ರೈಸಿಂಗ್ ಕನ್ನಡ:
ಬೆಂಗಳೂರು:
ಕೊರೊನಾ ಈಗ ರಾಜಕಾರಣಿಗಳಿಗೆ ಕಾಟ ಕೊಡುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಬಿ.ಸಿ.ಪಾಟೀಲ್ ಸೇರಿ ಅನೇಕ ಶಾಸಕರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾಗೂ ಕೊರೊನಾ ಕಾಟ ಕೊಟ್ಟಿತ್ತು. ಈಗ ಕರ್ನಾಟಕ ಸರ್ಕಾರದ ಆರೋಗ್ಯ ಸಚಿವ ಬಿ. ಶ್ರೀರಾಮುಲುಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ.
ಟ್ವೀಟ್ ಮೂಲಕ ಶ್ರೀರಾಮುಲು ಕೊರೊನಾ ಸೋಂಕು ತಗುಲಿರುವುದನ್ನು ಖಚಿತಪಡಿಸಿದ್ದಾರೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಸಚಿವರು ಹೇಳಿಕೊಂಡಿದ್ದಾರೆ.
ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿ ಸರಕಾರದ ಎಲ್ಲಾ ಇಲಾಖೆಗಳು ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ ಎಂದು ಹೇಳಿದ
ಆರೋಗ್ಯ ಸಚಿವರು ಬೆಂಗಳೂರಿನ ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಬಂದು ಸರಕಾರಿ ಆಸ್ಪತ್ರೆಗೆ ದಾಖಲಾದ ಮೊದಲ ರಾಜಕಾರಣಿ ಶ್ರೀರಾಮುಲು ಅನ್ನುವುದು ವಿಶೇಷ.
ಹರಾಜಿಗೂ ಮುನ್ನ ಸ್ಟಾರ್ ಕನ್ನಡಿಗರನ್ನ ಕೈಬಿಡಲು ಮುಂದಾದ ಕಿಂಗ್ಸ್ ಇಲೆವೆನ್ ಪಂಜಾಬ್..?
ದಾವಣಗೆರೆಯಲ್ಲಿ ಕೊರೊನಾ ಸೋಂಕಿಗೆ ಅಂಬ್ಯುಲೆನ್ಸ್ ಚಾಲಕ ಬಲಿ
ಭಾರತದಲ್ಲಿ 34 ಲಕ್ಷ ದಾಟಿದ ಕೊರೊನಾ ಕೇಸ್: 24 ಗಂಟೆಯಲ್ಲಿ 1,021 ಸಾವು
ವಿಶ್ವವಿದ್ಯಾಲಯಗಳು ಪರೀಕ್ಷೆ ನಡೆಸಬೇಕು- ಯುಜಿಸಿ ಸುತ್ತೋಲೆಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್
ಮೈದಾನಕ್ಕಿಳಿದ ರೆಡ್ ಆರ್ಮಿ: ಬ್ಲೂಪ್ರಿಂಟ್ ರೆಡಿ ಮಾಡಿದ ತ್ರಿಮೂರ್ತಿಗಳು…!
ಯಾದಗಿರಿಯಲ್ಲಿ ದಿಢೀರ್ರಾಗಿ ಜಿಲ್ಲಾಧಿಕಾರಿ ವರ್ಗಾವಣೆ: ನೂತನ ಜಿಲ್ಲಾಧಿಕಾರಿ ಡಾ. ರಾಗಾಪ್ರಿಯಾ ಅಧಿಕಾರ ಸ್ವೀಕಾರ