ರೈಸಿಂಗ್ ಕನ್ನಡ :
ಮಡಿಕೇರಿ :
ಕೊಡಗಿನಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ವರುಣನ ರುದ್ರನರ್ತನ ಜೋರಾಗಿದ್ದು, ಜಿಲ್ಲೆಯ ವಿವಿಧೆಡೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಹಲವೆಡೆಗಳಲ್ಲಿ ನೀರು ನಿಂತು ಜನ, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮ ತುಂಬಿ ಹರಿಯುತ್ತಿದೆ. ಕಾವೇರಿ ನದಿ ಕೂಡಿಗೆ ಬಳಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿ ಪಾತ್ರದ ಜನರನ್ನ ಬೋಟ್ಗಳ ಮೂಲಕ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದೆ.
ಇನ್ನೊಂದೆಡೆ ಹಾಸನ ಜಿಲ್ಲೆಯ ಹೇಮಾವತಿ ನದಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಎಂದು ಕೇಂದ್ರ ಜಲ ಆಯೋಗ ಎಚ್ಚರಿಕೆ ನೀಡಿದೆ. ಕೊಡಗು ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿದ ಅಪಾಯದ ಮುನ್ಸೂಚನೆಯು ದೊರೆತಿದ್ದು, ಹಾನಿ ಉಂಟಾಗುವ ಮುನ್ನವೇ ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ಬೆಳಗಾವಿ, ಬೀದರ್, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮತ್ತೊಂದೆಡೆ, ಇದೇ ತಿಂಗಳ ೧೦ ರವರೆಗೆ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿರೋದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?