Connect with us

Featured

Lakshmi Hebbalkar | ನನಗೆ ಜಾತಿಯೇ ಇಲ್ಲ, ಮನುಷ್ಯತ್ವವೇ ನನ್ನ ಜಾತಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಎಲ್ಲೆ ಇದ್ದರೂ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಕೈ ಮುಗಿದು ಮುಂದಿನ ಕೆಲಸ ಆರಂಭಿಸುತ್ತೇನೆ. ಈ ಕ್ಷೇತ್ರಕ್ಕೆ ಒಳ್ಳೆಯ ಕೆಲಸ ತರುವುದೇ ನನ್ನ ಉದ್ದೇಶ. ಮೊದಲ ಬಾರಿಗೆ ಈ ಕ್ಷೇತ್ರದಿಂದ ಮಂತ್ರಿಯಾದಗಿದ್ದೇನೆ. ಈ ಸೌಭಾಗ್ಯಕ್ಕಾಗಿ ನಾನು ಎಲ್ಲರಿಗೂ ಕೃತಜ್ಞಳಾಗಿದ್ದೇನೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಾಳೇಕುಂದ್ರಿ ಕೆ ಎಚ್ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ಮಂದಿರದ ನೂತನ ಕಟ್ಟಡದ ನಿರ್ಮಾಣಕ್ಕಾಗಿ ಶನಿವಾರ ಕಾಲಂ ಪೂಜೆ ನೆರವೇರಿಸಿ, ಕಟ್ಟಡ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯದಲ್ಲಿ ಎಲ್ಲಿಯೇ ಹೋದರೂ ಭಾಷಣದ ಪೂರ್ವದಲ್ಲಿ ನನ್ನ ಕ್ಷೇತ್ರ, ನನ್ನ ಮತದಾರರು, ಸುಳೇಭಾವಿ ಮಹಾಲಕ್ಷ್ಮೀ, ಉಚಗಾಂವ ಮಳೇಕರಣಿ ದೇವಿಯನ್ನು ಸ್ಮರಿಸಿ ಭಾಷಣ ಮಾಡುತ್ತಿದ್ದೇನೆ. ಕ್ಷೇತ್ರದ ಜನರ ಆಶೀರ್ವಾದದಿಂದ ಇಂದು ರಾಜ್ಯದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಂದು ಕರೆಯುವಂತಾಗಿದೆ. ಮೊದಲು ನನಗೆ ನನ್ನ ಕ್ಷೇತ್ರ, ಆಮೇಲೆ ರಾಜ್ಯ. ದಿನ ಬೆಳಗಾದರೆ ಕ್ಷೇತ್ರಕ್ಕೆ ಎಷ್ಟು ಅನುದಾನ ತೆಗೆದುಕೊಂಡು ಹೋಗಲಿ, ಯಾವ ಇಲಾಖೆಯಿಂದ ತೆಗೆದುಕೊಂಡು ಹೋಗಲಿ ಎಂದು ಯೋಚಿಸುತ್ತೇನೆ ಎಂದು ಅವರು ಹೇಳಿದರು.

ಎಲ್ಲರ ಕೈಯಿಂದ ದೇವಸ್ಥಾನಗಳನ್ನು ಕಟ್ಟಲು ಸಾಧ್ಯವಿಲ್ಲ. ಅದಕ್ಕೆ ಪುಣ್ಯ ಮಾಡಿರಬೇಕು. ನನ್ನ ಹಿಂದಿನ ಜನ್ಮದ ಪುಣ್ಯವೋ ಗೊತ್ತಿಲ್ಲ, ಕ್ಷೇತ್ರದಲ್ಲಿ 103 ಮಂದಿರಗಳನ್ನು ಕಟ್ಟುವ ಅವಕಾಶ ಸಿಕ್ಕಿದೆ. ಕ್ಷೇತ್ರದ ಅಭಿವೃದ್ಧಿಯೇ ನನ್ನ ಹವ್ಯಾಸವಾಗಿದೆ, ಯಾವುದೇ ಸಮಾಜವಿರಲಿ, ಎಲ್ಲರನ್ನೂ ಸೇರಿಸಿಕೊಂಡು ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಮುನ್ನೆಡೆಸುತ್ತಿದ್ದೇನೆ. ನನಗೆ ಜಾತಿ ಅನ್ನುವುದಿಲ್ಲ, ಮನುಷ್ಯತ್ವವೇ ನನ್ನ ಜಾತಿ, ಹಾಗಾಗಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕನನ್ನಾಗಿ ಘೋಷಿಸಲಾಗಿದೆ. ಸಂಗೊಳ್ಳಿ ರಾಯಣ್ಣ, ಕಿತ್ತೂರು ಚನ್ನಮ್ಮ, ಅಂಬೇಡ್ಕರ್, ಮಹಾವೀರ ಎಲ್ಲರಿಗೂ ಜೈ ಎನ್ನುತ್ತೇನೆ. ನಾನು ಎಂದೂ ಅಭಿವೃದ್ಧಿಯಲ್ಲಿ ರಾಜಕಾರಣ ಮಾಡುವುದಿಲ್ಲ, ನೀವೂ ರಾಜಕಾರಣ ಮಾಡಬೇಡಿ. ನನ್ನ ಕೈಯಲ್ಲಿ ಎಷ್ಟು ದಿನ ಅಧಿಕಾರವಿರತ್ತೋ ಅಲ್ಲಿಯವರೆಗೆ ಅಭಿವೃದ್ಧಿ ಕೆಲಸಗಳು ಮುಂದುವರೆಯಲಿವೆ ಎಂದು ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯತ್ ಅಧ್ಯಕ್ಷೆ ನಮ್ರತಾ ಪ್ರ ಜಾಧವ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ನಾಗೇಶ ದೇಸಾಯಿ, ತಾಲೂಕ ಪಂಚಾಯತ್ ಮಾಜಿ ಅಧ್ಯಕ್ಷ ಶಂಕರಗೌಡ ಪಾಟೀಲ, ನಿಲೇಶ್ ಚಂದಗಡ್ಕರ್, ಕಲ್ಲಪ್ಪ ರಾಮಚನ್ನವರ, ಅಂಜನಾ ಬೆಳಗಾಂವ್ಕರ್, ರೇಣುಕಾ ಕರವಿನಕೊಪ್ಪ, ಪ್ರವೀಣ ಮುರಾರಿ, ಮಹಾದೇವಿ ರಾಮಚನ್ನವರ, ಸಂಜಯ ಬಿ. ಪಾಟೀಲ, ಡಾ. ಎನ್. ಎಚ್. ಅಸ್ಕಿ, ದಶರಥ ಚೌಬಾರಿ, ವಸಂತರಾವ ಜಾಧವ್, ಕಮಲವ್ವ ನಾಯಕ್ ಹಾಗೂ ಮಹಾಲಕ್ಷ್ಮೀ ದೇವಸ್ಥಾನ ಜೀರ್ಣೋದ್ಧಾರ ಕಮೀಟಿಯ ಸದಸ್ಯರು ಉಪಸ್ಥಿತರಿದ್ದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ