Connect with us

ಬೆಂಗಳೂರು

ಬ್ರ್ಯಾಂಡ್ ಬೆಂಗಳೂರು ರೂಪಿಸದಿದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ: ಪ್ರತಿಪಕ್ಷ ನಾಯಕ ಆರ್.ಅಶೋಕ

ಬೆಂಗಳೂರು: ನೀವು ಬ್ರ್ಯಾಂಡ್ ಬೆಂಗಳೂರು ರೂಪಿಸದೇ ಇದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದಲೇ ಬಾಂಬ್ ಸ್ಫೋಟ ನಡೆದಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಖಂಡಿಸಿದರು. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಆರ್.ಅಶೋಕ ಪಾಲ್ಗೊಂಡು ಮಾತನಾಡಿದರು.

ನಾವೆಲ್ಲರೂ ತಲೆತಗ್ಗಿಸುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಾಂತಿಯ ತೋಟವನ್ನು ಕೆಡಿಸುವ ಭಯೋತ್ಪಾದಕ ಚಟುವಟಿಕೆ ರಾಜಧಾನಿಯಲ್ಲಿ ನಡೆದಿದೆ. ಆಡಳಿತ ಪಕ್ಷದ ಸಚಿವರು, ಶಾಸಕರು ತಮ್ಮ ಮನಸ್ಥಿತಿಯನ್ನು ಬದಲಿಸಿಕೊಳ್ಳಬೇಕು. ನೀವು ಮತ‌ ಹಾಕಿ, ನಾವು ನಿಮ್ಮನ್ನು ರಕ್ಷಿಸುತ್ತೇವೆ ಎಂಬಂತಹ ಮನಸ್ಥಿತಿಯನ್ನು ಸೃಷ್ಟಿಸಲಾಗಿದೆ. ಈ ಮೂಲಕ ಭಯೋತ್ಪಾದಕ ತಂಡಕ್ಕೆ ರಹದಾರಿ ನೀಡಲಾಗಿದೆ ಎಂದರು.

ಬ್ರ್ಯಾಂಡ್ ಬೆಂಗಳೂರು ಮಾಡದಿದ್ದರೂ ಪರವಾಗಿಲ್ಲ. ಬಾಂಬ್ ಬೆಂಗಳೂರು ಎಂಬ ಕಳಂಕವನ್ನು ತರುವುದು ಬೇಡ. ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ದೇಶ, ವಿದೇಶಗಳ ಕಂಪನಿಗಳ ಜನರು ಬರುತ್ತಾರೆ. ಬೆಂಗಳೂರಿನ ವರ್ಚಸ್ಸು ಕಡಿಮೆ ಮಾಡಿ, ಅಭದ್ರತೆ ಮೂಡಿಸಿ, ಹೂಡಿಕೆ ಇಳಿಕೆ ಮಾಡಲು ಭಯೋತ್ಪಾದಕರು ಯೋಜಿಸಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದಾಗಲೆಲ್ಲ ಪುಂಡು ಪೋಕರಿಗಳಿಗೆ ರೆಕ್ಕೆ ಬರುತ್ತದೆ. ಮುಸ್ಲಿಂ ಸಂಘಟನೆಗಳ ಪ್ರಕರಣ ಹಿಂಪಡೆಯುವಿಕೆ, ಶಿವಮೊಗ್ಗ ಹಾಗೂ ಕೋಲಾರದ ಘಟನೆಗೆ ಕ್ರಮ ವಹಿಸದಿರುವುದು ಮೊದಲಾದವುಗಳಿಂದಾಗಿಯೇ ಇಂತಹ ಅನಾಹುತ ನಡೆಯುತ್ತಿದೆ ಎಂದರು.

ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದರ ಬಗ್ಗೆ ನಾನು ವಿಧಾನಸಭೆಯಲ್ಲಿ ಮಾತನಾಡಿದ್ದೆ. ಪಾಕಿಸ್ತಾನ ಜಿಂದಾಬಾದ್ ಎಂದರೂ ಕಾಂಗ್ರೆಸ್ ಶಾಸಕರು ಅವರ ಪರವಾಗಿ ನಿಂತರು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರಂತೂ ಇದು ತಿರುಚಿದ ವೀಡಿಯೋ ಎಂದಿದ್ದಾರೆ. ಕುಕ್ಕರ್ ಬಾಂಬ್ ಸ್ಫೋಟಿಸಿದವರನ್ನು ಬ್ರದರ್ ಎನ್ನುವ ಇವರು, ರಾಮೇಶ್ವರ ಕೆಫೆಯಲ್ಲಿ ಸ್ಫೋಟ ಮಾಡಿದವರನ್ನು ಅಂಕಲ್ ಎನ್ನಬಹುದು.‌ ದಯವಿಟ್ಟು ರಾಜ್ಯದ ಘನತೆಗೆ ಧಕ್ಕೆ ತರದೆ ಭದ್ರತೆ ಬಗ್ಗೆ ಗಮನಹರಿಸಿ ಎಂದರು‌.

Advertisement

ಆಡಳಿತ ಪಕ್ಷದ ಮೇಲೆ ದೊಡ್ಡ ಜವಾಬ್ದಾರಿ ಇದೆ. ಪದೇ ಪದೆ ಇಂತಹ ಘಟನೆ ನಡೆದಾಗ ಶಾಂತಿ‌ ಕದಡುತ್ತದೆ. ಕೂಡಲೇ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸಬೇಕು. ಗುಪ್ತಚರ ದಳ ಬದುಕಿದ್ದರೆ, ಸರ್ಕಾರ ಬದುಕಿದ್ದರೆ ಕೂಡಲೇ ಕ್ರಮ ಕೈಗೊಳ್ಳಲಿ. ಮತ ರಾಜಕಾರಣ ಬಿಟ್ಟು ಕ್ರಮ ವಹಿಸಿ. ದೇಶದ್ರೋಹದ ಸಂದರ್ಭದಲ್ಲೂ ಎಚ್ಚರವಾಗದಿದ್ದರೆ ಜನರು ಕ್ಷಮಿಸಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಓಲೈಕೆ ರಾಜಕಾರಣ ಈ ಘಟನೆ ನಡೆಯಲು ಓಲೈಕೆ ರಾಜಕಾರಣವೇ ಕಾರಣ. ಸರ್ಕಾರ ಕ್ರಮ ಕೈಗೊಳ್ಳಲು ನಾವೆಲ್ಲರೂ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಆರ್.ಅಶೋಕ ತಿಳಿಸಿದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ