Connect with us

Featured

ಡಿಕೆಶಿ ಮನೆ ಪಕ್ಕವೇ ಮನೆ ಖರೀದಿ ಬಗ್ಗೆ ನೋ ಕಾಮೆಂಟ್ಸ್ – ರಾಜಕೀಯವೇ ಬೇರೆ, ಕುಟುಂಬದ ವಿಷಯವೇ ಬೇರೆ: ರಮೇಶ್​ ಜಾರಕಿಹೊಳಿ

ರೈಸಿಂಗ್​ ಕನ್ನಡ:

ನಾಗರಾಜ್​. Y. ಕೊಪ್ಪಳ

Advertisement

ರಾಜಕಾರಣವೇ ಬೇರೆ, ಕುಟುಂಬದ ವಿಷಯವೇ ಬೇರೆ. ಕುಟುಂಬದ ವಿಷಯ ಬಂದರೆ ಜಾರಕಿಹೊಳಿ ಸಹೋದರರು ಎಲ್ಲರೂ ಒಂದೇ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಕೊಪ್ಪಳ ತಾಲೂಕಿನ ಹುಲಗಿಯಲ್ಲಿ ವಿಜಯನಗರ ಕಾಲುವೆಗಳ ಆಧುನೀಕರಣ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ರಮೇಶ್​ ಜಾರಕಿಹೊಳಿ, ಲಖನ್ ಜಾರಕಿಹೊಳಿ ಗೃಹಪ್ರವೇಶದಲ್ಲಿ ಭಾಗಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ರಾಜಕೀಯವೇ ಬೇರೆ, ಕುಟುಂಬದ ವಿಷಯವೇ ಬೇರೆ. ರಾಜಕೀಯದ ಹೊರತಾಗಿ ನಾವೆಲ್ಲರೂ ಅಣ್ಣತಮ್ಮಂದಿರು ಎಂದರು.

ಅಗತ್ಯ ಇರುವ ಕಡೆ ಮತ್ತೇ ಲಾಕ್‌ಡೌನ್ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಿಎಂ ಬಿಎಸ್‌ವೈ ನೇತೃತ್ವದಲ್ಲಿ ಕೊರೊನಾ ನಿಯಂತ್ರಣ ಕುರಿತು ಉತ್ತಮ ಕೆಲಸಗಳು ಆಗುತ್ತಿವೆ‌. ವಲಸೆ ಕಾರ್ಮಿಕರು ರಾಜ್ಯಕ್ಕೆ ಮರಳಿದ ನಂತರ ಸೋಂಕು ಸಮುದಾಯದಲ್ಲಿ ಹರಡುವ ಭೀತಿ ಹೆಚ್ಚಾಗಿದೆ. ಈ ನಿಟ್ಟಿನಲ್ಲೂ ಸರಕಾರ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳುತ್ತಿದೆ. ಮತ್ತೆ ಲಾಕ್‌ಡೌನ್ ಮಾಡುವ ಅಗತ್ಯ ಸದ್ಯಕ್ಕಿಲ್ಲ ಎಂದು ಪ್ರತಿಕ್ರಿಯೆ ನೀಡಿದರು.

ಖಾಸಗಿ ಆಸ್ಪತ್ರೆಯಿಂದ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುವ ಕುರಿತು ಡಿಕೆಶಿ ವಿರೋಧ ವ್ಯಕ್ತಪಡಿಸುವ ಬದಲು ರಾಜ್ಯ ಸರಕಾರಕ್ಕೆ ಸಹಕಾರ ನೀಡಲಿ. ಈ ನಿಟ್ಟಿನಲ್ಲಿ ವಿರೋಧ ಪಕ್ಷದ ನಾಯಕರು ಸರಕಾರಕ್ಕೆ ಸಲಹೆ-ಸೂಚನೆ ನೀಡಲಿ‌ ಎಂದು ಹೇಳಿದರು.

Advertisement

ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಮನೆ ಪಕ್ಕದಲ್ಲೇ ಮನೆ ಖರೀದಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ನೋ ಕಾಮೆಂಟ್ಸ್. ಆ ಕುರಿತು ನಾನೇನೂ ಹೇಳಲಾರೆ ಎಂದಷ್ಟೇ ಪ್ರತಿಕ್ರಿಯೆ ನೀಡಿದರು. ಒಂದೇ ಕಾಮಗಾರಿಯನ್ನು ಎರಡೆರಡು ಬಾರಿ ಉದ್ಘಾಟನೆ ಮಾಡಿದ್ದು ಎಷ್ಟರ ಮಟ್ಟಿಗೆ ಸರಿ ಎ‌ಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಚಿವನಾಗಿ ಉದ್ಘಾಟನೆ ಮಾಡಿದ್ದೇನೆ. ಈ ಮುಂಚೆ ಉದ್ಘಾಟನೆ ಮಾಡಿದರು ಎನ್ನುತ್ತಿರುವ ರಾಘವೇಂದ್ರ ಹಿಟ್ನಾಳ ಪಕ್ಕದಲ್ಲೇ ಇದ್ದಾರೆ‌. ಅವರನ್ನೇ ಕೇಳಿ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದರು.

ಈ ವೇಳೆ ಸಂಸದ ಸಂಗಣ್ಣ ಕರಡಿ, ಶಾಸಕ ರಾಘವೇಂದ್ರ ಹಿಟ್ನಾಳ, ಹಾಲಪ್ಪ ಆಚಾರ್, ಪರಣ್ಣ ಮುನವಳ್ಳಿ, ಬಸವರಾಜ ದಡೇಸೂಗೂರು ಇತರರು ಇದ್ದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ