Featured
ಪೊಗರು ಸಿನಿಮಾದ ಪ್ರಚಾರ ಕಾರ್ಯಕ್ಕೆ ಕೈ ಜೋಡಿಸಿದ ರಶ್ಮಿಕಾ ಮಂದಣ್ಣ..!
ರೈಸಿಂಗ್ ಕನ್ನಡ :- ರಶ್ಮಿಕಾ ಮಂದಣ್ಣ ಹಾಗೂ ರಕ್ಷಿತ್ ಶೆಟ್ಟಿ ನಿಶ್ಚಿತಾರ್ಥ ಮುರಿದು ಬಿದ್ದ ನಂತರ ಟಾಲಿವುಡ್ ನಲ್ಲಿ ಬ್ಯೂಸಿಯಾದ್ರು ಕೊಡಗಿನ ಬೆಡಗಿ. ಆಗಿನಿಂದ ಅವರು ಕನ್ನಡ ಸಿನಿಮಾಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಅನ್ನೋ ಆರೋಪ ಕೇಳಿ ಬರುತ್ತಿತ್ತು. ಇನ್ನು ಪೊಗರು ಸಿನಿಮಾ ರಿಲೀಸ್ ದಿನಾಂಕ ಪ್ರಕಟವಾದಾಗಲೂ ಇದೇ ವಿಷಯ ಚರ್ಚಗೆ ಬಂತು. ಈಗ ಇದಕ್ಕೆಲ್ಲ ಪೂರ್ಣ ವಿರಾಮ ಇಟ್ಟಿದ್ದಾರೆ ರಶ್ಮಿಕಾ ಮಂದಣ್ಣ. ಹೌದು , ಸಿನಿಮಾದ ಪ್ರಚಾರ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ ರಶ್ಮಿಕಾ ಮಂದಣ್ಣ.
ಸದ್ಯ ಬಾಲಿವಿಡ್ ಸಿನಿಮಾ ಹಾಗೂ ಹಿಂದಿ ಮ್ಯೂಸಿಕ್ ವಿಡಿಯೋದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ ರಶ್ಮಿಕಾ ಮಂದಣ್ಣ.
ಕನ್ನಡದಲ್ಲಿ ಮಾಡಿರುವ ಬೆರಳೆಣಿಕೆ ಚಿತ್ರಗಳಾದರೂ ಎಲ್ಲವೂ ಸ್ಟಾರ್ ನಟರ ಜೊತೆ. ಕನ್ನಡದ ಬಹು ನಿರೀಕ್ಷಿತ ಸಿನಿಮಾ ಪೊಗರು ಇನ್ನೇನು ರಿಲೀಸ್ ಗೆ ಸಿದ್ದವಾಗಿ ನಿಂತಿದೆ.
ಪೊಗರು ಚಿತ್ರದಲ್ಲಿ ಮತ್ತದೇ ಕಿರಿಕ್ ಪಾರ್ಟಿಯ ಸಾನ್ವಿ ಕನ್ನಡಕ ತೊಟ್ಟು ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿರುವ ರಶ್ಮಿಕಾ , ಕನ್ನಡ ಸಿನಿಮಾಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಅನ್ನೋ ಸುದ್ದಿ ಸದ್ಯ ಚರ್ಚೆಯಲ್ಲಿದೆ.
ಇತ್ತೀಚೆಗಷ್ಟೆ ಪೊಗರು ಸಿನಿಮಾದ ರಿಲೀಸ್ ದಿನಾಂಕ ಪ್ರಕಟಿಸಲಾಗಿದೆ. ಫೆ.19ರಂದು ಪೊಗರು ರಿಲೀಸ್ ಆಗಲಿದ್ದು, ಚಿತ್ರತಂಡ ಹಾಗೂ ಸ್ಟಾರ್ ಗಳು ಅದರ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ರಶ್ಮಿಕಾ ಮಾತ್ರ ಈ ಸಲವೂ ಸಿನಿಮಾದ ಪ್ರಚಾರದ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಅನ್ನೋ ಮಾತುಗಳು ಸ್ಯಾಂಡಲ್ ವುಡ್ ಅಂಗಳದಲ್ಲಿ ಹರಿದಾಡುತ್ತಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?