Featured
ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವರ್ಗಾವಣೆ: ನೂತನ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್
![](https://risingkannada.com/wp-content/uploads/2020/07/KamalPant.jpg)
ರೈಸಿಂಗ್ ಕನ್ನಡ :
ಬೆಂಗಳೂರು :
ನಗರದ ನೂತನ ಪೊಲೀಸ್ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಕಮಲ್ ಪಂತ್ ಅವರನ್ನ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಮಲ್ ಪಂತ್ ಶುಕ್ರವಾರ ಸಂಜೆ ಅಧಿಕಾರ ಸ್ವೀಕರಿಸಲಿದ್ದಾರೆ.
ಭಾಸ್ಕರ್ ರಾವ್ ಸೇರಿದಂತೆ ಮೂವರು ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿದೆ.
ಗುಪ್ತಚರ ವಿಭಾಗದಲ್ಲಿ ಹೆಚ್ಚುವರಿ ಮಹಾನಿರ್ದೇಶಕ ಕಮಲ್ ಪಂತ್ ಅವರನ್ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ವರ್ಗಾಯಿಸಲಾಗಿದೆ.
![](https://risingkannada.com/wp-content/uploads/2020/07/bhaskar-rao-ips-750x.jpg)
ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದ ಭಾಸ್ಕರ್ರಾವ್ ಅವರನ್ನ ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಹಿಸಲಾಗಿದೆ. ಕಮಲ್ ಪಂತ್ ಅವರಿಂದ ತೆರೆವಾಗಿರುವ ಗುಪ್ತಚರ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕ ಸ್ಥಾನವನ್ನ ಅಪರಾಧ ವಿಭಾಗ ಮತ್ತು ಆರ್ಥಿಕ ಅಪರಾಧಗಳ ಹೆಚ್ಚುವರಿ ಪೊಲೀಸ್ ಆಯುಕ್ತ ಬಿ. ದಯಾನಂದ್ಗೆ ನೀಡಲಾಗಿದೆ.
ಲಾಕ್ಡೌನ್ ಸಂದರ್ಭದಲ್ಲಿ ಚರ್ಚ್ ಒಂದರ ಪ್ರಾರ್ಥನೆ ಮಾಡುವ ವಿಡಿಯೋ ವೈರಲ್ ಅಗಿತ್ತು ಇದಲ್ಲದೇ ಭಾಸ್ಕರ್ ರಾವ್ ಕಾರ್ಯವೈಖರಿ ಬಗ್ಗೆ ಅಸಮಾಧಾನ ಕೇಳಿಬಂದಿತ್ತು . ಭಾಸ್ಕರ್ ರಾವ್ ಅವರನ್ನ ವರ್ಗಾವಣೆಯಾಗುತ್ತಾರೆ ಎನ್ನುವ ಮಾತು ಕೆಲವು ದಿನಗಳಿಂದ ಕೇಳಿ ಬಂದಿತ್ತು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?