Connect with us

ಬೆಂಗಳೂರು

ದೆಹಲಿ ನಂತರ ಕ್ರೈಂ ಸಿಟಿಯಾಗ್ತಿದೆಯಾ ಬೆಂಗಳೂರು?

ಬೆಂಗಳೂರು : ಸಿಲಿಕಾನ್ ಸಿಟಿ, ಗಾರ್ಡನ್‌ ಸಿಟಿ, ಐಟಿ ಸಿಟಿ ಎಂದೆಲ್ಲಾ ಹೆಸರುಗಳಿಂದ ಗುರುತಿಸಿಕೊಂಡಿರುವ ಬೆಂಗಳೂರು ನಗರ ಮಹಿಳೆಯರಿಗೆ ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಕಾಡಲು ಶುರುವಾಗಿದೆ. ಕಾರಣ, ಬೆಂಗಳೂರು ನಗರದಲ್ಲಿ ಕಳೆದ 3 ವರ್ಷಗಳಲ್ಲಿ 444 ಅತ್ಯಾಚಾರ ಪ್ರಕರಣಗಳು ಹಾಗೂ 2439 ಮಾನಭಂಗ ಪ್ರಕರಣ ದಾಖಲಾಗಿವೆ. ಗೃಹ ಇಲಾಖೆ ನೀಡುವ ಅಂಕಿ – ಅಂಶಗಳು ನಿಜಕ್ಕೂ ಆತಂಕಕಾರಿಯಾಗಿವೆ.

2021 ರಲ್ಲಿ 116, 2022 ರಲ್ಲಿ 152 ಹಾಗೂ 2023 ರಲ್ಲಿ 176 ಐಪಿಸಿ 376 ಅಡಿಯಲ್ಲಿ ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಅಲ್ಲದೇ ರೀತಿ 2021 ರಲ್ಲಿ 573, 2022 ರಲ್ಲಿ 731 ಹಾಗೂ 2023 ರಲ್ಲಿ 1135 ಮಾನಭಂಗ ಪ್ರಕರಣಗಳನ್ನು ಐಪಿಸಿ 354 ಅಡಿಯಲ್ಲಿ ದಾಖಲು ಮಾಡಲಾಗಿದೆ. ವರ್ಷದಿಂದ ವರ್ಷಕ್ಕೆ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಿರುವುದು ಆತಂಕಕಾರಿ.
ಅದಷ್ಟೇ ಅಲ್ಲದೆ ಮಹಿಳೆಯನ್ನು ಅವಮಾನಕಾರಿಯಾಗಿ ನಡೆಸಿಕೊಂಡ 109 ಪ್ರಕರಣಗಳು ನಗರದಲ್ಲಿ 3 ವರ್ಷಗಳಲ್ಲಿ ದಾಖಲಾದರೆ, ವರದಕ್ಷಿಣೆ ಸಾವು – 85, ಕೌಟುಂಬಿಕ ದೌರ್ಜನ್ಯ – 1698, ಅಕ್ರಮ ಸಾಗಾಟ- 445 ಹಾಗೂ ವರಕ್ಷಿಣೆ ಕಿರುಕುಳ – 2696 ಪ್ರಕರಣಗಳು ದಾಖಲಾಗಿವೆ.

ಮಹಿಳೆಯರ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ ಸೇಫ್ ಸಿಟಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆ ಅನ್ವಯ ಮಹಿಳೆಯರ ಸುರಕ್ಷತೆಗಾಗಿ ನಗರಾದ್ಯಂತ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಯೋಜನೆಯ ಫೇಸ್ 1 ಹಂತದ ಅನುಷ್ಠಾನ ಪೂರ್ಣಗೊಂಡಿದೆ. ಫೇಸ್ 2 ಹಾಗೂ ಫೇಸ್ 3 ಅನುಷ್ಠಾನ ಕಾರ್ಯ ಪ್ರಗತಿಯಲ್ಲಿದೆ.

ಅಲ್ಲದೆ ಮಹಿಳಾ ಪೊಲೀಸ್‌ ಸಿಬ್ಬಂದಿ 4 ತಂಡಗಳಿಗೆ ಸ್ವ ರಕ್ಷಣೆ ತರಬೇತಿ ನೀಡಲಾಗಿದೆ. ಹಾಗೂ ನಗರದ ಎಂಟು ಪ್ರಮುಖ ಆಸ್ಪತ್ರೆಗಳಲ್ಲಿ ಕ್ರಿಟಿಕಲ್ ಕೇರ್ ರೆನ್ಪಾನ್ಸ್ ಯೂನಿಟ್‌ ಗಳನ್ನು ತೆರೆದು ಶೋಷಣೆಗೊಳಗಾದ ಮಹಿಳೆಯರಿಗೆ ಉತ್ತಮ ರೀತಿಯಲ್ಲಿ ಸಮಾಲೋಚನೆ ಒದಗಿಸಲಾಗುತ್ತದೆ. ಇದಷ್ಟೇ ಅಲ್ಲದೆ ನಗರದಲ್ಲಿ 7500 ಕ್ಯಾಮೆರಾಗಳು, ಕಮಾಂಡ್‌ ಸೆಂಟರ್‌ಗಳು ಹಾಗೂ ನಗರದಾದ್ಯಂತ 50 ಸ್ಥಳಗಳಲ್ಲಿ ಸೇಫ್ಟಿ ಐಲ್ಯಾಂಡ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಗೃಹ ಇಲಾಖೆ ಮಾಹಿತಿಯನ್ನು ನೀಡುತ್ತದೆ.
ಹೀಗಿದ್ದರೂ ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಇದನ್ನು ಪೂರ್ಣ ವಿರಾಮ ಹಾಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ