Featured
ನಟಿ ರಾಗಿಣಿ ಮತ್ತೆ ಐದು ದಿನಗಳ ಕಾಲ ಕಸ್ಟಡಿಗೆ: ತನಿಖೆಗೆ ಸಹಕರಿಸದ ತುಪ್ಪದ ಬೆಡಗಿ
![](https://risingkannada.com/wp-content/uploads/2020/09/ragini-dwivedi-16.jpg)
ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಪಾರ್ಟಿಗೆ ಹೋಗಿದ್ದು ನಿಜ ಆದರೆ ಡ್ರಗ್ಸ್ ವಿಚಾರ ತನಗೆ ಗೊತ್ತಿಲ್ಲವೆಂದೂ ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿ ವಿಚಾರಣೆ ವೇಳೆ ಹೇಳಿದ್ದಾರೆ.
ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಶದಲ್ಲಿರುವ ತುಪ್ಪದ ಬೆಡಗಿ ರಾಗಿಣಿ ತಮ್ಮ ಮೇಲಿರುವ ಡ್ರಗ್ಸ್ ಆರೋಪವನ್ನ ನಿರಾಕಿರಿಸಿದ್ದಾರೆ.
ತಾನೊಬ್ಬಳು ನಟಿಯಾಗಿದ್ದು ನನ್ನ ಬೆಳವಣಿಗೆ ಕೆಲವರಿಗೆ ಸಹಿಸಲು ಆಗುತ್ತಿಲ್ಲ. ಹೀಗಾಗಿ ಈ ರೀತಿಯ ಆರೋಪಗಳು ಕೇಳಿ ಬಂದಿವೆ. ಸ್ಟಾರ್ ನಟಿಯಾಗಿರುವುದರಿಂದ ಪಾರ್ಟಿಗಳಿಗೆ ಹೋಗುತ್ತಿದ್ದೆ ಆದರೆ ಡ್ರಗ್ಸ್ ವಿಚಾರ ನನಗೆ ಗೊತ್ತಿಲ್ಲ ಎಂದು ವಿಚಾರಣೆ ವೇಳೆ ತನಿಖಾಧಿಕಾರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ನಟಿ ರಾಗಿಣಿಯವರ ಕಸ್ಟಡಿ ಅವಧಿ ಮುಗಿದ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ನಗರದ 1ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರು ಪಡಿಸಿದರು.
ಇನ್ನು 10 ದಿನಗಳ ಕಾಲ ವಿಚಾರಣೆಗೆ ನಡೆಸಲು ಕಲಾವಕಾಶ ಕೇಳಿದರು. ಆದರೆ ನ್ಯಾಯಾಧೀಶರು ಐದು ದಿನಗಳ ಕಾಲ ಮಾತ್ರ ಕಸ್ಟಡಿಗೆ ಅವಕಾಶ ನೀಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?