Featured
ಲಾಕ್‌ಡೌನ್ ಭಯ..! – ಬೆಂಗಳೂರು ಬಿಡುತ್ತಿರೋ ಜನ – ಸಿಟಿ ಒಳಗೆ ಖಾಲಿ ಖಾಲಿ – ಹೊರಗಡೆ ಟ್ರಾಫಿಕ್ ಜಾಮ್..!
ರೈಸಿಂಗ್ ಕನ್ನಡ :
ಬೆಂಗಳೂರು :
ಒಂದೆಡೆ ಶರವೇಗದಲ್ಲಿ ಏರುತ್ತಿರೋ ಕೊರೊನಾ ಕೇಸ್‌ಗಳು. ಮತ್ತೊಂದೆಡೆ ಲಾಕ್‌ಡೌನ್ ಮತ್ತೆ ಜಾರಿಯಾಗುತ್ತಾ ಅನ್ನೋ ಭೀತಿ. ಎಲ್ಲಕ್ಕಿಂತ ಹೆಚ್ಚಾಗಿ ಭಾನುವಾರ ಸಂಪೂರ್ಣ ಸ್ತಬ್ಧವಾಗಲಿದೆ ಬೆಂಗಳೂರು ಅನ್ನೋ ಕಾತರಿ. ಈ ಎಲ್ಲಾ ಅಂಶಗಳಿಂದಾಗಿ, ಬೇರೆ ಬೇರೆ ಊರುಗಳ ಜನ ಬೆಂಗಳೂರು ಬಿಡುತ್ತಿದ್ದಾರೆ.
ಪರಿಣಾಮ ರಾಷ್ಟ್ರೀಯ ಹೆರದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ನಗರವನ್ನ ಸೇರುವ ಎಲ್ಲಾ ರಸ್ತೆಗಳಲ್ಲೂ ಸಂಚಾರ ದಟ್ಟಣೆ ಉಂಟಾಗಿದೆ. ದಿನ ಕಳೆದಂತೆ ಬೆಂಗಳೂರಿನಲ್ಲೇ ಸಾವಿರ ಪ್ರಕರಣಗಳು ಬರುತ್ತಿರೋದ್ರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಜನರು, ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ.
ಅನೇಕರು ಮನೆ ಖಾಲಿ ಮಾಡಿಕೊಂಡು ತಮ್ಮ ಊರುಗಳತ್ತ ವಾಪಾಸು ತೆರಳುತ್ತಿದ್ದಾರೆ. ಟಾಟಾ ಏಸ್, ಕ್ಯಾಂಟ್ರೋ ವಾಹನಗಳಲ್ಲಿ ಜನರು ಬೆಂಗಳೂರು ತೊರೆಯುತ್ತಿದ್ದಾರೆ. ಅಚ್ಚರಿ ಎಂದರೆ, ಕೆಲವರು ಪಾತ್ರೆ ಪಗಡೆಗಳು, ಮನೆಯ ಗೃಹಪಯೋಗಿ ಸಾಮಾಗ್ರಿಗಳನ್ನು ತುಂಬಿಕೊಂಡು ಹೋಗುತ್ತಿದ್ದಾರೆ.
ರಾಜಧಾನಿಯಲ್ಲಿ ಕೊರೋನಾ ಸಮುದಾಯಕ್ಕೆ ಹರಡುತ್ತಿದೆ ಎಂದು ತಜ್ಞರು ಹೇಳಿದ್ದಾರೆ. ಇದರಿಂದ ಸರ್ಕಾರ ಬೆಚ್ಚಿಬಿದ್ದಿದೆ. ಹೀಗಾಗಿ, ಕೊರೋನಾ ನಿಯಂತ್ರಣ ಮಾಡಲು ತೆಗೆದುಕೊಳ್ಳಬಹುದಾದ ಕ್ರಮದ ಬಗ್ಗೆ ಶಾಸಕರ ಜೊತೆ ಚರ್ಚೆ ಸಿಎಂ ಮೀಟಿಂಗ್ ಅನ್ನ ಕೂಡ ಮಾಡುತ್ತಿದ್ದಾರೆ.
ಇದೇ ವೇಳೆ ಬೆಂಗಳೂರಿನಲ್ಲಿ ಲಾಕ್‌ಡೌನ್ ಜಾರಿ ಮಾಡುವ ಬಗ್ಗೆಯೂ ನಿರ್ಧಾರ ಆಗಲಿದೆ ಎನ್ನಲಾಗುತ್ತಿದೆ. ಲಾಕ್‌ಡೌನ್ ಜಾರಿಯಾದರೆ ತೊಂದರೆ ಆಗುತ್ತದೆ ಎನ್ನುವ ಕಾರಣಕ್ಕೆ ಎಲ್ಲರೂ ತಮ್ಮ ತಮ್ಮ ಊರುಗಳಿಗೆ ಮರಳುತ್ತಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?