Featured
ಅಯ್ಯೋ… ಇವಳೆಂತಾ ತಾಯಿ…? ಯಾಕೆ ಹೀಗ್ಮಾಡಿದೆ ಅಮ್ಮಾ..?
ರೈಸಿಂಗ್ ಕನ್ನಡ:
ಮಂಜುನಾಥ ತಳವಾರ, ಬಾಗಲಕೋಟೆ:
ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲ್ಲೂಕಿನ ಬಂಡಿಗಣಿ ಗ್ರಾಮದಲ್ಲಿ ನಡೆದಿದೆ. ಮೂವರು ಮಕ್ಕಳು ಸಾವಿಗೀಡಾಗಿದ್ದು, ತಾಯಿ ಆಸ್ಪತ್ರೆಗೆ ದಾಖಲಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ.
ಭಾಗೀರಥಿ ಚಿಕ್ಕಯ್ಯ ಮಠದ(28) ಮಹಲಿಂಗಪುರ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ತಾಯಿ. ಮಕ್ಕಳಾದ ಶಿವಾನಿ(13),ಶಂಕರ್(9),ಸುಹಾಸಿನಿ(7) ಮೃತ ದುರ್ದೈವಿಗಳು. ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ,ತಾಯಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು ಎಂಬ ಮಾಹಿತಿ ತಿಳಿದು ಬಂದಿದೆ. ತಾಯಿಯೇ ಮಕ್ಕಳಿಗೆ ವಿಷ ಹಾಕಿ ತಾನು ವಿಷ ಕುಡಿದಿರುವ ಬಗ್ಗೆ ತಿಳಿದು ಬಂದಿದ್ದು ಪ್ರಕರಣಕ್ಕೆ ನೈಜ ಕಾರಣ ತಿಳಿದು ಬಂದಿಲ್ಲ. ಬನಹಟ್ಟಿ ಪೊಲೀಸರಿಂದ ಪರಿಶೀಲನೆ ನಡೆದಿದ್ದು, ಮೂರು ವರ್ಷದ ಹಿಂದೆ ಭಾಗೀರಥಿ ಪತಿಯ ಕೊಲೆಯಾಗಿತ್ತು. ಮಠದ ಆಸ್ತಿ ವಿಚಾರವಾಗಿ ಬಾಗೀರಥಿಯ ಪತಿಯ ಕೊಲೆಯಾಗಿತ್ತು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?