Featured
ರಾಜ್ಯದಲ್ಲಿ ದಾಖಲೆಯ 8,580 ಕೇಸ್, 5 ಸಾವಿರ ಗಡಿ ದಾಟಿದ ಕೋವಿಡ್ ಸಾವು, 7,249 ಮಂದಿ ಡಿಸ್ಚಾರ್ಜ್

ರೈಸಿಂಗ್ ಕನ್ನಡ:
ಬೆಂಗಳೂರು:
ಹೆಮ್ಮಾರಿ ಕೊರೊನಾ ರಾಜ್ಯದಲ್ಲಿ ಅಬ್ಬರಿಸಿದ್ದು ರಾಜ್ಯದ್ಯಂತ ದಾಖಲಯೆ 8 ಸಾವಿರಕ್ಕೂ ಹೆಚ್ಚು ಹೊಸ ಸೋಂಕಿನ ಪ್ರಕರಣಗಳು ಪತ್ತೆಯಾಗಿದೆ.
ಬುಧವಾರ ರಾಜ್ಯದಲ್ಲಿ ದಾಖಲೆಯ 8,580 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಹೊಸ ಸೋಂಕಿತರ ಸಂಖ್ಯೆ 3,00,406ಕ್ಕೆ ಏರಿದೆ.
ಬುಧವಾರ ರಾಜ್ಯದಲ್ಲಿ 133 ಮಂದಿ ಕೋವಿಡ್ 19ಗೆ ಬಲಿಯಾಗಿದ್ದಾರೆ. ಇದುವರೆಗೂ ರಾಜ್ಯದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 5,091ಕ್ಕೆ ಏರಿದೆ.
ರಾಜ್ಯದಲ್ಲಿ 83,608 ಸಕ್ರಿಯ ಪ್ರಕರಣಗಳಿವೆ. ಬುಧವಾರ 7,249 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೂ 2,11,688 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

ಬುಧವಾರ ಬೆಂಗಳೂರಿನಲ್ಲಿ ದಾಖಲೆಯ 3,284 ಹೊಸ ಕೊರೊನಾ ಕೇಸ್ ಪತ್ತೆಯಾಗಿದೆ. ನಗರದಲ್ಲಿ 1,15,371 ಕ್ಕೆ ಏರಿದೆ.
31 ಮಂದಿ ಕ್ರೂರಿ ಹೊಡೆತಕ್ಕೆ ಬಲಿಯಾಗಿದ್ದು ನಗರದಲ್ಲಿ ಸಾವಿನ ಸಂಖ್ಯೆ 1,786ಕ್ಕೆ ಏರಿದೆ. ಬೆಂಗಳೂರಿನಲ್ಲಿ 36,053 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಬುಧವಾರ 2,630 ಮಂದಿ ಡಿಸ್ಚಾರ್ಜ್ ಆಗಿದ್ದು 77,531ಕ್ಕೆ ಏರಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?