Connect with us

Featured

ಹಿಮಾಲಯದ ಕೊರೆಯುವ ಚಳಿಯಲ್ಲಿ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಶೂಟಿಂಗ್

ಬೆಂಗಳೂರು – ‘ಕಂಬ್ಳಿಹುಳ’ ಖ್ಯಾತಿಯ ಅಂಜನ್ ನಾಗೇಂದ್ರ ನಾಯಕ ನಟನಾಗಿ ನಟಿಸುತ್ತಿರುವ, ಶುಭ ಮಂಗಳ, ನಾಗಿಣಿ, ಕಮಲಿ, ಅಗ್ನಿಸಾಕ್ಷಿ, ಮಧುಬಾಲ ಸೇರಿದಂತೆ ಹಲವು ಸೂಪರ್ ಹಿಟ್ ಧಾರಾವಾಹಿಗಳನ್ನು ನಿರ್ದೇಶಿಸುವ ಹಯವದನ ಸಾರಥ್ಯದಲ್ಲಿ ಮೂಡಿಬರ್ತಿರುವ ಚೊಚ್ಚಲ ಸಿನಿಮಾ ‘ಎಲ್ಲೋ ಜೋಗಪ್ಪ ನಿನ್ನರಮನೆ’. ಈಗಾಗಲೇ ಬಹುತೇಕ ಶೂಟಿಂಗ್ ಮುಗಿಸಿ, ಒಂದು ಹಾಡಿನ ಚಿತ್ರೀಕರಣವನ್ನು ಚಿತ್ರತಂಡ ಬಾಕಿ ಉಳಿಸಿಕೊಂಡಿದೆ. ನಿರ್ದೇಶಕ ಹಯವದನ ಯಾರು ಸಲೀಸಾಗಿ ಚಿತ್ರೀಕರಣ ಮಾಡಲಾಗದ ಜಾಗದಲ್ಲಿ ಸಿನಿಮಾವನ್ನು ಚಿತ್ರೀಕರಿಸಬೇಕೆಂಬ ಕನಸು ಇಟ್ಟುಕೊಂಡಿದ್ದರು. ಅದರಂತೆ ಮಹಾರಾಷ್ಟ್ರ, ಉತ್ತರಖಂಡ, ದೆಹಲಿ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ ಸೇರಿದಂತೆ ಹಿಮಾಲಯದ ಕೊರೆಯುವ ಚಳಿಯಲ್ಲಿಯೂ ಎಲ್ಲೋ ಜೋಗಪ್ಪ ನಿನ್ನರಮನೆ’ವನ್ನು ಶೂಟಿಂಗ್ ನಡೆಸಿದ್ದಾರೆ. ಸುಂದರ ಸ್ಥಳಗಳಲ್ಲಿ ಸಿನಿಮಾ ಶೂಟ್ ಮಾಡಿರುವ ಖುಷಿ ಚಿತ್ರತಂಡದಲ್ಲಿದೆ.

ಶೂಟಿಂಗ್ ಮುಗಿಸಿ ಈಗ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಬಳಗ ಮಾತಿನ ಜೋಡಣೆ ಕೆಲಸದಲ್ಲಿ ನಿರತರಾಗಿದ್ದಾರೆ. ಎಲ್ಲೋ ಜೋಗಪ್ಪ ನಿನ್ನರಮನೆ ಒಂದು ಜರ್ನಿಯ ಕಥೆ. ತಂದೆ-ಮಗನ ನಡುವಿನ ಭಾವನಾತ್ಮಕ ಸಂಬಂಧ ಈ ಸಿನಿಮಾ ಹೈಲೈಟ್ಸ್‌. ತಂದೆಯ ಮಾತಿಗೆ ಮುನಿಸಿಕೊಂಡು ಮನೆ ಬಿಟ್ಟು ಹೋಗುವ ಹುಡುಗನ ಕಥೆ ಸಿನಿಮಾದಲ್ಲಿದೆ. ಲವ್‌, ಸೆಂಟಿಮೆಂಟ್‌, ಕಾಮಿಡಿ ಎಲ್ಲವನ್ನೂ ಒಳಗೊಂಡಿರುವ ಈ ಚಿತ್ರದಲ್ಲಿ ಅಂಜನ್ ನಾಗೇಂದ್ರಗೆ ಜೋಡಿಯಾಗಿ ಯುವ ನಟಿ ವೆನ್ಯ ರೈ ನಟಿಸ್ತಿದ್ದು, ‘ಕೆಟಿಎಂ’, ‘ಮೂನ್ ವಾಕ್’ ಹಾಗೂ ಮಲಯಾಳಂನಲ್ಲಿ ‘ಮನಸ್ಮಿತ’ ಸಿನಿಮಾದಲ್ಲಿ ನಟಿಸಿರುವ ಸಂಜನಾ ದಾಸ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಶರತ್ ಲೋಹಿತಾಶ್ವ, ಸ್ವಾತಿ, ದಾನಪ್ಪ, ಲಕ್ಷ್ಮೀ ನಾಡಗೌಡ, ದಿನೇಶ್ ಮಂಗಳೂರು,ಬಿರಾದರ್ ತಾರಾಬಳಗದಲ್ಲಿದ್ದಾರೆ..

ಪೆಂಡೋರಾಸ್ ಬಾಕ್ಸ್ ಪ್ರೊಡಕ್ಷನ್ ಹಾಗೂ ಕೃಷ್ಣಛಾಯ ಚಿತ್ರ ಬ್ಯಾನರ್ ನಡಿ ಪವನ್ ಸಿಮಿಕೇರಿ ಮತ್ತು ಸಿಂಧು ಹಯವದನ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಶಿವ ಪ್ರಸಾದ್ ಸಂಗೀತ ಸಂಯೋಜನೆ, ನಟರಾಜ್ ಮದ್ದಾಲ ಕ್ಯಾಮೆರಾ ವರ್ಕ್, ರವಿಚಂದ್ರನ್ ಸಂಕಲನದಲ್ಲಿ ಸಿನಿಮಾ ಮೂಡಿ ಬರಲಿದೆ. ರವಿ ಮುದ್ದಿ, ವಿಕ್ರಮ ಹಾತ್ವಾರ್, ಪ್ರಮೋದ್ ಮರವಂತೆ ಸಾಹಿತ್ಯ, ಭಜರಂಗಿ ಮೋಹನ್ ನೃತ್ಯ ನಿರ್ದೇಶನ, ನರಸಿಂಹ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಡಬ್ಬಿಂಗ್ ನಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ಆದಷ್ಟು ಬೇಗ ಎಲ್ಲಾ ಕೆಲಸವನ್ನು ಮುಗಿಸಿ ಸೆಪ್ಟಂಬರ್ ಗೆ ಸಿನಿಮಾವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ