Uncategorized
ಬೀದರ್ನಲ್ಲಿ ಭಾರೀ ಮಳೆ: ಬೆಳೆ ಹಾನಿ ಪ್ರದೇಶಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಭೇಟಿ
![](https://risingkannada.com/wp-content/uploads/2020/10/Bidar-Ishwar-Khandre-1.jpg)
ರೈಸಿಂಗ್ ಕನ್ನಡ:
ಬೀದರ್:
ಮಳೆಯಿಂದಾಗಿ ಬೆಳೆ ಹಾನಿಯಾದ ಪ್ರದೇಶಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಳೆದ ಮೂರು ನಾಲ್ಕು ದಿನಗಳಿಂದ ಜಿಲ್ಲೆಯಾದ್ಯಂತ ಭಾರಿ ಮಳೆಸುರಿದಿದೆ. ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿಯ ಕಾರಂಜ ಜಲಾಶಯ ಭರ್ತಿಯಾಗಿದ್ದು, ಹತ್ತು ಸಾವಿರ ಕ್ಯೂಸೆಕ್ಸ್ ನೀರು ಹೊರ ಬಿಡಲಾಗಿದೆ. ಇತ್ತ ಮಹಾರಾಷ್ಟ್ರದಲ್ಲೂ ಭಾರಿ ಮಳೆಯಾದ ಹಿನ್ನಲೆಯಲ್ಲಿ ಮಾಂಜ್ರಾ ನದಿಯಿಂದಲೂ ನೀರು ಹೊರ ಬಿಡಲಾಗಿದೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಭಾಲ್ಕಿ ಸುತ್ತ ಮುತ್ತಲು ಲಕ್ಷಾಂತರ ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿವೆ.
![](https://risingkannada.com/wp-content/uploads/2020/10/bidar-ishwar-khandre-2.jpg)
ತೊಗರಿ,ಸೋಯಾ,ಬೆಳೆದ ಪ್ರದೇಶ ಗಳಲ್ಲಿ ನೀರು ನುಗ್ಗಿದ್ದು ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದ್ದು, ರೈತರು ಮತ್ತೆ ಕಣ್ಣೀರು ಹಾಕಿದ್ದಾರೆ. ಭಾಲ್ಕಿ ತಾಲೂಕಿನ ಭಾತಂಬ್ರ,ಸಾಯಗಾಂವ, ಖುದಂಪೂರ ಗ್ರಾಮಗಳಲ್ಲಿ ರೈತರ ಹೊಲಗಳಿಗೆ ಭೇಟಿ ನೀಡಿ ಬೆಳೆ ಹಾನಿ ವೀಕ್ಷಣೆ ಮಾಡಿದರು.
ಖುದಂಪೂರ ಗ್ರಾಮದ ಬಳಿ ಹರಿಯುತ್ತಿರುವ ಕಾರಂಜ ಜಲಾಶಯದ ಸೇತುವೆ ಅಪಾಯ ಮಟ್ಟದಲ್ಲಿ ಹರಿಯುತ್ತಿದ್ದು, ಕಿರಿದಾದ ಸೇತುವೆ ಮೇಲಿಂದ ಪ್ರಯಾಣಿಕರು ಬಿದ್ದು ಸಾವನ್ನಪಿದ್ದ ಘಟನೆ ಗಳು ವರದಿಯಾದ ಹಿನ್ನಲೆ ಖುದಂಪೂರ ಗ್ರಾಮದ ಬಳಿಯ ಸೇತುವೆ ವೀಕ್ಷಣೆ ಮಾಡಿದರು.
ಸದ್ಯ ನೀರು ನಿರಂತರವಾಗಿ ಹೆಚ್ಚುತ್ತಿದ್ದು, ಭಾಲ್ಕಿ, ಸಾಯಗಾಂ ರಸ್ತೆ ಸಂಪರ್ಕಕ್ಕೆ ಅಡಚಣೆಯಾಗುತ್ತಿರುವ ಹಿನ್ನಲೆ,ಸ್ಥಳದಲ್ಲೆ ಲೋಕೊಪಯೋಗಿ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ನಡೆಸಿ ಸೇತುವೆ ಮೇಲ್ದರ್ಜೆಗೆ ಎರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?