Featured
ಕಿಚ್ಚನ ಹುಟ್ಟುಹಬ್ಬ:ಅಭಿಮಾನಿಗಳ್ಯಾರು ನಮ್ಮ ಮನೆಗೆ ಬರಬೇಡಿ: ಸುದೀಪ್
![](https://risingkannada.com/wp-content/uploads/2020/09/sudeep-3.jpg)
ರೈಸಿಂಗ್ ಕನ್ನಡ :
ತುಮಕೂರು:
ಕನ್ನಡ ಚಿತ್ರರಂಗದ ನಾಯಕ ನಟ ಕಿಚ್ಚ ಸುದೀಪ್ ಅವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ತುಮಕೂರಿನ ಶ್ರೀಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಟ ಸುದೀಪ್ ಅವರು, ಕೊರೊನಾ ಸಂಕಷ್ಟದ ಸಮಯದಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಹೀಗಾಗಿ ಅಭಿಮಾನಿಗಳ್ಯಾರು ನಾಳೆ ಬೆಂಗಳೂರಿಗೆ ಅಥವಾ ನಮ್ಮ ಮನೆ ಬಳಿಗೆ ಬರಬಾರದು ಎಂದು ಮನವಿ ಮಾಡಿದರು.
![](https://risingkannada.com/wp-content/uploads/2020/09/suddepp-4.jpg)
ಮುಂದಿನ ದಿನಗಳಲ್ಲಿ ಒಳ್ಳೆಯ ಕಾಲ ಬರುತ್ತದೆ. ಆಗ ಎಂದಿನಂತೆ ಸಂಭ್ರಮದಿಂದ ಆಚರಣೆ ಮಾಡಿಕೊಳ್ಳೋಣ. ಇಂದಿನ ಕ್ಲಿಷ್ಟಕರ ಪರಿಸ್ಥಿತಿಯನ್ನು ಅರ್ಥೈಸಿಕೊಂಡು ಯಾರೂ ಸಹ ಬೆಂಗಳೂರಿಗೆ ಬರಬಾರದು ಎಂದರು.
ಚಲನಚಿತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ನಾನು ಸಿನಿಮಾ ರಂಗಕ್ಕೆ ಬರುವ ಮೊದಲಿನಿಂದಲೂ ಪರಿಚಿತರು ಮತ್ತು ಸ್ನೇಹಿತರು. ಹಾಗಾಗಿ ಅವರೊಂದಿಗೆ ಮಠಕ್ಕೆ ಬಂದಿರುವ ಬಗ್ಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?