Featured
ರಾಜ್ಯದಲ್ಲಿ ಕೊರೊನಾ ನಿಲ್ಲದ ಅಬ್ಬರ: 9,280 ಕೇಸ್: 116 ಬಲಿ

ರೈಸಿಂಗ್ ಕನ್ನಡ:
ಬೆಂಗಳೂರು:
ರಾಜ್ಯದಲ್ಲಿ ಕೊರೊನಾ ಅಬ್ಬರ ನಿಲ್ಲುವಂತೆ ಕಾಣುತ್ತಿಲ್ಲ ಕಳೆದ 24 ಗಂಟೆಯಲ್ಲಿ 9ಸಾವಿರಕ್ಕೂ ಹೆಚ್ಚು ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದೆ.
ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಕಳೆದ 24 ಗಂಟೆಯಲ್ಲಿ 9,280 ಹೊಸ ಕೊರೊನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,79,486ಕ್ಕೆ ಏರಿದೆ.
ಇನ್ನು ಸಾವನ ಪ್ರಮಾಣದಲ್ಲೂ ಕೊರೊನಾ ರಣಕೇಕೆ ಮುಂದುವರೆಸಿದೆ.ಶುಕ್ರವಾರ 116 ಮಂದಿ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೋವಿಡ್ 19ಗೆ ಬಲಿಯಾದವರ ಸಂಖ್ಯೆ 6,170ಕ್ಕೆ ಏರಿದೆ.
ಜಾಹೀರಾತು
ಕೊರೊನಾದಿಂದ ಚೇತರಿಸಿಕೊಂಡು ಶುಕ್ರವಾರ 6,161 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಡಿಸ್ಚಾರ್ಜ್ ಆದವರ ಸಂಖ್ಯೆ 2,74,196ಕ್ಕೆ ಏರಿದೆ.
ರಾಜಧಾನಿ ಬೆಂಗಳೂರಿನಲ್ಲಿ 2,963 ಹೊಸ ಕೊರೊನಾ ಕೇಸ್ ಪತ್ತೆಯಾಗಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1,41,664ಕ್ಕೆ ಏರಿದೆ. 25 ಮಂದಿ ಕೊರೊನಾಗೆ ಬಲಿಯಾಗಿದ್ದು ಮಹಾಮಾರಿಗೆ ಬಲಿಯಾದವರ ಸಂಖ್ಯೆ 2,091ಕ್ಕೆ ಏರಿದೆ. 41,646 ಸಕ್ರಿಯ ಪ್ರಕರಣಗಳಿವೆ. ಶುಕ್ರವಾರ 1,732 ಮಂದಿ ಡಿಸ್ಚಾರ್ಜ್ ಆಗಿದ್ದು 97,926 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?