Connect with us

Featured

ಕೊರೋನಾ ಪೀಡಿತರು ತೀವ್ರಗತಿಯಲ್ಲಿ ಚೇತರಿಕೆ- 66% ರಷ್ಟು ರೋಗಿಗಳು ಗುಣಮುಖ- ಕೊರೊನಾ ಮುಕ್ತಮಾಡಲು ಜನರ ಸಹಕಾರವೇ ಅತೀ ಮುಖ್ಯ

ರೈಸಿಂಗ್​ ಕನ್ನಡ:

ಕಲಬುರಗಿ:

ದೇಶದಲ್ಲಿಯೇ ಮಹಾಮಾರಿ ಕೊರೋನಾ ಸೋಂಕಿಗೆ ಮೊದಲ ಮೃತ ಪ್ರಕರಣ ವರದಿಯಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ. ಈಗ ಕೊರೋನಾ ಪೀಡಿತರು ತೀವ್ರಗತಿಯಲ್ಲಿ ಚೇತರಿಕೆ ಕಾಣುತ್ತಿರುವುದು ಕೂಡ ಕಲಬುರಗಿ ಜಿಲ್ಲೆಯಲ್ಲೇ. ಕೊರೊನಾ  ಸೋಂಕಿತರ ಪೈಕಿ 66%ರಷ್ಟು ಜನ ಗುಣಮುಖರಾಗಿ ಮನೆಗೆ ಮರಳುತ್ತಿದ್ದಾರೆ

– ಶರತ್ ಬಿ. ಜಿಲ್ಲಾಧಿಕಾರಿ ಕಲಬುರಗಿ

Advertisement

ಕಲಬುರಗಿ ಜಿಲ್ಲೆಯಲ್ಲಿ ಜೂನ್ 24ರ ವರೆಗೆ ಪತ್ತೆಯಾದ 1254 ಕೊರೋನಾ ಪೀಡಿತರ ಪೈಕಿ 829 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಗುಣಮುಖರಾದವರ ಪ್ರಮಾಣ ಶೇ.66 ರಷ್ಟಿದೆ. ಪ್ರಸ್ತುತ 412 ರೋಗಿಗಳು ಸಕ್ರಿಯರಾಗಿ ಚಿಕಿತ್ಸೆ ಪಡೆಯುತ್ತಿದ್ದು, ಇವರ ಪ್ರಮಾಣ ಶೇ.33. ಉಳಿದಂತೆ ಕೋವಿಡ್-19 ಸೋಂಕಿಗೆ 13 ಜನ ನಿಧನ ಹೊಂದಿದ್ದು, ಮರಣ ಪ್ರಮಾಣ ಶೇ.1 ರಷ್ಟು ಮಾತ್ರ. ಸೋಂಕಿಗೆ ಕೊನೆಯುಸಿರೆಳದ 13 ಜನರಲ್ಲಿ 60 ಮತ್ತು ಮೇಲ್ಪಟ್ಟ ಹಾಗೂ 55 ಮತ್ತು ಮೇಲ್ಪಟ್ಟ ವಯಸ್ಸಿನ ತಲಾ 5 ಜನರಿದ್ದಾರೆ. ಮರಣ ಹೊಂದಿದ 13 ಜನರ ಪೈಕಿ ಬಹುತೇಕರು ಮಾರಣಾಂತಿಕ, ದೀರ್ಘಕಾಲದ ಮತ್ತು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು.

ಕೊರೋನಾ ಪೀಡಿತ 1254 ಜನರ ಹಿನ್ನೆಲೆ ನೋಡಿದಾಗ 1033 ಸೋಂಕಿತರು (ಶೇ.82) ಮಹಾರಾಷ್ಟ್ರ ಪ್ರವಾಸ ಹಿನ್ನೆಲೆ, 160 ಸೋಂಕಿತರು (ಶೇ.12.75) ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದವರು, 20 ಸೋಂಕಿತರು (ಶೇ.1.59) ಮಹಾರಾಷ್ಟ್ರ ಹೊರತುಪಡಿಸಿ ಇತರೆ ರಾಜ್ಯ ಪ್ರವಾಸ ಹಿನ್ನೆಲೆ, 17 ಸೋಂಕಿತರು (ಶೇ.1.37) ಐ.ಎಲ್.ಐ ಹಿನ್ನೆಲೆ, 17 ಸೋಂಕಿತರು (ಶೇ.1.35) ತೀವ್ರ ಉಸಿರಾಟ ತೊಂದರೆ ಹಿನ್ನೆಲೆ ಹಾಗೂ 7 ಸೋಂಕಿತರು (ಶೇ.0.56) ಹೊರ ದೇಶ ಪ್ರವಾಸ ಹಿನ್ನೆಲೆಯಿಂದ ಸೋಂಕಿಗೆ ಗುರಿಯಾಗಿದ್ದಾರೆ.

ಜಿಲ್ಲೆಯಲ್ಲಿ ಸಕ್ರಿಯ ಕೊರೋನಾ ಪೀಡಿತ 412 ರೋಗಿಗಳ ಪೈಕಿ  ಕೇವಲ 9 ಜನ ಮಾತ್ರ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಸಾಮಾನ್ಯ ವಾರ್ಡ್‍ನಲ್ಲಿಯೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಚ್ಚರಿಯ ಸಂಗತಿ ಅಂದರೆ ಪ್ರಸ್ತುತ ಕೋವಿಡ್​ 19 ಸೋಂಕಿತ ಪೈಕಿ ಯಾರೂ ಕೂಡ ವೆಂಟಿಲೇಟರ್​ ಸಹಾಯದ ಮೂಲಕ ಚಿಕಿತ್ಸೆ ಪಡೆಯುತ್ತಿಲ್ಲ.

Advertisement

ಮಾರ್ಚ್ 10 ರಂದು ಕಲಬುರಗಿ ನಗರದ 76 ವರ್ಷದ ವಯೋವೃದ್ಧ ಸೌದಿ ಅರೇಬಿಯಾ ಪ್ರವಾಸ ಹಿನ್ನೆಲೆ ಮತ್ತು ವಯೋಸಹಜ ಕಾಯಿಲೆಯಿಂದ ಕೊರೋನಾ ಸೋಂಕಿಗೆ ತುತ್ತಾಗಿ ನಿಧನಗೊಂಡಿದ್ದರು. ಅಂದಿನಿಂದಲೆ ಜಿಲ್ಲೆಯಲ್ಲಿ ಒಂದು ರೀತಿಯ ಅಘೋಷಿತ ಬಂದ್ ಪರಿಸ್ಥಿತಿ ನಿರ್ಮಾಣವಾಗಿತ್ತು. ಒಂದು ರೀತಿಯಲ್ಲಿ ದೇಶದಲ್ಲಿ ಮೊದಲ ಸ್ವಯಂಘೋಷಿತ ಲಾಕ್ ಡೌನ್ ಇದಾಗಿತ್ತು.

ಲಾಕ್ ಡೌನ್ 3.0., 4.0 ಮತ್ತು ತದನಂತರ ದೇಶದಾದ್ಯಂತ ಲಾಕ್ ಡೌನ್‍ನಿಂದ ಸಿಲುಕಿಕೊಂಡ ವ್ಯಕ್ತಿಗಳು, ವಲಸೆ ಕಾರ್ಮಿಕರು, ಹಾಗೂ ಪ್ರವಾಸಿಗರು ತವರು ರಾಜ್ಯಕ್ಕೆ ಮರಳಲು ಅವಕಾಶ ಕಲ್ಪಿಸಿದ ಪರಿಣಾಮ ಮಹಾರಾಷ್ಟ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಗೆ ವಲಸೆ ಕಾರ್ಮಿಕರು ಮರಳಿದರು. ಇದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಯಿತು. ಪ್ರಸ್ತುತ ಮಹಾರಾಷ್ಟ್ರದಿಂದ ಬರುವವರ ಸಂಖ್ಯೆ ಇಳಿಮುಖವಾಗಿದೆ.

ಕೊರೋನಾ ಪೀಡಿತರ ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮರಣ ಪ್ರಮಾಣ ಕೇವಲ ಶೇ.1ರಷ್ಟಿದೆ. ಹೀಗಾಗಿ ಕೊರೋನಾ ಸೋಂಕಿಗೆ ಯಾರು ಆತಂಕಕ್ಕೊಳಗಾಗದೆ ಎಚ್ಚರಿಕೆಯ ಜೀವನ ನಡೆಸಬೇಕಾಗಿದೆ. ಲಾಕ್ ಡೌನ್ ಸಡಿಲಿಕೆ ನೀಡಿದ ಕಾರಣ ಯಾರು ಅನಗತ್ಯ ತಿರುಗಾಡಬಾರದು.

ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯ ಸೂಚನೆಗಳನ್ನು ಪಾಲಿಸುವುದಲ್ಲದೆ ಅಗತ್ಯ ಸಹಕಾರ ನೀಡಬೇಕು. ಕಡ್ಡಾಯ ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಕಾಪಾಡುವುದು ಮತ್ತು ಆಗಾಗ ಕೈಗಳನ್ನು ಸ್ವಚ್ಛವಾಗಿ ತೊಳೆದುಕೊಳ್ಳುವುದನ್ನು ಅಭ್ಯಾಸವಾಗಿ ಮಾಡಿಕೊಂಡಿದಲ್ಲಿ ಕಲಬುರಗಿಯನ್ನು ಕೊರೋನಾ ಮುಕ್ತ ಜಿಲ್ಲೆಯನ್ನಾಗಿ ಮಾಡಬಹುದಾಗಿದ್ದು, ಜಿಲ್ಲೆಯ ಮಹಾಜನತೆ ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಡಿ.ಸಿ. ಶರತ್ ಬಿ. ಅವರು ಮನವಿ ಮಾಡಿದರು.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ