Featured
ತುಮಕೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ನೇತೃತ್ವದಲ್ಲಿ ಸರಳ ಸ್ವಾತಂತ್ರ್ಯ ದಿನಾಚರಣೆ
ರೈಸಿಂಗ್ ಕನ್ನಡ :
ತುಮಕೂರು:
ತುಮಕೂರಿನಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ನೇತೃತ್ವದಲ್ಲಿ ಸರಳವಾಗಿ ಆಚರಿಸಲಾಯಿತು.
ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ಆಯೋಜಿಸಿರುವ 74 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ಧ್ವಜಾರೋಹಣ ನೆರವೇರಿಸಿದರು.
ನಂತರ ಮಾತನಾಡಿದ ಮಾಧೂಸ್ವಾಮಿ, ಕೊರೊನಾ ಸೋಂಕಿನ ಭೀತಿಯಿಂದಾಗಿ ನಾವು ನಿರೀಕ್ಷಿತಾ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯವನ್ನ ಮಾಡಲಾಗಲಿಲ್ಲ ಎನ್ನುವ ನೋವು ನನಗಿದೆ. ಕುಡಿಯುವ ನೀರಿಗೆ,ಶುಚಿತ್ವಕ್ಕೆ ಆದ್ಯತೆ ನೀಡಿದ್ದೇವೆ.
ಒಂದು ಕಾಲದಲ್ಲಿ ವಿದ್ಯುತ್ ಸಮಸ್ಯೆ ಎದುರಿಸುತ್ತಿದ್ದ ನಾವು ಈಗ ಬೇರೆಡೆಗೆ ವಿದ್ಯುತ್ ಪೂರೈಕೆ ಮಾಡುವ ಮಟ್ಟಿಗೆ ಬೆಳೆದಿದ್ದೇವೆ.
ಹೆಚ್ಚು ಹೆಚ್ಚು ರಾಷ್ಟ್ರೀಯ ಕಾಮಗಾರಿಗಳು ಜಿಲ್ಲೆಯಲ್ಲಿ ಕೈಗೆತ್ತಿಕೊಂಡಿದ್ದೇವೆ.ಜಿಲ್ಲೆಯ ಸರಸಾಪುರ ಕೈಗಾರಿಕಾ ಪ್ರದೇಶವನ್ನ ಮತ್ತಷ್ಟು ಅಭಿವೃದ್ಧಿಪಡಿಸುವುದಾಗಿ ಹೇಳಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?