ಈ ವರ್ಷ ಮಹಾರಾಷ್ಟ್ರದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶವಿಲ್ಲ ಎಂದು ಸರಕಾರವೇ ಹೇಳಿದೆ. ಇನ್ನು ದಸರಾ ಆಚರಣೆಯನ್ನೂ ಸಿಂಪಲ್ ಆಗಿ ಮಾಡಲು ನಿರ್ಧರಿಸಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?