Featured
ಕೊಡಗಿನಲ್ಲಿ ಭಾರೀ ಮಳೆ – ತಲಕಾವೇರಿಯಲ್ಲಿ ಅರ್ಚಕರ ಮನೆ ಕುಸಿತ..!
![](https://risingkannada.com/wp-content/uploads/2020/08/WhatsApp-Image-2020-08-06-at-11.24.56-AM.jpeg)
ರೈಸಿಂಗ್ ಕನ್ನಡ :
ಮಡಿಕೇರಿ :
ಕೊಡಗಿನಲ್ಲಿ ವರುಣನ ಆರ್ಭಟ ಜೋರಾಗಿದೆ. ಜಿಲ್ಲೆಯ ಭಾಗಮಂಡಲ ವ್ಯಾಪ್ತಿಯ ತಲಕಾವೇರಿಯಲ್ಲಿ ಬುಧವಾರ ರಾತ್ರಿ ಭಾರೀ ಮಳೆಯಾಗಿದೆ. ಪರಿಣಾಮ ಬ್ರಹ್ಮಗಿರಿ ಬೆಟ್ಟದ ಒಂದು ಭಾಗ ಜರಿದು ತಲಾಕಾವೇರಿಯ ದೇವಸ್ಥಾನದ ಅರ್ಚಕರುಗಳ ಎರಡು ಮನೆಗೆ ಭಾರೀ ಹಾನಿಯಾಗಿದೆ.
ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ತಂಡದ ತಕ್ಷಣ ಕಾರ್ಯಾಚರಣೆ ತಂಡ, ಸ್ಥಳಕ್ಕೆ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ,
ಎರಡು ಮನೆಗಳ ಪೈಕಿ ಒಬ್ಬರು ಅರ್ಚಕರ ಮನೆ ಖಾಲಿ ಇತ್ತು ಎನ್ನಲಾಗಿದೆ. ಆ ಅರ್ಚಕರು, ಹೊಸ ಮನೆ ನಿರ್ಮಿಸಿಕೊಂಡು ಕುಟುಂಬದೊಂದಿಗೆ ಭಾಗಮಂಡಲಲ್ಲಿ ನೆಲೆಸಿದ್ದಾರಂತೆ.
ಆದ್ರೆ ಮತ್ತೊಬ್ಬ ಅರ್ಚಕರು, ತಲಕಾವೇರಿಯಲ್ಲೇ ಮನೆಯಲ್ಲೇ ಇದ್ದು, ನಾಲ್ಕು ಜನ ಕಾಣೆಯಾಗಿರುವ ಮಾಹಿತಿಯೂ ಲಭ್ಯವಾಗಿದೆ. ಸಂಪೂರ್ಣ ಪರಿಶೀಲನೆ ನಂತರ ಹೆಚ್ಚಿನ ಮಾಹಿತಿಯನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ತಿಳಿಸಿದ್ದಾರೆ.
![](https://risingkannada.com/wp-content/uploads/2020/08/WhatsApp-Image-2020-08-06-at-11.25.30-AM-1024x667.jpeg)
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?