Connect with us

ಟ್ರೆಂಡಿಂಗ್

ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡ್ತೀವಿ- ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅತ್ಯಂತ ಮಹತ್ವದ ಇಲಾಖೆಯಾಗಿದ್ದು, ರಾಜ್ಯಕ್ಕೆ ಹಾಗೂ ಸರಕಾರಕ್ಕೆಉತ್ತಮ ಹೆಸರು ತರುವ ದಿಸೆಯಲ್ಲಿ ಎಲ್ಲರೂ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ.

ಸಚಿವರಾದ ನಂತರ ಮೊದಲ ಬಾರಿಗೆ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಅವರು, ಜನರು ಬಹಳ ನಿರೀಕ್ಷೆ ಇಟ್ಟು ಕಾಂಗ್ರೆಸ್ ಸರಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವುದು ನಮ್ಮ ಕರ್ತವ್ಯ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅತ್ಯಂತ ಜವಾಬ್ದಾರಿ ಮತ್ತು ಸೂಕ್ಷ್ಮವಾದ ಇಲಾಖೆ ಕೂಡ ಹೌದು. ಇಲಾಖೆಯಲ್ಲಿ ಸಣ್ಣ ಲೋಪವನ್ನೂ ಸಹಿಸಲು ಸಾಧ್ಯವಿಲ್ಲ. ನಮ್ಮ ನಿರೀಕ್ಷೆ ಮತ್ತು ವೇಗಕ್ಕೆ ತಕ್ಕಂತೆ ಕೆಲಸ ನಿರ್ವಹಿಸಬೇಕು ಎಂದು ಸೂಚಿಸಿದರು.

ಹೊಸದಾಗಿ ಘೋಷಣೆಯಾಗಿರುವ ಗೃಹಲಕ್ಷ್ಮೀ ಸೇರಿದಂತೆ ಇಲಾಖೆಯ ಪ್ರತಿಯೊಂದು ಯೋಜನೆಗಳನ್ನೂ ಜನಸಾಮಾನ್ಯರಿಗೆ ಸಮರ್ಪಕವಾಗಿ ತಲುಪಸಬೇಕು. ಯಾವುದೇ ರೀತಿಯ ದೂರುಗಳಿಗೆ ಅವಕಾಶವಿರಬಾರದು. ಇಲಾಖೆ ಉತ್ತಮವಾಗಿ ಕೆಲಸ ನಿರ್ವಹಿಸಿದರೆ ಸರಕಾರಕ್ಕೂ ಒಳ್ಳೆಯ ಹೆಸರು ಬರುತ್ತದೆ. ಹಾಗಾಗಿ ಪ್ರತಿಯೊಬ್ಬರೂ ತಮ್ಮ ತಮ್ಮ ಜವಾಬ್ದಾರಿಗಳನ್ನು ಅರ್ಥಮಾಡಿಕೊಂಡು ಕೆಲಸ ಮಾಡಬೇಕು ಎಂದು ಹೆಬ್ಬಾಳಕರ್ ತಿಳಿಸಿದರು.

ಮುಂದಿನ ದಿನಗಳಲ್ಲಿ ವಿಸ್ತೃತವಾಗಿ ಇಲಾಖೆಗೆ ಸಂಬಂಧಿಸಿದ ಚರ್ಚೆ ನಡೆಸಲಾಗುವುದು. ಜೊತೆಗೆ ಪ್ರತಿ ಜಿಲ್ಲೆಗೂ ತೆರಳಿ ಪ್ರಗತಿ ಪರಿಶೀಲನೆ ನಡೆಸಲಾಗುವುದು. ಹಾಗಾಗಿ ಹೊಸ ಸರಕಾರದ ನಿರೀಕ್ಷೆಗೆ ತಕ್ಕಂತೆ ನಿಮ್ಮ ಕಾರ್ಯನಿರ್ವಹಣೆ ಇರಲಿ ಎಂದು ಅವರು ಹೇಳಿದರು.

ಇಲಾಖೆಯ ಕಾರ್ಯದರ್ಶಿ ಡಾ.ಎನ್.ಮಂಜುಳಾ, ನಿರ್ದೇಶಕಿ ಡಾ.ಕೆ.ಎನ್.ಅನುರಾಧಾ, ಮಕ್ಕಳ ರಕ್ಷಣಾ ನಿರ್ದೇಶಕ ಚಂದ್ರಕಾಂತ, ಮಹಿಳಾ ಆಯೋಗದ ಕಾರ್ಯದರ್ಶಿ ಕವಿತಾ ಮಣ್ಣಿಕೇರಿ, ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಪುಷ್ಪಲತಾ, ವಿಕಲಚೇತನರ ಇಲಾಖೆಯ ಜಂಟಿ ನಿರ್ದೇಶಕ ಶೇಷಪ್ಪ, ಬಾಲವಿಕಾಸ ಅಕಾಡೆಮಿ ಕಾರ್ಯದರ್ಶಿ ಭಾರತಿ ಶೆಟ್ಟರ್, ಬಾಲಭವನದ ಕಾರ್ಯದರ್ಶಿ ರಾಜಮೂರ್ತಿ, ಇಲಾಖೆಯ ಎಲ್ಲ ಜಂಟಿ ನಿರ್ದೇಶಕರು, ಉಪನಿರ್ದೇಶಕರು ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ