Featured
ಕನ್ನಡದ ಹಾಸ್ಯ ಕಲಾವಿದ ರಾಜ್ ಗೋಪಾಲ್ ನಿಧನ – ಇತ್ತೀಚಿನ ದಿನಗಳಲ್ಲಿ ಅವಕಾಶವಿಲ್ಲದೆ ನೊಂದಿದ್ದ ಹಿರಿಯ ಕಲಾವಿದ
ರೈಸಿಂಗ್ ಕನ್ನಡ :
ಬೆಂಗಳೂರು :
ಕೆಲ ದಿನಗಳಿಂದ ಅನರೋಗ್ಯದಿಂದ ಬಳಲುತ್ತಿದ್ದ ಹಾಸ್ಯ ನಟ ರಾಜ ಗೋಪಾಲ್ (69)ನಿಧನರಾಗಿದ್ದಾರೆ. ಅಸ್ತಮ, ಮತ್ತು ಕಿಡ್ನಿ ಸಮಸ್ಯೆ ಯಿಂದ ಬಳಲುತ್ತಿದ್ದ ಅವರು ಬುಧವಾರ ರಾತ್ರಿ 1.ಗಂಟೆಗೆ ಮನೆಯಲ್ಲೆ ಕೊನೆಯುಸಿರೆಳೆದಿದ್ದಾರೆ.
69 ವರ್ಷದ ರಾಜ್ ಗೋಪಾಲ್ ಮೂವರು ಹೆಣ್ಣುಮಕ್ಕಳನ್ನ ಅಗಲಿದ್ದಾರೆ..ರಾಜ್ ಗೊಪಾಲ್ ಕೆಂಗೇರಿ ಬಳಿಯ ವಲಗರ ಹಳ್ಳಿಯಲ್ಲಿ ಬಳಿ ನಿರ್ಮಿಸಿರೋ ವಸತಿ ಸಮುಚ್ಚಯದಲ್ಲಿ ವಾಸವಿದ್ರು.
ಕನ್ನಡ, ತಮಿಳು ಸೇರಿದಂತೆ 6.50 ಕ್ಕು ಹೆಚ್ಚಿನ ಸಿನಿಮಾಗಳಲ್ಲಿ ನಟಿಸಿದ್ದರು. ಜನಪ್ರಿಯ ಆಕ್ರೇಸ್ಟ್ರಾಗಳ್ಲಿ ಮಿಮಿಕ್ರಿ ಮಾಡಿ ಹೆಸರು ಮಾಡಿದ್ದ ರಾಜ್ ಗೋಪಾಲ್.. ವಿಷ್ಣುವರ್ಧನ್, ಅಂಬರೀಶ್, ಪ್ರಭಾಕರ್ ಹೀಗೆ ಕನ್ನಡ ದೊಡ್ಡ ನಟರ ಜೊತೆ ಅಭಿನಯಿಸಿದ್ರು..
ಸಾಯಿ ಪ್ರಕಾಶ್ ನಿರ್ದೇಶನದ ಸಿನಿಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ತಿದ್ರು..ಕೆಲ ವರ್ಷಗಳ ಹಿಂದಿನಿಂದ ಸಿನಿಮಾ ಅವಕಾಶ ಇಲ್ಲದೆ ಜೀವನ ನಿರ್ವಹಣೆಗೆ ಕಷ್ಟ ಪಡುತ್ತಿದ್ರು.
ಸಿನಿಮಾದಲ್ಲಿ ನಟಿಸೋಕೆ ಯಾರೂ ಕರೆಯುತ್ತಿಲ್ಲ, ನಮ್ಮಂತ ಬಡ ಕಲಾವಿದರಿಗೆ ಯಾರು ನಟಿಸೋಕೆ ಅವಕಾಶ ಕೊಡಲ್ಲ ಅಂತ ಕಣ್ಣೀರು ಹಾಕುತ್ತಿದ್ರು..
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?