ರಾಜಕೀಯ
ಕಲಬುರ್ಗಿ ಎಂಪಿ ಕಾಂಗ್ರೆಸ್ ಟಿಕೆಟ್ ಯಾರಿಗೆ?
![](https://risingkannada.com/wp-content/uploads/2024/03/mp.jpg)
ಕಲಬುರ್ಗಿ : ಕಲಬುರಗಿ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ದಿಗ್ಗಜ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರು ಜಿಲ್ಲೆ. ಕಳೆದ ಸಲ ಮಲ್ಲಿಕಾರ್ಜುನ ಖರ್ಗೆ ಲೋಕಸಭಾ ಚುನಾವಣೆಯಲ್ಲಿ ಸೋತ್ತಿದ್ದರು.ಈಗ ಮತ್ತೆ ಎಂಪಿ ಚುನಾವಣೆ ಬಂದಿದೆ. ಈ ಸಲ
ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿದ್ದಾರೆ ಹಾಗೆ ರಾಜ್ಯ ಸಭಾ ಸದಸ್ಯಸ್ಥಾನ ಇನ್ನೂ ನಾಲ್ಕು ವರ್ಷ ಇದೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶವನ್ನು ಸುತ್ತಿ ಚುನಾವಣಾ ಪ್ರಚಾರ ಮಾಡುವ ಜವಾಬ್ದಾರಿ ಕೂಡ ಮಲ್ಲಿಕಾರ್ಜುನ ಖರ್ಗೆಯವರ ಮೇಲಿದೆ, ಆದ್ದರಿಂದ ಈ ಬಾರಿ ಅವರು ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವುದು ಡೌಟು ಎಂದೆ ಹೇಳಲಾಗುತ್ತಿದೆ, ಮಲ್ಲಿಕಾರ್ಜುನ ಖರ್ಗೆ ಅವರು ಕಣಕ್ಕಿಳಿಯದೇ ಇದ್ದರೆ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ಅವರ ಹೆಸರು ಮುನ್ನೆಲೆಗೆ ಬರುತ್ತಿದೆ.
![](https://risingkannada.com/wp-content/uploads/2024/03/mp1-1024x1024.jpg)
ಕಲಬುರಗಿ ಜಿಲ್ಲೆಯ ರಾಜಕೀಯ ವಲಯದಲ್ಲಿ ತುಂಬಾ ಹೆಸರು ಮಾಡಿರುವ ವ್ಯಕ್ತಿ ಈ ರಾಧಾಕೃಷ್ಣ, ಚುನಾವಣಾ ಚತುರ, ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ ಖರ್ಗೆ ಅವರ ಚುನಾವಣೆಗಳ ಗೆಲುವಿನ ಹಿಂದಿನ ರಾಜಕೀಯ ಶಕ್ತಿ ಈ ರಾಧಾಕೃಷ್ಣ ಅವರು ಎನ್ನುವುದು ಕಲಬುರಗಿ ಜನರಿಗೆ ಗೊತ್ತಿರುವ ವಿಷಯ, ಈ ಬಾರಿ ಇವರನ್ನು ಕಣಕ್ಕಿಳಿಸಿದರೆ ಗೆಲುವು ಸುಲಭ ಎನ್ನುವುದು ಕಾಂಗ್ರೆಸ್ ನಾಯಕರ ಲೆಕ್ಕಾಚಾರ.ಸದ್ಯ ಇನ್ನೂ ಕೂಡ ಯಾವುದೇ ನಿರ್ಣಯಕ್ಕೆ ಬಂದಿಲ್ಲ ಕಾಂಗ್ರೆಸ್ ನಾಯಕರು.
ಫೆ.21 ರಂದು ಬೆಂಗಳೂರಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸಚಿವ ಶರಣಪ್ರಕಾಶ ಪಾಟೀಲ್ ನೇತೃತ್ವದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಆಗಬೇಕಾ ಅಥವಾ ಮಲ್ಲಿಕಾರ್ಜುನ ಖರ್ಗೆಯವರ ಅಳಿಯ ರಾಧಾಕೃಷ್ಣ ಅವರು ಆಗಬೇಕಾ ಅಥವಾ ಬೇರೆ ಯಾರು ಸ್ಪರ್ಧೆ ಮಾಡಿದ್ರೆ ಗೆಲ್ಲ ಬಹುದು ಎಂದು ಚರ್ಚೆ ಮಾಡಿದ್ದಾರೆ. ಸಭೆಯಲ್ಲಿ ಜಿಲ್ಲೆಯ ಶಾಸಕರು ಭಾಗಿಯಾಗಿದ್ದರು.ಯಾರಾದ್ರೆ ಸೂಕ್ತ ಎಂಬ ಅಭಿಪ್ರಾಯ ಶಾಸಕರಿಂದ ಪಡೆದಿದ್ದಾರೆ ಎನ್ನಲಾಗಿದೆ.ಸದ್ಯ ಕಲಬುರ್ಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಜಿಲ್ಲೆಯ ಜನರಲ್ಲಿ ಕುತೂಹಲ ಮೂಡಿಸಿದ್ದಂತ್ತು ಸತ್ಯ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?