Featured
ಮಹಾರಾಷ್ಟ್ರದಲ್ಲಿ ಭಾರೀ ಮಳೆ ಹಿನ್ನಲೆ – ಚಿಕ್ಕೋಡಿಯಲ್ಲಿ ಪ್ರವಾಹ ಪರಿಸ್ಥಿತಿ – ಸುರಕ್ಷಿತವಾಗಿರಲು ಪೊಲೀಸರಿಂದ ಮನವಿ
ರೈಸಿಂಗ್ ಕನ್ನಡ :
ಬೆಳಗಾವಿ :
ಚಿಕ್ಕೋಡಿ ಉಪವಿಭಾಗದಲ್ಲಿ ಈಗಾಗಲೇ ಪ್ರವಾಹ ಪರಸ್ಥಿತಿ ಎದುರಾಗಿದ್ದು, ಮುಂಜಾಗೃತ ಕ್ರಮವಾಗಿ ಕಾಗವಾಡ ತಾಲೂಕಿನ ನದಿ ತೀರದ ಗ್ರಾಮಗಳ ಜನರಿಗೆ ಸುರಕ್ಷಿತವಾಗಿರಲು ಎಚ್ಚರಿಕೆ ನೀಡಲಾಗಿದೆ.
ಕಾಗವಾಡ ಪಿಎಸ್ಐ ಹಣಮಂತ ಧರ್ಮಟ್ಟಿ ಪ್ರವಾಹ ಪರಿಸ್ಥಿತಿ ಕುರಿತು, ಜನರಿಗೆ ಮುನ್ಸೂಚನೆ ನೀಡಿದರು.
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜೂಗಳ ಗ್ರಾಮದ ಜನರಿಗೆ ಮುನ್ಸೂಚನೆ ನೀಡಿದ ಪೊಲೀಸ್ ಅಧಿಕಾರಿ, ಈಗಾಗಲೇ ಕೃಷ್ಣಾ, ವೇದಗಂಗಾ ಹಾಗೂ ದೂಧಗಂಗಾ ನದಿಗಳ ನೀರಿನ ಹರಿವಿನಲ್ಲಿ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿನ ಮಳೆಯಿಂದಾಗಿ ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡುತ್ತಿದ್ದಾರೆ. ಇದರಿಂದ ಕೃಷ್ಣಾ ನದಿ ಒಳ ಹರಿವು ಹೆಚ್ಚಾಗುತ್ತಿದ್ದು, ಮುಂಜಾಗೃತಾ ಕ್ರಮವಾಗಿ ತಾವು ಹಾಗೂ ದನಕರುಗಳು ಸುರಕ್ಷಿತ ಸ್ಥಳಕ್ಕೆ ತೆರಳುವುದು ಒಳಿತು ಎಂದು ಮನವಿ ಮಾಡಿದ್ದಾರೆ.
ಇನ್ನೂ ಯಾವ ಸಮಯದಲ್ಲಾದರೂ ನದಿ ನೀರು ಹೆಚ್ಚಾಗಬಹುದು. ಅದಕ್ಕಾಗಿ ಎಚ್ಚರಿಕೆಯಿಂದಿರಿ. 2,50,000 ಕ್ಯೂಸೆಕ್ ನೀರು ಬಂದರೆ ಜೂಗಳ, ಮಂಗಾವತಿ, ಶಹಾಪೂರ ಗ್ರಾಮದ ಜನರಿಗೆ ಪ್ರವಾಹ ಭೀತಿ ಎದುರಾಗಬಹುದು ಎಂದು ತಿಳಿಹೇಳಿದ್ದಾರೆ.
ಈಗಾಗಲೇ ದಿನದಿಂದ ದಿನಕ್ಕೆ ನದಿ ನೀರು ಹೆಚ್ಚಾಗುತ್ತಿದ್ದು, ದಯಮಾಡಿ ಜಾನುವಾರುಗಳೊಂದಿಗೆ ಸುರಕ್ಷಿತ ಜಾಗಕ್ಕೆ ಸ್ಥಳಾಂತರವಾಗಿ ಎಂದು ಗ್ರಾಮಸ್ಥರಲ್ಲಿ ಮನವಿ ಮಾಡಿಕೊಂಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?