ಬೆಂಗಳೂರು
ವಿವಾಹ ವಾರ್ಷಿಕೋತ್ಸವಕ್ಕೆ ಗಿಫ್ಟ್ ಕೊಡದ ಗಂಡ ;ಮಧ್ಯರಾತ್ರಿ ಮಾಡಿದ್ದೇನು ಗೊತ್ತಾ?
![](https://risingkannada.com/wp-content/uploads/2024/03/gift.jpg)
ಬೆಂಗಳೂರು: ಮದುವೆ ವಾರ್ಷಿಕೋತ್ಸವಕ್ಕೆ ಗಂಡ ಗಿಫ್ಟ್ ಕೊಟ್ಟಿಲ್ಲ ಎಂದು ಪತ್ನಿಯನ್ನ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನ ಬೆಳ್ಳಂದೂರಿನಲ್ಲಿ ನಡೆದಿದೆ..ಫೆ.27 ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮದುವೆ ವಾರ್ಷಿಕೋತ್ಸವ ಹಿನ್ನೆಲೆ ಗಂಡ ನಿದ್ದೆಗೆ ಜಾರಿದ್ದನು. ಇದರಿಂದ ಕೋಪಗೊಂಡಿದ್ದ ಹೆಂಡತಿ ಮಧ್ಯರಾತ್ರಿ 1:30 ರ ಸುಮಾರಿಗೆ ಚಾಕುವಿನಿಂದ ಇರಿದಿದ್ದಾಳೆ. ಗಂಡ ಮಲಗಿ ನಿದ್ದೆ ಮಾಡುತ್ತಿದ್ದ ವೇಳೆ ಅಡುಗೆ ಮನೆಯಿಂದ ಚಾಕು ತಂದ ಪತ್ನಿ ಆತನಿಗೆ ಇರಿದಿದ್ದಾಳೆ. ಚಾಕುವಿನಿಂದ ಇರಿದ ಹಿನ್ನೆಲೆ ಪತಿಯ ಕೈಗೆ ಗಾಯವಾಗಿದೆ. ಕೂಡಲೇ ಸ್ಥಳೀಯರ ಸಹಾಯದಿಂದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಗಂಡ ಮತ್ತು ಹೆಂಡತಿಯನ್ನು ಪೊಲೀಸರು ಕೌನ್ಸಲಿಂಗ್ ನಡೆಸಿದ್ದಾರೆ. ತನಿಖೆ ವೇಳೆ ಮೊದಲ ಬಾರಿಗೆ ಗಿಫ್ಟ್ ನೀಡಿಲ್ಲ ಎಂಬ ಸಂಗತಿ ಬಯಲಾಗಿದೆ. ಹೀಗಾಗಿ ಕೃತ್ಯವೆಸಗಿರುವುದಾಗಿ ಹೆಂಡತಿ ಒಪ್ಪಿಕೊಂಡಿದ್ದಾಳೆ. ಆದರೆ ಗಂಡ ತನ್ನ ತಾತ ತೀರಿ ಹೋಗಿದ್ದ ಕಾರಣ ಗಿಫ್ಟ್ ನೀಡಲು ನಿರಾಕರಿಸಿರೋದಾಗಿ ಒಪ್ಪಿಕೊಂಡಿದ್ದಾನೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?