ರೈಸಿಂಗ್ ಕನ್ನಡ :
ಸಿನಿಮಾ ಡೆಸ್ಕ್ :
ʻಲಾʼ ಚಿತ್ರದ ಮೋಷನ್ ಪೋಸ್ಟರ್ ಅನ್ನ ಅಮೆಜಾನ್ ಪ್ರೈಮ್ ಬಿಡುಗಡೆಗೊಳಿಸಿದೆ. ಜುಲೈ 17 ರಂದು ಬಿಡುಗಡೆಯಾಗಲಿರುವ ʻಲಾʼ ಚಿತ್ರದ ಟ್ರೇಲರ್ ಗುರುವಾರ ಬಿಡುಗಡೆಯಾಗಲಿದೆ. ಪುನೀತ್ ರಾಜ್ಕುಮಾರ್ ರವರ ಪಿಆರ್ಕೆ ಪ್ರೊಡಕ್ಷನ್ನಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ನ್ಯಾಯಕ್ಕಾಗಿ ಹೋರಾಡುವ ನಂದಿನಿ ಪಾತ್ರದ ಮೂಲಕ ರಾಗಿಣಿ ಚಂದ್ರನ್ ಸ್ಯಾಂಡಲ್ವುಡ್ ಪ್ರವೇಶಿಸಲಿದ್ದಾರೆ.
ಥಿಯೇಟರ್ಗಿಂತ ಮೊದಲು ನೇರವಾಗಿ ಓಟಿಟಿ ಪ್ಲಾಟ್ಫಾರಂ ಅಮೆಜಾನ್ ಪ್ರೈಮ್ನಲ್ಲಿ ಬಿಡುಗಡೆಯಾಗಲಿರುವ ಕನ್ನಡದ ಮೊದಲ ಚಿತ್ರ ʻಲಾʼ ಆಗಿದೆ. ಜುಲೈ 17 ರಂದು ಭಾರತ ಸೇರಿದಂತೆ ವಿಶ್ವದಾದ್ಯಂತ ಏಕಕಾಲದಲ್ಲಿ ಅಮೆಜಾನ್ ಪ್ರೈಮ್ನಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ.
ಈ ಚಿತ್ರದಲ್ಲಿ ಮುಖ್ಯಮಂತ್ರಿ ಚಂದ್ರು, ಅಚ್ಯುತ್ ಕುಮಾರ್, ಸುಧಾರಾಣಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ರಘು ಸಮರ್ಥ್ ನಿರ್ದೇಶನದ ಈ ಸಿನಿಮಾದ ನಿರ್ಮಾಮ ಜವಾಬ್ದಾರಿಯನ್ನ ಅಶ್ವಿನಿ ಪುನೀತ್ ರಾಜ್ಕುಮಾರ್ ಮತ್ತು ಎಂ.ಗೋವಿಂದ ಹೊತ್ತು ಮುಗಿಸಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?