Featured
ಗಣೇಶೋತ್ಸವ ಆಚರಣೆಗೆ ಸರ್ಕಾರದ ಗ್ರೀನ್ಸಿಗ್ನಲ್- ಷರತ್ತು ಬದ್ಧ ಹಬ್ಬ ಮಾಡಲು ಸರ್ಕಾರದ ಮಾರ್ಗಸೂಚಿ
ರೈಸಿಂಗ್ ಕನ್ನಡ:
ಬೆಂಗಳೂರು:
ಕೊರೊನಾ ವೈರಸ್ ಹಿನ್ನಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ನಿರ್ಭಂಧ ವಿಧಿಸಿದ್ದ ಸರ್ಕಾರ, ವ್ಯಾಪಾಕ ವಿರೋಧದ ನಂತರ ತನ್ನ ನಿಲುವು ಬದಲಿಸಿಕೊಂಡಿದೆ. ಗಣೇಶನ ಹಬ್ಬಕ್ಕೆ ಸಂಬಂಧ ಪಟ್ಟಂತೆ ಪರಿಷ್ಕೃತ ಮಾರ್ಗಸೂಚಿಯನ್ನು ಬಿಡಗಡೆ ಮಾಡಿದ್ದು, ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಿದೆ.
ಈ ಬಗ್ಗೆ ಟ್ವೀಟರ್ನಲ್ಲಿ ಬರೆದುಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಪರಿಷ್ಕೃತ ಮಾರ್ಗಸೂಚಿಯಂತೆ, ಪರಿಸರ ಸ್ನೇಹಿ ಗಣೇಶೋತ್ಸವ ಆಚರಿಸಬೇಕು ಎಂದು ಮನಸಿ ಮಾಡಿದ್ದಾರೆ.
ರಾಜ್ಯ ಸರಕಾರ ಹೊರಡಿಸಿರುವ ಪರಿಷ್ಕೃತ ಮಾರ್ಗಸೂಚಿ:
- ಈ ಬಾರಿ ಗಣೇಶ ಚತುರ್ಥಿಯನ್ನು ಸರಳವಾಗಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ, ತಮ್ಮ ಮನೆಗಳಲ್ಲಿ ಅಥವಾ ಸರಕಾರಿ, ಖಾಸಗಿ, ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಟ ಸಂಖ್ಯೆಯೊಂದಿಗೆ ಆಚರಿಸಬಹುದು.
2. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ 4 ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ 2 ಅಡಿ ಮೀರದಂತೆ ಪ್ರತಿಷ್ಠಾಪಿಸಬೇಕು.
3. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಗಣೇಶೋತ್ಸವ ಮಂಡಳಿ ಅಥವಾ ಸಮಿತಿಗಳು ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಕಡ್ಡಾಯ. ಒಂದು ವಾರ್ಡ್ ಅಥವಾ ಗ್ರಾಮಕ್ಕೆ ಒಂದೇ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮನವಿ.
4. ಸಾರ್ವಜನಿಕ ಗಣೇಶ ಮೂರ್ತಿ ಸ್ಥಾಪನೆಯ ಸ್ಥಳದಲ್ಲಿ 20 ಜನಕ್ಕೆ ಸೀಮಿತವಾದ ಆವರಣ ನಿರ್ಮಿಸಬೇಕು. ಒಂದೇ ಬಾರಿಗೆ 20ಕ್ಕಿಂತ ಹೆಚ್ಚು ಭಕ್ತರು ಅಲ್ಲಿ ಸೇರದಂತೆ ಗಮನವಹಿಸಬೇಕು.
5. ಗಣೇಶೋತ್ಸವ ಸಂದರ್ಭದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ, ನೃತ್ಯ ಸೇರಿ ಯಾವುದೇ ಮನರಂಜನಾ ಕಾರ್ಯಕ್ರಮ ಆಯೋಜನೆಗೆ ಅವಕಾಶವಿಲ್ಲ.
6. ಗಣೇಶ ಮೂರ್ತಿ ತರುವಾಗ ಅಥವಾ ವಿಸರ್ಜಿಸುವಾಗ ಯಾವುದೇ ಮೆರವಣಿಗೆ ಮಾಡುವಂತಿಲ್ಲ. ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
7. ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸವೇಕು.
8. ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಈಗಾಗಲೇ ಸ್ಥಳೀಯ ಆಡಳಿತ ಅಥವಾ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಗುರುತಿಸಲಾದ ಅಥವಾ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಮೊಬೈಲ್ ಟ್ಯಾಂಕ್‌ಗಳಲ್ಲಿ, ಕೃತಕ ವಿಸರ್ಜನಾ ಟ್ಯಾಂಕರ್‌ಗಳಲ್ಲಿ ವಿಸರ್ಜನೆ ಮಾಡಬೇಕು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?