Connect with us

Featured

ಭೀಮನ ಅಮಾವಾಸ್ಯೆ ಏತಕ್ಕಾಗಿ ಮಾಡಬೇಕು ಗೊತ್ತಾ? – ವ್ರತದ ಮಹತ್ವ ನಿಮಗಾಗಿ

ಭೀಮನ ಅಮಾವಾಸ್ಯೆಯ ಶುಭಾಶಯಗಳು

ಡಾ.ಬಸವರಾಜ್ ಗುರೂಜಿ,
ವೈದಿಕ ಜ್ಯೋತಿಷಿ

ತಾ.20-07-2020, ಸೋಮವಾರದಂದು ಭೀಮನ ಅಮಾವಾಸ್ಯೆ ವ್ರತ :

ಭೀಮನ ಅಮಾವಾಸ್ಯೆ ವ್ರತ: ಏಕೆ? ಹೇಗೆ?

Advertisement


ಪತಿಯೇ ಪರದೈವ ಎನ್ನುವ ಸಂಸ್ಕೃತಿ ನಮ್ಮದು. ಕಾಯಾ, ವಾಚಾ, ಮನಸಾ ಜೊತೆಯಲ್ಲಿರುತ್ತೇನೆಂದು ಅಭಯ ನೀಡಿ ಪತ್ನಿಯನ್ನು ಕಣ್ಣಲ್ಲಿ ಕಣ್ಣಿಟ್ಟು ಕಾಳಜಿ ತೋರುವ ಪತಿಯ ಆರೋಗ್ಯ, ಆಯುಷ್ಯ ವೃದ್ಧಿಗೆ ಹಿಂದು ಸಂಪ್ರದಾಯದಲ್ಲಿ ಹಲವು ವ್ರತಗಳ ಆಚರಣೆ ರೂಢಿಯಲ್ಲಿದೆ. ಅವೆಲ್ಲವುಗಳಲ್ಲಿ ಬಹುಮುಖ್ಯವಾದುದು ಭೀಮನ ಅಮಾವಾಸ್ಯೆ ವ್ರತ.

ಪ್ರತಿವರ್ಷ ಆಷಾಢ ಮಾಸದ ಕೊನೆಯ ದಿನ ಅಂದರೆ ಅಮಾವಾಸ್ಯೆಯಂದು ಆಚರಿಸಲ್ಪಡುವ ಈ ಹಬ್ಬವನ್ನು ಕರ್ನಾಟಕದಾದ್ಯಂತ ಭಕ್ತಿ, ಶ್ರದ್ಧೆಯಿಂದ ಆಚರಿಸಲಾಗುತ್ತದೆ.:-

ಭೀಮನ ಅಮಾವಾಸ್ಯೆ: ತಿಳಿಯಬೇಕಾದ 10 ಸಂಗತಿ

ಮದುವೆಯಾದ ಮಹಿಳೆಯರು ತಮ್ಮ ಪತಿಯ ಆಯುಷ್ಯ ವೃದ್ಧಿಸಲಿ, ಆರೋಗ್ಯ ಸಿದ್ಧಿಸಲಿ ಎಂದು ದೇವರನ್ನು ಬೇಡಿ ವ್ರತ ಆಚರಿಸಿದರೆ, ಅವಿವಾಹಿತ ಯುವತಿಯರು ಉತ್ತಮ ಪತಿ ಸಿಗಲಿ ಎಂದು ಪ್ರಾರ್ಥಿಸುತ್ತ, ಹೊಸ ಬದುಕಿನ ಕನಸು ಕಾಣುತ್ತ ಈ ಹಬ್ಬವನ್ನು ಆಚರಿಸುತ್ತಾರೆ.

ಪೌರಾಣಿಕ ಹಿನ್ನೆಲೆ :-

Advertisement

ಪುರಾಣಗಳ ಪ್ರಕಾರ, ಮರಣ ಹೊಂದಿದ್ದ ಪತಿಯ ಪ್ರಾಣವನ್ನು ಹಿಂದಿರುಗಿಸಿಕೊಡುವಂತೆ ಸತಿಯೊಬ್ಬಳು ಪಾರ್ವತಿ-ಪರಮೇಶ್ವರನನ್ನು ಪ್ರಾರ್ಥಿಸುತ್ತಾಳೆ. ಆಕೆಯ ಭಕ್ತಿಗೆ ಮೆಚ್ಚಿ ಶಿವ ಆಕೆಯ ಪತಿಯನ್ನು ಬದುಕಿಸಿಕೊಡುತ್ತಾನಂತೆ. ಆಕೆ ಶಿವನನ್ನು ಕುರಿತು ಕಠಿಣ ತಪಸ್ಸು ಕೈಗೊಂಡ ದಿನ ‘ಆಷಾಢ ಅಮಾವಾಸ್ಯೆ’. ಆದ್ದರಿಂದ ಈ ದಿನವೇ ಈ ವ್ರತಾಚರಣೆ. ಹೀಗೆ ಶಿವನಿಂದ ದೀರ್ಘಾಯುಷ್ಯ ಆರೋಗ್ಯವನ್ನು ಪಡೆದ ಕಾರಣಕ್ಕೆ, ಈ ದಿನ ಶಿವನನ್ನು ಪೂಜಿಸಿ ಪತಿಯರ ದೀರ್ಘಾಯುಷ್ಯಕ್ಕೆ ಪತ್ನಿಯರು ಪ್ರಾರ್ಥಿಸುತ್ತಾರೆ.

ಶಿವ ಮತ್ತು ಪಾರ್ವತಿಯರು ಇದೇ ದಿನ ಮದುವೆಯಾಗಿ ಆದರ್ಶ ಸತಿ-ಪತಿಯಾಗಿ ಬದುಕಿದರು ಎಂಬ ಪ್ರತೀತಿಯೂ ಇರುವುದರಿಂದ ಈ ದಿನ ಮಹತ್ವದ್ದೆನ್ನಿಸಿದೆ.

ಪತಿ ಸಂಜೀವಿನಿ ವ್ರತ :-

ಈ ವ್ರತವನ್ನು ಜ್ಯೋತಿರ್ಭೀಮೇಶ್ವರ ವ್ರತ ಎಂದೂ, ಪತಿ ಸಂಜೀವಿನ ವ್ರತ ಎಂದೂ ಕರೆಯಲಾಗುತ್ತದೆ. ಈ ವ್ರತವನ್ನು ಒಮ್ಮೆ ಆರಂಭಿಸಿದರೆ 16 ವರ್ಷಗಳ ಕಾಲ ನಿರಂತರವಾಗಿ ಮಾಡಬೇಕು. ವ್ರತ ಸಂಪೂರ್ಣವಾದ ವರ್ಷ ಬಡ ಬಗ್ಗರಿಗೆ ಅನ್ನದಾನ ಮಾಡಬೇಕು. ಇದರಿಂದ ಪುಣ್ಯ ದುಪ್ಪಟ್ಟಾಗುತ್ತದೆ ಎಂಬ ನಂಬಿಕೆ ಇದೆ.

ಆಷಾಢದ ವಿರಹ ವೇದನೆಗೆ ಪೂರ್ಣವಿರಾಮ !

Advertisement

ಆಷಾಢ ಮಾಸವೆಂದರೆ ಅದು ವಿರಹ ವೇದನೆಯ ಕಾಲ. ತವರಿಗೆ ಹೋದ ಪತ್ನಿ ಹಿಂತಿರುಗಿ ಬಂದು ತನ್ನ ಪತಿಯ ತೆಕ್ಕೆ ಸೇರುವ ದಿನ. ಆದ್ದರಿಂದ ಈ ದಿನ ಪತಿ-ಪತ್ನಿಯನ್ನು ಮತ್ತೆ ಒಂದು ಮಾಡುವ ದಿನವಾಗಿರುವುದರಿಂದ ಮತ್ತಷ್ಟು ಮಹತ್ವ ಪಡೆದಿದೆ. ಶ್ರಾವಣ ಮಾಸ ಆರಂಭವಾಗಿ ಒಂದೊಂದೇ ಹಬ್ಬಗಳು ಆರಂಭವಾಗುತ್ತವೆ. ಮತ್ತೆ ಸಂಭ್ರಮಕ್ಕೆ ಮನಸ್ಸು ತೆರೆದುಕೊಳ್ಳುವ ಕಾಲ ಶುರು!

ಪೂಜೆಯ ವಿಧಾನ :-

ಅಕ್ಕಿ, ತೆಂಗಿನಕಾಯಿ, ಅರಿಶಿಣ-ಕುಂಕುಮವನ್ನು ಒಂದು ತಟ್ಟೆಯಲ್ಲಿ ಇಟ್ಟು, ಅದರ ಮೇಲೆ ತುಪ್ಪದ ದೀಪ ಹಚ್ಚಿದ ಎರಡು ದೀಪದ ಕಂಬ ಇಡಿ. ನಂತರ ಶಿವ-ಪಾರ್ವತಿಯರನ್ನು ಆರಾಧಿಸುತ್ತ, ಭಕ್ತಿಯಿಂದ ಪೂಜೆ ಮಾಡಿ. ಒಂಬತ್ತು ಗಂಟಿನ ಗೌರಿ ದಾರದ ಜೊತೆಗೆ ಉಳಿದ ಪೂಜಾ ಸಾಮಗ್ರಿ(ದಿನವೂ ಬಳಸುವ)ಗಳನ್ನು ಬಳಸಿ ಪೂಜೆ ಮಾಡಿ. ಪೂಜೆ ಮುಗಿದ ನಂತರ ಗೌರಿ ದಾರವನ್ನು ಕಂಕಣದಂತೆ ಕೈಗೆ ಕಟ್ಟಿಕೊಳ್ಳಿ. ಹೀಗೆ ಕಂಕಣ ಕಟ್ಟಿಕೊಂಡು, ಪತಿಯ ಪಾದಗಳಿಗೆ ನಮಸ್ಕರಿಸಿ, ಪಾದಪೂಜೆ ಮಾಡಿ ಆಶೀರ್ವಾದ ತೆಗೆದುಕೊಳ್ಳಬೇಕು.

ಶಿವನ ಪೂಜೆ :-

ಯಾವುದೇ ಹಬ್ಬವಿರಿಲಿ, ಶುಭ ಕಾರ್ಯಕ್ರಮವಿರಲಿ, ವಿಘ್ನನಾಶಕ ವಿನಾಯಕನನ್ನು ಪೂಜಿಸುವುದು ವಾಡಿಕೆ. ಭೀಮನ ಅಮಾವಾಸ್ಯೆ ಹಬ್ಬದಲ್ಲಿ ನಂತರ ಶಿವನನ್ನು ಪೂಜಿಸಲಾಗುತ್ತದೆ. ಭೀಮೇಶ್ವರ ಅಂದರೆ ಶಿವನನ್ನು ಪೂಜಿಸಿ ಗಣೇಶ ಅಷ್ಟೋತ್ತರ, ಶಿವ ಅಷ್ಟೋತ್ತರ ಪಠಿಸಬೇಕು. ಎಲ್ಲಕ್ಕಿಂತ ಹೆಚ್ಚಾಗಿ ಭಕ್ತಿ ಇರಬೇಕು. ಭೀಮನ ಅಮಾವಾದ್ಯೆ ಎಂದರೆ ಪಾಂಡವರಲ್ಲೊಬ್ಬನಾದ ಭೀಮನ ಹಬ್ಬವಲ್ಲ. ಇದು ಭೀಮೇಶ್ವರ ಅಂದರೆ ಈಶ್ವರನ ಹಬ್ಬ.

Advertisement

ಅವರವರ ಅನುಕೂಲಕ್ಕೆ ತಕ್ಕಂತೆ ಆಚರಣೆ :


ಯಾವುದೇ ವ್ರತವಿರಲಿ, ಹಬ್ಬವಿರಲಿ, ಆಡಂಬರಕ್ಕಿಂತ ಹೆಚ್ಚು ಭಕ್ತಿ ಮುಖ್ಯ. ಅವರವರ ಅನುಕೂಲಕ್ಕೆ ತಕ್ಕಂತೆ ಆಚರಣೆ ನಡೆಯುತ್ತದೆ. ಅದ್ಧೂರಿ ಮಂಟಪ ನಿರ್ಮಿಸಿ ಈ ವ್ರತ ಮಾಡುವವರೂ ಇದ್ದಾರೆ. ಮಂಗಳ ಸ್ನಾನ, ಗೋಧಿ ಹಿಟ್ಟಿನಿಂದ ಮಾಡಿದ ಭಕ್ಷ್ಯವನ್ನೇ ನೈವೇದ್ಯಕ್ಕಾಗಿ ಬಳಸುವುದು ಶ್ರೇಷ್ಠ. ಕೆಲೆವೆಡೆ ಈ ಹಬ್ಬದಲ್ಲಿ ಸೋದರಿಯರು ಸೋದರರ ಕೈಯಿಂದ ಭಂಡಾರ ಒಡೆಸುತ್ತಾರೆ. ಭಂಡಾರ ಅಂದರೆ, ಕರಿದ ಕಡಬು(ಸಿಹಿ ಇಲ್ಲದ), ಆದರೆ ಅದರೊಳಗೆ ಲಕ್ಷ್ಮೀ ಸ್ವರೂಪಿ ನಾಣ್ಯವನ್ನು ಇಟ್ಟು ಕರೆದಿರುತ್ತಾರೆ. ಅಂತಹ ಕಡುಬನ್ನು ಮುಂಬಾಗಿಲ ಹೊಸಿಲಲ್ಲಿಟ್ಟು ಸೋದರ ಹೊಸಿಲ ಮೇಲೆ ಕೂತು ತನ್ನ ಮೊಣಕೈಯಿಂದ ಅದನ್ನು ತುಂಡರಿಸುತ್ತಾನೆ. ಸೋದರಿ ಆ ಸಮಯದಲ್ಲಿ ಅವನ ಬೆನ್ನ ಮೇಲೆ ಪ್ರೀತಿಯಿಂದ ಗುದ್ದುತ್ತಾಳೆ. ನಂತರ ಅಣ್ಣನ ಆಶೀರ್ವಾದ ಬೇಡುವ ಸೋದರಿ, ಫಲ ತಾಂಬೂಲ ನೀಡುತ್ತಾಳೆ. ಇದು ಹಬ್ಬದ ವೈಶಿಷ್ಟ್ಯ.

ಅವಿವಾಹಿತ ಮಹಿಳೆಯರು ಹೇಗೆ ಆಚರಿಸಬೇಕು?

ಈ ವ್ರತ ಕೇವಲ ವಿವಾಹಿತರಿಗೆ ಮಾತ್ರ ಎಂದೇನಿಲ್ಲ. ಅವಿವಾಹಿತ ಮಹಿಳೆಯರು ತಮಗೆ ಉತ್ತಮ ಪತಿ ಸಿಗಲಿ ಎಂದು ಪ್ರಾರ್ಥಿಸುತ್ತ, ಕೈಗೆ ಕಂಕಣ ಕಟ್ಟಿಕೊಂಡು ಭಕ್ತಿಯಿಂದ ವ್ರತ ಆಚರಿಸಬಹುದು. ಭೀಮನ ಅಮಾವಾಸ್ಯೆ, ಜ್ಯೋತಿರ್ಭೀಮೇಶ್ವರ ವ್ರತ, ಪತಿ ಸಂಜೀವಿನಿ ವ್ರತ ಸೇರಿದಂತೆ ಹಲವು ಹೆಸರುಗಳಿಂದ ಇದನ್ನು ಕರೆಯಲಾಗುತ್ತದೆ. ಮಲೆನಾಡಿನ ಕೆಲವು ಭಾಗಗಳಲ್ಲಿ ಇದನ್ನೇ ಅಳಿಯನ ಅಮಾವಾಸ್ಯೆ, ಕೊಡೆ ಅಮಾವಾಸ್ಯೆ ಎಂಬಿತ್ಯಾದಿ ಹೆಸರಿನಿಂದ ಕರೆದು, ಮದುವೆಯಾದ ಮೊದಲ ವರುಷ ಅಳಿಯನನ್ನು ಪತ್ನಿಯ ತವರು ಮನೆಗೆ ಕರೆಸಿ ಸತ್ಕರಿಸುವ ಪದ್ಧತಿಯೂ ಇದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ