Featured
ಕೊರೊನಾ ಟೆಸ್ಟಿಂಗ್ ರೇಟ್ ಮತ್ತಷ್ಟು ಕಡಿಮೆ- 500 ರೂಪಾಯಿಗೆ ಸರ್ಕಾರದಿಂದ ಕೋವಿಡ್19 ಟೆಸ್ಟ್
![](https://risingkannada.com/wp-content/uploads/2020/08/COROA-TEST.jpg)
ರೈಸಿಂಗ್ ಕನ್ನಡ:
ಬೆಂಗಳೂರು:
ಕೊರೊನಾ ಪರೀಕ್ಷಾ ದರದ ಮೇಲೆ ಸಾಕಷ್ಟು ಟೀಕೆಗಳು ಕೇಳಿಬಂದಿದ್ದವು. ಕೊರೊನಾ ಟೆಸ್ಟಿಂಗ್ ಕಡುಬಡವರಿಗೆ ಕೈಗೆಟುಕದ ಹುಳಿ ದ್ರಾಕ್ಷಿ ಅಂತ ಟೀಕಿಸಲಾಗುತ್ತಿತ್ತು. ಆದ್ರೆ ರಾಜ್ಯ ಸರ್ಕಾರ ಕೊರೋನಾ ಪರೀಕ್ಷಾ ದರವನ್ನು ಮತ್ತಷ್ಟು ಕಡಿಮೆ ಮಾಡುವ ನಿರ್ಧಾರ ಕೈಗೊಂಡಿದೆ.
ವಿಧಾನಸೌಧದಲ್ಲಿ ನಡೆದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸರ್ಕಾರಿ ಆಶ್ಪತ್ರೆಗಳಿಂಗ ಖಾಸಗಿ ಪ್ರಯೋಗಾಲಗಳಿಗೆ ರೆಫರ್ ಮಾಡುವ ಸೋಂಕಿತರ RTPCR (ಗಂಟಲ ದ್ರವ ಪರೀಕ್ಷೆ)ದರವನ್ನು ರೂ.2 ಸಾವಿರದಿಂದ ರೂ.1,500ಕ್ಕೆ ಇಳಿಕೆ ಮಾಡಲಾಗಿದೆ. ಅಂತೆಯೇ ನೇರವಾಗಿ ಖಾಸಗಿ ಪ್ರಯೋಗಾಲಯಗಳಿಗೆ ಹೋಗಿ ಪರೀಕ್ಷೆ ಮಾಡಿಸಿಕೊಂಡವರಿಗೆ 3 ಸಾವಿರ ದರ ವಿಧಿಸಲಾಗುತ್ತಿತ್ತು. ಈ ದರವನ್ನು ರೂಪಾಯಿ 500ಕ್ಕೆ ಇಳಿಕೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.
ಬೆಂಗಳೂರಿನ ಕೆ.ಸಿಜನರಲ್ ಆಸ್ಪತ್ರೆಯಲ್ಲಿ 115 ಐಸಿಯು ಹಾಸಿಗೆ ಆರಂಭಿಸಲು ರೂ.12 ಕೋಟಿ ಮೊತ್ತದ ಉಪಕರಣ ಖರೀದಿ ಮಾಡಲು ಕೂಡ ನಿರ್ಧರಿಸಲಾಗಿದೆ. ಕರ್ನಾಟಕದಲ್ಲಿ ಸ್ಟಿರೋಲಜಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು, ಪ್ರಸ್ತುತ 18 ಸಾವಿರ ಜನಕ್ಕೆ ಸ್ಟಿರೋಲಜಿ ಪರೀಕ್ಷೆ ಮಾಡಲಾಗುವುದು. ಇದಕ್ಕಾಗಿ ರೂ.1.90 ಕೋಟಿ ವೆಚ್ಚವಾಗಲಿದೆ. 18 ಸಾವಿರ ಆ್ಯಂಟಿಬಾಡಿ ಪರೀಕ್ಷೆ ಕೂಡ ಮಾಡಲಾಗುತ್ತಿದೆ. ಇಮ್ಯುನಾಲಜಿ ವಿಷಯದಲ್ಲಿ ಸಂಶೋಧನೆ ಮಾಡಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದಿದ್ದಾರೆ.
![](https://risingkannada.com/wp-content/uploads/2020/08/SIDDARAMA-1024x460.jpg)
You may like
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್