Connect with us

Uncategorized

ಅಪಘಾತದಲ್ಲಿ ಮೃತಪಟ್ಟ ಪತ್ನಿಗೆ ಜೀವ ತುಂಬಿದ ಪತಿ – ಮನಮಿಡಿಯೋ ಸತ್ಯ ಕಥೆ..!

ರೈಸಿಂಗ್ ಕನ್ನಡ ವಿಶೇಷ ವರದಿ :

ಪ್ರತಿನಿಧಿ, ನಾಗರಾಜ್ ವೈ, ಕೊಪ್ಪಳ

ಇದು ಗೃಹಪ್ರವೇಶದ ಶುಭ ಸಂದರ್ಭ. ಮನೆಗೆ ಬಂದ ಅತಿಥಿಗಳಿಗೆಲ್ಲ ಅಚ್ಚರಿ. ಮೂರು ವರ್ಷಗಳ ಹಿಂದೆ ಕಣ್ಮರೆಯಾಗಿದ್ದ ಆ ತಾಯಿ ಎಲ್ಲರನ್ನೂ ಸ್ವಾಗತಿಸಿದ ದೃಶ್ಯ ಕಂಡು ಮೂಕವಿಸ್ಮಿತರಾದವರೇ ಹೆಚ್ಚು.

Advertisement

ಹೌದು. 2017ರ ಜುಲೈನಲ್ಲಿ ಅಪಘಾತದಲ್ಲಿ ತನ್ನವರನ್ನ ಬಿಟ್ಟು ಬಾರದ ಲೋಕಕ್ಕೆ ಪಯಣಿಸಿದ್ದ ಭಾಗ್ಯನಗರದ ಖ್ಯಾತ ವಾಣಿಜ್ಯೋದ್ಯಮಿ ಶ್ರೀನಿವಾಸ ಗುಪ್ತಾ ಅವರ ಪತ್ನಿ ತಮ್ಮ ನೂತನ ಗೃಹ ಪ್ರವೇಶಕ್ಕೆ ಬಂದ ಅತಿಥಿಗಳನ್ನು ಸ್ವಾಗತಿಸಿದ್ದಾರೆ.

ಅಚ್ಚರಿಯಾಗ್ತಿದ್ಯಾ. ಆಗಲೇಬೇಕು ತಾನೇ. ಮೃತಪಟ್ಟವರು ಎಲ್ಲರನ್ನೂ ಸ್ವಾಗತಿಸಿದ್ದು ಹೇಗೆ ಅಂತ. ಅದೇ ಆಕಾರದ, ಅಷ್ಟೇ ಎತ್ತರದ ಅಷ್ಟೇ ಏಕೆ ಅವರೇ ಸಾಕ್ಷಾತ್ ಧರೆಗಿಳಿದು ಬಂದಂತೆ ಭಾಸವಾದ ದೃಶ್ಯವದು..!
ಶ್ರೀನಿವಾಸ ಗುಪ್ತಾ ಅವರ ಪತ್ನಿಗೆ ಮನೆ ಕಟ್ಟಿಸಬೇಕೆಂಬ ಮಹದಾಸೆ ಇತ್ತು. ಅದು ಅವರ ಕನಸಿನ ಮನೆಯಾಗಿತ್ತು. ಮನೆಯ ವಿನ್ಯಾಸವೂ ಅವರಿಚ್ಛೆಯಂತೆಯೇ ಇತ್ತು. ಆದರೆ ಅವರೇ ಇರಲಿಲ್ಲ. ಅವರಿಲ್ಲ ಎನ್ನುವ ಕೊರಗು ಬರಬಾರದು ಎಂದು ಯೋಚಿಸಿದ ಗುಪ್ತಾ ಅವರು, ಗೃಹಪ್ರವೇಶಕ್ಕೆ ಹೆಂಡತಿಯೂ ಪಾಲ್ಗೊಳ್ಳುವಂತಾಗಬೇಕು ಎಂದು ಯೋಚಿಸಿ, ಗೂಗಲ್ ಸರ್ಚ್ ಮಾಡಿ, ಊರು-ಕೇರಿ ಅಲೆದು, ಕೊನೆಗೂ ತಮ್ಮ‌ ಉಸಿರಾಗಿದ್ದ ಪತ್ನಿಯ ಕನಸು, ಹೆಸರನ್ನು ಹಸಿರಾಗಿಸಿದರು.

ಬೆಂಗಳೂರಿನ ಬೊಂಬೆ ಮನೆ ಕಲಾವಿದರನ್ನು ಸಂಪರ್ಕಿಸಿ ಮನದಿಂಗಿತವನ್ನು ಹೇಳಿಕೊಂಡಾಗ ರಬ್ಬರ್ ಮತ್ತು ಸಿಲಿಕಾನ್ ಮೆಟಿರಿಯಲ್ ಮೂಲಕ ಹೆಂಡತಿಯ ನೈಜರೂಪದ ಪ್ರತಿಮೆ ರೂಪಿಸಿದ್ದಾರೆ. ಅದು ಯಾವುದೇ ದೃಷ್ಠಿಯಲ್ಲೂ ಬೊಂಬೆ ಅನಿಸಲ್ಲ. ಅವರೊಬ್ಬ ವ್ಯಕ್ತಿ ಎನ್ನುವಷ್ಟರಮಟ್ಟಿಗೆ ಹಾಸು ಹೊಕ್ಕಾಗಿದೆ. ಗುಪ್ತಾ ಅವರ ಮಕ್ಕಳ ಸಂತೋಷಕ್ಕೆ ಪಾರವೇ ಇಲ್ಲ. ಅಮ್ಮ ಜೊತೆಯಲ್ಲೇ ಇದ್ದಾಳೆ ಎನ್ನುವ ಭಾವದಲ್ಲಿ ಗೃಹಪ್ರವೇಶ ಕಾರ್ಯ ಮುಗಿಸಿದ್ದಾರೆ.

“ನಾನು ಜೀವನದಲ್ಲಿ ಹೆಚ್ಚು ಪ್ರೀತಿಸುವ ಜೀವ ಅದು. ದೇವರು ನನಗೆ ಇಷ್ಟು ಮಾತ್ರ ಶಕ್ತಿ ಕೊಟ್ಟಿದ್ದಾನೆ. ಜೀವ ತುಂಬುವ ಶಕ್ತಿ ನನಗೆ‌ ಇದ್ದಿದ್ದರೆ ತಡ ಮಾಡುತ್ತಲೇ ಇರಲಿಲ್ಲ. ಇದಕ್ಕೆ ಬೆಲೆ ಕೇಳಬೇಡಿ. ನನ್ನವಳ ನೆನಪುಗಳಿಗೆ ಬೆಲೆಯನ್ನೇ ಕಟ್ಟಲಾಗಲ್ಲ.” ಶ್ರೀನಿವಾಸ ಗುಪ್ತಾ, ವಾಣಿಜ್ಯೋದ್ಯಮಿ, ಭಾಗ್ಯನಗರ

                                                             

ಕಾರ್ಯಕ್ರಮಕ್ಕೆ ಬಂದ ಅತಿಥಿಗಳು ಮೊದಲು ದಿಗ್ಭ್ರಮೆಗೊಂಡು ಆನಂತರ ಸಿಲಿಕಾನ್ ಬೊಂಬೆಯ ಪ್ರತಿರೂಪದ ಜೊತೆ ಫೋಟೊ ತೆಗೆಸಿಕೊಂಡದ್ದೇ ದೊಡ್ಡ ಸಂಭ್ರಮವಾಗಿತ್ತು.

Puradamma
Puradamma

Continue Reading
Advertisement
Click to comment

Leave a Reply

Your email address will not be published. Required fields are marked *

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ