Featured
ಬೆಳಗ್ಗೆ 10 ಗಂಟೆವರೆಗೂ ಮನೆಯಿಂದ ಹೊರ ಬರ್ಬೇಡಿ..! ಸಂಜೆ 6 ಗಂಟೆಯೊಳಗೆ ಮನೆ ಸೇರ್ಕೊಂಡುಬಿಡಿ..! – ಇಲ್ಲಾಂದ್ರೆ, ಅಷ್ಟೆ ನಿಮ್ ಕಥೆ..!
ರೈಸಿಂಗ್ ಕನ್ನಡ :
ಶಿವಮೊಗ್ಗ :
ಶಿವಮೊಗ್ಗದಲ್ಲಿ ಕರೋನಾ ನಿಯಂತ್ರಣದ ಕ್ರಮವಾಗಿ ಸಂಜೆ 6ಗಂಟೆ ಬಳಿಕ ಅವಶ್ಯಕ ಸೇವೆಗಳನ್ನು ಹೊರತುಪಡಿಸಿ ಇತರ ವ್ಯಾಪಾರ ವಹಿವಾಟುಗಳನ್ನು ನಿರ್ಬಂಧಿಸಲಾಗಿದ್ದು, ಸಾರ್ವಜನಿಕರು 6ಗಂಟೆಯ ಬಳಿಕ ರಸ್ತೆಗೆ ಇಳಿಯಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡಿರುವ ಎಲ್ಲಾ ಕ್ರಮಗಳಿಗೆ ಸಾರ್ವಜನಿಕರು ಇದುವರೆಗೆ ಸಹಕರಿಸಿದ್ದಾರೆ. ಆದರೆ ಕೆಲವು ದಿನಗಳಿಂದ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಳವಳಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಜನರು ಒಂದೆಡೆ ಸೇರುವುದನ್ನು ತಪ್ಪಿಸುವ ಉದ್ದೇಶದಿಂದ ಎಲ್ಲರ ಸಲಹೆಯ ಪ್ರಕಾರ ಶಿವಮೊಗ್ಗದಲ್ಲಿ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲೆಡೆ ರಾತ್ರಿ 8ರಿಂದ ಕಫ್ರ್ಯೂ ಜಾರಿಯಲ್ಲಿರಲಿದ್ದು, ಶಿವಮೊಗ್ಗದಲ್ಲಿ ಇದು ಸಂಜೆ 6ಗಂಟೆಯಿಂದ ಜಾರಿಯಾಗಲಿದೆ ಎಂದು ಹೇಳಿದರು.
ಯಾವುದೇ ಕಾರಣಕ್ಕೂ ಒತ್ತಾಯದ ಲಾಕ್‍ಡೌನ್ ಜಾರಿಗೊಳಿಸುವುದಿಲ್ಲ. ಆದರೆ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲು ಸೂಚಿಸಲಾಗಿದೆ ಎಂದರು.
ಸಲಹೆಗಳ ಮಹಾಪೂರ :
ಸಭೆಯಲ್ಲಿ ಒಟ್ಟು 42ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿ ಸಲಹೆಗಳನ್ನು ನೀಡಿದರು. ಸರ್ಕಾರ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಮದುವೆ, ಅಂತ್ಯಸಂಸ್ಕಾರಗಳಲ್ಲಿ ಮಾರ್ಗಸೂಚಿ ಉಲ್ಲಂಘನೆ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು. ಎಲ್ಲಾ ಸರ್ಕಾರಿ ಕಚೇರಿಗಳ ಪ್ರವೇಶ ದ್ವಾರದಲ್ಲಿ ಸ್ಯಾನಿಟೈಸರ್ ಇರಿಸಬೇಕು. ಖಾಸಗಿ ಬಸ್ ನಿಲ್ದಾಣದ ಶುಚಿತ್ವಕ್ಕೆ ಗಮನ ಹರಿಸಬೇಕು. ಹೊಟೇಲ್ ಮತ್ತು ಬೀದಿಬದಿ ತಿನಿಸು ವ್ಯಾಪಾರಸ್ಥರು ಒಮ್ಮೆ ಬಳಕೆ ಮಾಡುವ ಪ್ಲೇಟ್‍ಗಳನ್ನು ಕಡ್ಡಾಯವಾಗಿ ಇರಿಸಬೇಕು. ಹೊರ ರಾಜ್ಯಗಳಿಂದ ಆಗಮಿಸುವವರಿಗೆ ಕಡಿವಾಣ ಹಾಕಬೇಕು. ಕ್ವಾರೆಂಟೈನ್ ನಿಯಮಗಳನ್ನು ಸರಿಯಾಗಿ ಪಾಲಿಸುವಂತೆ ಖಾತ್ರಿಪಡಿಸಿಕೊಳ್ಳಬೇಕು ಎಂದು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಲಹೆಗಳನ್ನು ನೀಡಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮಾತನಾಡಿ, ಜಿಲ್ಲೆಯ ಜನತೆ ಕರೋನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳಿಗೆ ಎಲ್ಲಾ ರೀತಿಯ ಸಹಕಾರ ನೀಡಿದ್ದಾರೆ. ಇದೀಗ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದರೂ, ಸಂಪೂರ್ಣ ಲಾಕ್‍ಡೌನ್ ಕಾರ್ಯಸಾಧುವಲ್ಲ. ಆದರೆ ಸಾರ್ವಜನಿಕರು ವೈಯಕ್ತಿಕ ಶಿಸ್ತನ್ನು ಪಾಲಿಸುವ ಮೂಲಕ ಕರೋನಾ ನಿಯಂತ್ರಣ ಮಾಡಲು ಸಾಧ್ಯವಿದೆ ಎಂದರು.
ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ. ಶಾಂತರಾಜು, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಮತ್ತಿತರರು ಉಪಸ್ಥಿತರಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?