Featured
2.71 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಡಿಸಿಎಂ ಗೋವಿಂದ ಕಾರಜೋಳ ಶಂಕುಸ್ಥಾಪನೆ

ರೈಸಿಂಗ್ ಕನ್ನಡ:
ಬೆಂಗಳೂರು:
ಮುಧೋಳ್ ತಾಲ್ಲೂಕಿನ 2.71 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಇಂದು ಶಂಕುಸ್ಥಾಪನೆ ನೆರವೇರಿಸಿದರು.
ಮುಧೋಳ ತಾಲ್ಲೂಕಿನ ಸೊರಗಾಂವ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ 15 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ, ಹಲಗಲಿ ಗ್ರಾಮದಲ್ಲಿ 1.40 ಕೋಟಿ ರೂ ವೆಚ್ಚದ ಕಾಗವಾಡ- ಕಲಾದಗಿ ರಾಜ್ಯ ಹೆದ್ದಾರಿ ಕಾಮಗಾರಿ, ಮಾಚಕನೂರು ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ 63 ಲಕ್ಷ ರೂ ವೆಚ್ಚದ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿ
ಬದ್ನೂರು ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ 18 ಲಕ್ಷ ರೂ ವೆಚ್ಚದ ಸಿಸಿ ರಸ್ತೆ, ಚೌಡಾಪುರ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ 10 ಲಕ್ಷ ರೂ ವೆಚ್ಚದ ಸಿಸಿ ರಸ್ತೆ, , ಜಂಬಗಿ ಕೆ.ಡಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ 25ಲಕ್ಷ ರೂ ವೆಚ್ವದ ಸಿಸಿ ರಸ್ತೆ, ಬನ್ನೂರು ಗ್ರಾಮದಲ್ಲಿ 20 ಲಕ್ಷ ರೂ ವೆಚ್ವದಲ್ಲಿ ಪರಿಶಿಷ್ಟ ಪಂಗಡ ಸಮುದಾಯ ಭವನ ನಿರ್ಮಾಣ ಕಾಮಗಾರಿಗಳಿಗೆ ಡಿಸಿಎಂ ಶಂಕುಸ್ಥಾಪನೆ ನೆರವೇರಿಸಿದರು.
ಈ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಈ ಯೋಜನೆಗಳನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು. ಸಂದರ್ಭದಲ್ಲಿ ವಿವಿಧ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?