Featured
ರಾಜಸ್ಥಾನ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ : ಬಿಜೆಪಿಯಿಂದ ಪ್ರಜಾಪ್ರಭುತ್ವ ವಿರೋಧಿ ಕೃತ್ಯ : ಸಿದ್ದರಾಮಯ್ಯ
ರೈಸಿಂಗ್ ಕನ್ನಡ :
ಬೆಂಗಳೂರು :
ರಾಜಸ್ತಾನದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಹೊರಟಿರುವ ಬಿಜೆಪಿ ಪ್ರಜಾಪ್ರಭುತ್ವ ವಿರೋಧಿ ಕೃತ್ಯ ಅನುಸರಿಸುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.
ರಾಜಸ್ತಾನ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿಹುನ್ನಾರ ನಡೆಸಿದೆ ಎಂದು ಆರೋಪಿಸಿ ಕೆಪಿಸಿಸಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬಿಜೆಪಿಯ ಈ ಷಡ್ಯಂತ್ರದಲ್ಲಿ ರಾಜಸ್ಥಾನದ ರಾಜ್ಯಪಾಲರೂ ಭಾಗಿಯಾಗಿದ್ದಾರೆ. ಸಚಿವ ಸಂಪುಟದ ತೀರ್ಮಾನದಂತೆ ನಡೆದುಕೊಳ್ಳುವುದು ರಾಜ್ಯಪಾಲರ ಕರ್ತವ್ಯ. ಆದರೆ, ಅವರು ಆ ಪಕ್ಷಕ್ಕೆ ಸಹಕಾರ ನೀಡಲು ಅವರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಹೇಳಿದರು.
ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ರಕ್ಷಿಸಿ ಎಂದು ಕಾಂಗ್ರೆಸ್ ಪಕ್ಷ ಇಂದು ದೇಶಾದ್ಯಂತ ಪ್ರತಿಭಟನೆ ಮಾಡುತ್ತಿದೆ. ನಾವು ಯಾವುದೇ ಹಿಂಸಾತ್ಮಕವಾದ ಹೋರಾಟ ಮಾಡುತ್ತಿಲ್ಲ. ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲಿ ಶಾಂತಿಯುವಾಗಿ ಅನ್ಯಾಯ ಪ್ರತಿಭಟಿಸಲು ಸಂವಿಧಾನ ಹಕ್ಕು ಕೊಟ್ಟಿದೆ.
ಸರ್ಕಾರ ಚುನಾಯಿಸುವವರು ಮತದಾರರು. ಆ ಪರಮಾಧಿಕಾರ ಜನರಿಗೆ ಇದೆಯೇ ಹೊರತು ರಾಷ್ಟ್ರಪತಿ, ರಾಜ್ಯಪಾಲರು, ಪ್ರಧಾನಿಯವರು ಸೇರಿದಂತೆ ಯಾರಿಗೂ ಇಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಹೊರಟಿದ್ದಾರೆ. ಮೋದಿಯವರು ಪ್ರಧಾನಿಯಾದ ಬಳಿಕ ಸಂವಿಧಾನಕ್ಕೆ ಅಗೌರವ ತೋರುತ್ತಿರುವುದನ್ನು ನಾವು ಎಲ್ಲೆಡೆ ಕಾಣುತ್ತಿದ್ದೇವೆ. ಸಂವಿಧಾನದ ಚೌಕಟ್ಟಿನೊಳಗೆ ಸರ್ಕಾರಗಳು ನಡೆಯಬೇಕು. ಸಂವಿಧಾನ ಎಲ್ಲರಿಗೂ ಹಕ್ಕು ಮತ್ತು ಕತರ್ತವ್ಯಗಳನ್ನು ಕೊಟ್ಟಿದೆ.
ಬಿಜೆಪಿಯವರು ಚುನಾಯಿತ ಸರ್ಕಾರಗಳನ್ನು ಅಸ್ಥಿರಗೊಳಿಸಿ ನಮ್ಮ ಶಾಸಕರನ್ನು ಕುದುರೆ ವ್ಯಾಪಾರದ ಮೂಲಕ ಖರೀದಿ ಮಾಡಿ ಕೋಟ್ಯಂತರ ರೂ. ಖರ್ಚು ಮಾಡುತ್ತಾರೆ. ಕರ್ನಾಟಕದಲ್ಲಿಯೂ ಅದೇ ರೀತಿ ಆಯಿತು.
ಯಡಿಯೂರಪ್ಪ ಅವರು ಜನರಿಂದ ಚುನಾಯಿತರಾದ ಮುಖ್ಯಮಂತ್ರಿ ಅಲ್ಲ. ಜನ ಅವರಿಗೆ ಆಶೀರ್ವಾದ ಮಾಡಿರಲಿಲ್ಲ. ಕಾಂಗ್ರೆಸ್, ಜೆಡಿಎಸ್ ಶಾಸಕರನ್ನು ಖರೀದಿ ಮಾಡಿ, ಅವರಿಗೆ ಹಣದಾಸೆಗೆ ತೋರಿಸಿ ಮುಖ್ಯಮಂತ್ರಿ ಆಗಿದ್ದಾರೆ. ಇದೀಗ ಅವರು ವಿಧಾನಸೌಧದಲ್ಲಿ ಕೂತಿದ್ದಾರೆ.
ಇಡೀ ದೇಶದಲ್ಲಿ ಆಪರೇಷನ್ ಕಮಲ ಎಂಬುದು ಚಾಲ್ತಿಗೆ ಬಂದಿದ್ದರೆ ಅದು ಯಡಿಯೂರಪ್ಪ ಅವರಿಂದ. ಆಪರೇಷನ್ ಕಮಲ, ಆಪರೇಷನ್ ತೆನೆ ಹೊತ್ತ ಮಹಿಳೆ ಎಂಬುದೇ ಇರಲಿಲ್ಲ. 2008ರಲ್ಲಿ ಆಪರೇಷನ್ ಕಮಲ ಆರಂಭಿಸಿದ್ದೇ ಯಡಿಯೂರಪ್ಪ. ಇದೀಗ ಅದೇ ಆಪರೇಷನ್ ಮೂಲಕ ಅವರು ಮತ್ತೆ ಹಿಂಬಾಗಿಲಿನಿಂದ ಸರ್ಕಾರ ರಚನೆ ಮಾಡಿದ್ದಾರೆ.
ಕೊರೊನಾದಂಥ ಸಂಕಷ್ಟದ ಸಮಯದಲ್ಲಿ ಸರ್ಕಾರಕ್ಕೆ ಸಹಕಾರ ನೀಡದೆ ಭ್ರಷ್ಟಾಚಾರದ ಮಾತುಗಳನ್ನಾಡುತ್ತಿದ್ದಾರೆ ಎಂದು ಯಡಿಯೂರಪ್ಪ ಅವರು ಹೇಳುತ್ತಾರೆ. ಕೊರೊನಾ ನಿಯಂತ್ರಣಕ್ಕೆ, ಜನರ ಜೀವ ಉಳಿಸಲಿಕ್ಕೆ ನಮ್ಮ ಸಹಕಾರ ಸದಾ ಇರುತ್ತದೆ. ಆದರೆ, ವೈದ್ಯ ಉಪಕರಣಗಳ ಖರೀದಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ನಮ್ಮ ಸಹಕಾರ ಇಲ್ಲ.
ಈ ಹಿಂದೆ ಬಿಜೆಪಿಯವರು ಮಧ್ಯಪ್ರದೇಶ ಸರ್ಕಾರ ತೆಗೆದರು. ಇದೀಗ ರಾಜಸ್ಥಾನ ಸರ್ಕಾರ ತೆಗೆಯಲು ಹೊರಟಿದ್ದಾರೆ. ಅವರಿಗೆ ಕೊರೊನಾದ ಸಂಕಷ್ಟದ ಸಮಯ ಅನುಭವಕ್ಕೆ ಬಂದಿಲ್ಲವೇ ? ಮಾನ, ಮರ್ಯಾದೆ, ನೈತಿಕತೆ ಕಿಂಚಿತ್ತಾದರೂ ಇದ್ದಿದ್ದರೆ ಬಿಜೆಪಿಯವರು ಈ ಕೆಲಸ ಮಾಡುತ್ತಿರಲಿಲ್ಲ.
ರಾಜಸ್ಥಾನ ರಾಜ್ಯಪಾಲರು ಒಂದು ಕ್ಷಣವೂ ತಮ್ಮ ಹುದ್ದೆಯಲ್ಲಿ ಮುಂದುವರಿಯಬಾರದು. ಬಿಜೆಪಿ ಸಂವಿಧಾನಬದ್ಧವಾದ ಎಲ್ಲ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳಳುತ್ತಿದೆ. ರಾಜ್ಯಪಾಲರು ಹಾಗೂ ರಾಷ್ಟ್ರಪತಿಗಳ ಕಚೇರಿಯೂ ಇದರಲ್ಲಿ ಸೇರಿದೆ.
ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಯಡಿಯೂರಪ್ಪ ಅವರೇನೂ ಶಾಶ್ವತವಾಗಿ ಮುಖ್ಯಮಂತ್ರಿ ಹುದ್ದೆಯಲ್ಲಿ ಕೂರುವುದಿಲ್ಲ. ಹೀಗಾಗಿ ಪೊಲೀಸರು ಕಾನೂನುಬದ್ಧವಾಗಿ ನಡೆದುಕೊಂಡು ಪ್ರತಿಭಟನೆಗೆ ಹಾಗೂ ರಾಜ್ಯಪಾಲರ ಕಚೇರಿಗೆ ಹೋಗಲು ಅವಕಾಶ ಮಾಡಿಕೊಡಬೇಕು ಎಂದು ಸಿದ್ದರಾಮಯ್ಯ ಅವರು ಮನವಿ ಮಾಡಿದರು.
ಪ್ರಜಾಪ್ರಭುತ್ವದ ಕಗ್ಗೊಲೆ, ಸಂವಿಧಾನಕ್ಕೆ ಅಗೌರವ, ಸಂವಿಧಾನಬದ್ಧ ಸಂಸ್ಥೆಗಳಿಗೆ ಅಗೌರವ ತೋರಿಸುವ ಪ್ರಧಾನಿಯವರಿಗೆ ಧಿಕ್ಕಾರ ಎಂದು ಸಿದ್ದರಾಮಯ್ಯ ಅವರು ಹೇಳಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?