ಆರೋಗ್ಯ
ಸಿಎಂ ಬಸವರಾಜ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್

ರೈಸಿಂಗ್ ಕನ್ನಡ :
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್ ಆಗಿದೆ. ಈ ಬಗ್ಗೆ ಸ್ವತಃ ಸಿಎಂ ಬೊಮ್ಮಾಯಿ ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಇಂದು ನನಗೆ ಕೊರೋನಾ ಪಾಸಿಟಿವ್ ಬಂದಿದೆ. ಸದ್ಯಕ್ಕೆ ನಾನು ಆರಾಮಾಗಿ ಇದ್ದೇನೆ. ನನ್ನ ಸಂಪರ್ಕದಲ್ಲಿದ್ದವರು ಕೊರೋನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಟ್ವೀಟರ್ ಮೂಲಕ ಸೋಂಕು ಬಗ್ಗೆ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.#Covid_19— Basavaraj S Bommai (@BSBommai) January 10, 2022
ಸದ್ಯ ಮನೆಯಲ್ಲಿ ಹೋಮ್ ಐಸೋಲೇಷನ್ನಲ್ಲಿರುವ ಸಿಎಂ ಬೊಮ್ಮಾಯಿ, ಇವತ್ತು ಬೂಸ್ಟರ್ ಡೋಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. ಚಂಪಾ ಅವ್ರ ಅಂತ್ಯಕ್ರಿಯೆಯಲ್ಲೂ ಭಾಗಿಯಾಗಿದ್ರು. ಇದರಿಂದಾಗ ಆತಂಕ ಮನೆ ಮಾಡಿದೆ. ಇಂದು ನಿಧನರಾದ ಹಿರಿಯ ಸಾಹಿತಿ ಪ್ರೋ. ಚಂದ್ರಶೇಖರ ಪಾಟೀಲ ಅವರ ಅಂತಿಮ ಸಂಸ್ಕಾರವನ್ನು ಸರ್ಕಾರಿ ಗೌರವದೊಂದಿಗೆ ನೆರವೇರಿಸಿ, ಅಂತಿಮ ನಮನಗಳನ್ನು ಸಲ್ಲಿಸಲಾಯಿತು.#ಚಂಪಾ pic.twitter.com/qMU8zB3wkw— Basavaraj S Bommai (@BSBommai) January 10, 2022 ನಮ್ಮ ಕೋವಿಡ್ ಯೋಧರು ಮತ್ತು ಸಹ-ಅಸ್ವಸ್ಥತೆ ಹೊಂದಿರುವವರ ಜೀವನವನ್ನು ಸುರಕ್ಷಿತವಾಗಿರಿಸಲು,ಇಂದಿನಿಂದ ರಾಜ್ಯದಲ್ಲಿ ಲಸಿಕೆಯ ಬೂಸ್ಟರ್ ಡೋಸ್ಗಳನ್ನು ನೀಡಲು ಪ್ರಾರಂಭಿಸಿದ್ದೇವೆ.
ನಮ್ಮ ಎಲ್ಲಾ ಅರ್ಹ ನಾಗರಿಕರು #Covid19 ಮತ್ತು ಅದರ ರೂಪಾಂತರಗಳ ವಿರುದ್ಧ ತಮ್ಮನ್ನು ತಾವು ರಕ್ಷಿಸಲು ಈ ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆಯಲು ವಿನಂತಿಸುತ್ತೇನೆ. pic.twitter.com/i8FiuLce6Z— Basavaraj S Bommai (@BSBommai) January 10, 2022
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?