Featured
ಕಿಚ್ಚ ಸುದೀಪ್ ಅಭಿಮಾನಿ ಮೇಲೆ ವಿನಯ್ ಗುರೂಜಿ ಶಿಷ್ಯರ ಹಲ್ಲೆ: ಇಷ್ಟಕ್ಕೂ ಆಗಿದ್ದೇನು..?
![](https://risingkannada.com/wp-content/uploads/2019/10/images-54.jpeg)
ಉಡುಪಿ : ನಟ ಕಿಚ್ಚ ಸುದೀಪ್ ಅಭಿಮಾನಿ ಮೇಲೆ ಹತ್ತಕ್ಕೂ ಹೆಚ್ಚು ಯುವಕರು ಹಲ್ಲೆ ನಡೆಸಿದ್ದಾರೆ. ಕುಂದಾಪುರದ ಚಿಕನ್‌ಸಾಲ್ ರೋಡ್ ನಿವಾಸಿ ಗುರುರಾಜ್ ಪುತ್ರನ್, ಸಂತೋಷ, ಕಸಬಾ ಗ್ರಾಮದ ಪ್ರದೀಪ್, ರವಿರಾಜ್ ಸೇರಿ ಹಲವರು ಮಂದಿ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿರೋ ನಾಲ್ವರು ಆರೋಪಿಗಳನ್ನ ಕುಂದಾಪುರ ಪೊಲೀಸರು ಬಂಧಿಸಿದ್ದು, ಉಳಿದವರಿಗಾಗಿ ಶೋಧ ನಡೆಸಿದ್ದಾರೆ.
ಬ್ರಹ್ಮಾವರದ ಕೋಟತಟ್ಟು ಬಾರಿಕೆರೆ ನಿವಾಸಿ ರತ್ನಾಕರ್ ಪೂಜಾರಿ ಹಲ್ಲೆಗೆ ಒಳಗಾದ ನಟ ಸುದೀಪ್ ಅಭಿಮಾನಿ. ಈ ಹಿಂದೆ ವಿನಯ್ ಗುರೂಜಿ ಅವರು ನಟ ಸುದೀಪ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದು, ಇದನ್ನು ವಿರೋಧಿಸಿ ಸಾಮಾಜಿಕ ಜಾಲತಾಣದಲ್ಲಿ ಬಂದ ಸಂದೇಶವನ್ನು ರತ್ನಾಕರ್ ತಮ್ಮ ಫೇಸ್‌ಬುಕ್‌ನಲ್ಲಿ ಶೇರ್ ಮಾಡಿದ್ದರು. ಇದರಿಂದ ಕೋಪಗೊಂಡಿದ್ದ ಹತ್ತು ಮಂದಿ ಆರೋಪಿಗಳು ಅಕ್ಟೋಬರ್ 13ರಂದು ಕುಂದಾಪುರ ಸಂಗಮ್ ಶಾಲೆ ಬಳಿ ರತ್ನಾಕರ್ ಮೇಲೆ ಹಲ್ಲೆ ನಡೆಸಿದ್ರು. ನಮ್ಮ ವಿನಯ್ ಗುರೂಜಿ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನ ಮಾಡುತ್ತಿಯಾ’ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ವೇಳೆ ಬೈಕ್‌ನ ಬಂಪರ್‌ಗೆ ಅಳವಡಿಸುವ ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿದ್ದರು.
![](https://risingkannada.com/wp-content/uploads/2019/10/IMG-20191015-WA0001-768x1024.jpg)
ಸದ್ಯ ನಾಲ್ವರು ಆರೋಪಿಗಳನ್ನ ಬಂಧಿಸಿದ್ದು ಉಳಿದ ಆರೋಪಿಗಳ ಬಂಧನಕ್ಕೆ 2 ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣವನ್ನು ಜವಾಬ್ದಾರಿಯುತ, ವಿವೇಚನಾತ್ಮಕವಾಗಿ ಬಳಸುವ ಮೂಲಕ ಇಂತಹ ಘಟನೆಗಳು ನಡೆಯದಂತೆ ಸಹಕರಿಸುವಂತೆ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?