ರೈಸಿಂಗ್ ಕನ್ನಡ:
ಬೆಂಗಳೂರು:
ಪುನೀತ್ ರಾಜ್ ಕುಮಾರ್ ಅವರ ಪಿಆರ್ ಕೆ ಪ್ರೊಡಕ್ಷನ್ ನಲ್ಲಿ ನಿರ್ಮಾಣಗೊಂಡಿರುವ ಕನ್ನಡದ ಬಹುನಿರೀಕ್ಷಿತ ‘ಲಾʼ ಸಿನಿಮಾ ಜುಲೈ 17 ರಂದು ಅಮೆಜಾನ್ ಫ್ರೈಮ್ ನಲ್ಲಿ ಬಿಡುಗಡೆಯಾಗಲಿದೆ. ಕ್ರೈಂ ಥ್ರಿಲ್ಲರ್ ಕಥಾವಸ್ತು ಹೊಂದಿರುವ ಈ ಚಿತ್ರದಲ್ಲಿ ರಾಗಿಣಿ ಪ್ರಜ್ವಲ್ ನಂದಿನಿ ಪಾತ್ರದಲ್ಲಿ ಅಭಿನಯಿಸಿದ್ದಾರೆ.
ಈ ಸಿನಿಮಾದಲ್ಲಿ ಮಹಿಳೆಯರ ಮೇಲಿನ ಅನ್ಯಾಯ ಮತ್ತು ಅಪರಾಧದ ವಿರುದ್ದ ಧ್ವನಿ ಎತ್ತಲಾಗಿದೆ. ಅಶ್ವಿನಿ ಪನೀತ್ ರಾಜ್ ಕುಮಾರ್, ಎಂ. ಗೋವಿಂದ ‘ಲಾʼ ಸಿನಿಮಾ ನಿರ್ಮಾಣ ಮಾಡಿದ್ದಾರೆ. ರಘು ಸಮರ್ಥ ನಿರ್ದೇಶಿಸಿದ್ದಾರೆ. ರಾಗಿಣಿ ಪ್ರಜ್ವಲ್ ಈ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ್ದಾರೆ. ಮುಖ್ಯಮಂತ್ರಿ ಚಂದ್ರು, ಅಚ್ಯುತ್ ಕುಮಾರ್, ಸುಧಾರಾಣಿ, ಸಿರಿ ಪ್ರಹ್ಲಾದ್ ಮತ್ತಿತ್ತರರು ಪ್ರಮುಖ ಪಾತ್ರದ್ಲಲಿ ಅಭಿನಯಿಸಿದ್ದಾರೆ. ‘ಲಾ’ ಸಿನಿಮಾ ಸ್ಯಾಂಡಲ್ ವುಡ್ ನಿಂದ ಥಿಯೇಟರ್ ನಲ್ಲಿ ಬಿಡುಗಡೆಯಾಗುವ ಮೊದಲೇ ಡಿಜಿಟಲ್ ನಲ್ಲಿ ರಿಲೀಸ್ ಆಗುತ್ತಿರುವ ಮೊದಲ ಚಿತ್ರವಾಗಿದೆ. ಈ ಸಿನಿಮಾ ಅಮೆಜಾನ್ ಫ್ರೈಮ್ ವಿಡಿಯೋ ಮೂಲಕ ವಿಶ್ವದಾದ್ಯಂತ 200 ಕ್ಕೂ ಹೆಚ್ಚು ದೇಶಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ.
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್