Featured
ಇಂಧನ ಇಲಾಖೆ ಕರ್ಮಕಾಂಡ : ಕುಮಾರಸ್ವಾಮಿ ಕೆಂಡ
ಬೆಂಗಳೂರು | ಗೃಹಜ್ಯೋತಿ ಯೋಜನೆಯ ಬಗ್ಗೆ ಹೇಳುವುದೇ ಬೇಡ ಎನಿಸುತ್ತದೆ. ಏಕೆಂದರೆ, ಇಂಧನ ಇಲಾಖೆಯನ್ನು ಮುನ್ನಡೆಸುತ್ತಿರುವ ಸಚಿವರಾದ ಜಾರ್ಜ್ ಅವರಿಗೆ ಈ ಕಾರ್ಯಕ್ರಮ ಅರ್ಥ ಆಗಿಲ್ಲ. ಅವರು ತಾಳಮೇಳ ಇಲ್ಲದ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಇಲಾಖೆಯ ಬಗ್ಗೆ ಸಂಪೂರ್ಣ ಮಾಹಿತಿ ಅವರಿಗೆ ಇಲ್ಲ, ಯಾಕೆ ಅಧಿಕಾರಿಗಳು ಅವರಿಗೆ ಮಾಹಿತಿ ನೀಡುತ್ತಿಲ್ಲವೇ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.
ಗೃಹಲಕ್ಷ್ಮಿ, ಗೃಹಜ್ಯೋತಿ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಅತೀವ ಕುತೂಹಲ, ನಿರೀಕ್ಷೆ ಹುಟ್ಟು ಹಾಕಲಾಗಿತ್ತು. ಕೊನೆಪಕ್ಷ ಆ ಇಲಾಖೆಗಳನ್ನು ಮುನ್ನಡೆಸುವ ಇಬ್ಬರೂ ಸಚಿವರಿಗೆ ಈ ಕಾರ್ಯಕ್ರಮಗಳ ಬಗ್ಗೆ ಖಾತರಿ, ಸ್ಪಷ್ಟತೆ ಇಲ್ಲ ಎನ್ನುವುದು ಅವರ ಹೇಳಿಕೆಗಳಿಂದ ಗೊತ್ತಾಗುತ್ತದೆ. ಚುನಾವಣೆ ಪೂರ್ವದಲ್ಲಿ ಏನು ಘೋಷಣೆ ಮಾಡಿದ್ದರು ಎನ್ನುವುದು ನನಗೆ ಮಾತ್ರವಲ್ಲ ಇಡೀ ರಾಜ್ಯದ ಜನತೆಗೆ ಗೊತ್ತಿದೆ. ಈಗ ನೋಡಿದರೆ ಸರಕಾರ ಸಬೂಬುಗಳ ಪಟ್ಟಿ ಮಾಡಿಕೊಂಡು ಕಾಲಹರಣ ಮಾಡುತ್ತಿದೆ, ಜನರ ನಂಬಿಕೆಯ ಹರಣ ಮಾಡುತ್ತಿದೆ ಎಂದು ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದರು.
ಇಂಧನ ಇಲಾಖೆಯಲ್ಲಿ ಏನೇನು ನಡೆಯುತ್ತಿದೆ, ನಡೆದಿದೆ ಎನ್ನುವ ಮಾಹಿತಿ ನನಗೂ ಇದೆ. ಹಿಂದೆ ಕಾಗೋಡು ತಿಮ್ಮಪ್ಪ ಅವರು ಸ್ಪೀಕರ್ ಆಗಿದ್ದರು. ಆಗ ಇಂಧನ ಇಲಾಖೆಯಲ್ಲಿ ನಡೆದ ಅಕ್ರಮಗಳ ತನಿಖೆಗೆ ಜಂಟಿ ಸದನ ಸಮಿತಿ ರಚನೆ ಮಾಡಲಾಯಿತು. ಮುಕ್ತ ಮಾರುಕಟ್ಟೆಯಲ್ಲಿ 2.30 ರೂಪಾಯಿಗೆ ಲಭ್ಯವಿದ್ದ ಸೋಲಾರ್ ವಿದ್ಯುತ್ತನ್ನು 9.50 ರೂಪಾಯಿ ಕೊಟ್ಟು ಖರೀದಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ವಿಚಿತ್ರವೆಂದರೆ, ಆ ಸದನ ಸಮಿತಿ ಕಥೆ ಏನಾಯಿತು ಎಂದರೆ ಕುರಿ ಕಾಯಲು ತೊಳವನ್ನೆ ಬಿಟ್ಟಂತೆ ಆಯಿತು. ಈಗ ನಾನು ಕೇಳುತ್ತೇನೆ, ತಾಕತ್ತು ಇದ್ದರೆ ಈಗ ಆ ಒಪ್ಪಂದವನ್ನು ರದ್ದು ಮಾಡಿ ಎಂದು ರಾಜ್ಯ ಸರಕಾರಕ್ಕೆ ಮಾಜಿ ಮುಖ್ಯಮಂತ್ರಿ ಅವರು ಸವಾಲು ಹಾಕಿದರು.
ಈ ಒಪ್ಪಂದದ ಬಗ್ಗೆ ಸಾಕಷ್ಟು ದೂರು ಬಂದ ಬೆನ್ನಲ್ಲೇ ಅಂದು ನಾನು ವಿಧಾನಸಭೆಯಲ್ಲಿ ಚರ್ಚೆ ಮಾಡಿದೆ. 25 ವರ್ಷಕ್ಕೆ ಅಗ್ರಿಮೆಂಟ್ ಮಾಡಿದ್ದು ಸರಿಯಲ್ಲ ಎಂದು ನಾನೇ ನೇರವಾಗಿ ಹೇಳಿದೆ. ಸದನ ಸಮಿತಿಗೂ ನಾನು ಹೇಳಿದ್ದೆ. ಆದರೆ ಅಲ್ಲಿಗೆ ತೋಳವನ್ನೇ ತಂದರೆ ಹೇಗೆ.. ಕುರಿ ಕಾಯೋಕೆ ತೋಳ ತಂದ ಹಾಗಾಯ್ತು ಅಷ್ಟೆ ಎಂದು ಅವರು ಹೇಳಿದರು
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?